12:48 PM Thursday8 - October 2026
ಬ್ರೇಕಿಂಗ್ ನ್ಯೂಸ್
ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ

ಇತ್ತೀಚಿನ ಸುದ್ದಿ

ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಅರೆಸ್ಟ್

04/02/2026, 15:49

ಕಾರವಾರ(reporterkarnataka.com): ಅನೈತಿಕ ಸಂಬಂಧದ ವಿಚಾರವಾಗಿ ನಡೆದ ಗಲಾಟೆಯೊಂದು ಭೀಕರ ಕೊಲೆಯಾಗಿ ಮಾರ್ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲ್ಲೂಕಿನ ಅವರಗುಪ್ಪ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್‌ ಜೊತೆಗಿನ ಅಕ್ರಮ ಸಂಬಂಧ ವಿಚಾರವೇ ಈ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಪೊಲೀಸ್ ಮಾಹಿತಿಯ ಪ್ರಕಾರ, ಸುಚಿತ್ರಾ ಎಂಬ ಮಹಿಳೆ ಜ್ಯೋತಿಷಿ ಕಮಲಾಕರ್ ಭಟ್ ಅವರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಈ ವಿಷಯವನ್ನು ಸುಚಿತ್ರಾ ಅವರ ಮಗಳು ಬಹಿರಂಗಪಡಿಸಿದ್ದರಿಂದ ಮನೆಯಲ್ಲಿ ತೀವ್ರ ಕಲಹ ಉಂಟಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಜಗಳ ಹಿಂಸಾತ್ಮಕವಾಗಿ ತಿರುಗಿ, ವಸಂತ ನಾಯಕ್ ಎಂಬ ಯುವಕನ ಸಾವಿಗೆ ಕಾರಣವಾಗಿದೆ.

ಘಟನೆಯ ಮಾಹಿತಿ ದೊರಕಿದ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ಆರಂಭಿಸಿದ್ದು, ಕಮಲಾಕರ್ ಭಟ್ ಸೇರಿದಂತೆ ಒಟ್ಟು 7 ಮಂದಿಯನ್ನು ಬಂಧಿಸಿದ್ದಾರೆ. ಆರೋಪಿಗಳು ಕೊಲೆಗೆ ಸಂಚು ರೂಪಿಸಿ ಗಲಾಟೆಯ ವೇಳೆ ವಸಂತ ನಾಯಕ್ ಮೇಲೆ ಹಲ್ಲೆ ನಡೆಸಿದ್ದರೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಈ ಘಟನೆ ಸ್ಥಳೀಯ ಪ್ರದೇಶದಲ್ಲಿ ಭಾರೀ ಆಘಾತ ಮೂಡಿಸಿದ್ದು, ಜ್ಯೋತಿಷಿಯಾಗಿ ಹೆಸರು ಮಾಡಿದ್ದ ಕಮಲಾಕರ್ ಭಟ್ ಬಂಧನ ಸುದ್ದಿ ಸಾರ್ವಜನಿಕರಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪೊಲೀಸರು ಮುಂದಿನ ತನಿಖೆಯನ್ನು ಚುರುಕುಗೊಳಿಸಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ.
ಈ ಪ್ರಕರಣದಲ್ಲಿ ಇನ್ನಷ್ಟು ವಿವರಗಳು ತನಿಖೆ ಮುಂದುವರೆದಂತೆ ಹೊರಬರುವ ನಿರೀಕ್ಷೆಯಿದೆ.

ಇತ್ತೀಚಿನ ಸುದ್ದಿ

ಜಾಹೀರಾತು