12:16 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ತಂದೆ ಅನಾರೋಗ್ಯ: ಬಿಜೆಪಿ ಫೈರ್ ಬ್ರಾಂಡ್ ನಾಯಕ ಅಣ್ಣಾಮಲೈ ರಾಜೀನಾಮೆ

04/02/2026, 16:01

ಚೆನ್ನೈ(Chenai reporterkarnataka.com): 2026ರ ಬಿಜೆಪಿಯ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 6 ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ಪಕ್ಷ ನೀಡಿರುವ ಮಧ್ಯೆಯೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮಾಜಿ ಐಪಿಎಸ್ ಅಧಿಕಾರಿ, ಬಿಜೆಪಿ ಫೈರ್ ಬ್ರಾಂಡ್, ಕೆ.ಅಣ್ಣಾಮಲೈ ನಡೆ ಪಕ್ಷಕ್ಕೆ ದೊಡ್ಡ ಶಾಕ್ ನೀಡಿದೆ. ಫೆಬ್ರವರಿ 3ರಂದು ಅಣ್ಣಾಮಲೈ ಅವರು ತಮ್ಮ ತಂದೆ ಅನಾರೋಗ್ಯ ಕಾರಣ ನೀಡಿ ತಮ್ಮಗೆ ನೀಡಿರುವ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿರುವುದು ಬಹಳಷ್ಟು ಅಚ್ಚರಿಗೆ ಕಾರಣವಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಕೆ.ಅಣ್ಣಾಮಲೈ ಸ್ಪಷ್ಟಣೆ ನೀಡಿದ್ದು, 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 6 ಕ್ಷೇತ್ರಗಳ ಉಸ್ತುವಾರಿ ಜವಾಬ್ದಾರಿಯನ್ನು ಪಕ್ಷ ನೀಡಿದೆ. ಆದರೆ ಈ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಇದಕ್ಕೆ ಮುಖ್ಯ ಕಾರಣ ನನ್ನ ತಂದೆಯ ಅನಾರೋಗ್ಯ. ಹೀಗಾಗಿ ತಂದೆಯ ಆರೈಕೆ, ಆರೋಗ್ಯ ಕಾಳಜಿ ಪ್ರಮುಖ ಆದ್ಯತೆಯಾಗಿರುವ ಕಾರಣ ಕೊಯಂಬತ್ತೂರಿನಲ್ಲಿ ಉಳಿಯಬೇಕಾಗಿದೆ. ಆದ್ದರಿಂದ ನನಗೆ ನೀಡಲಾಗಿದ್ದ 6 ಕ್ಷೇತ್ರಗಳಿಗೆ ಪ್ರವಾಸ ಮಾಡುವುದು, ಅಲ್ಲಿನ ಜವಾಬ್ದಾರಿಗಳನ್ನು ನಿರ್ವಹಿಸುವುದು ಅಸಾಧ್ಯವಾಗಿದೆ. ಈ ಕಾರಣದಿಂದ ರಾಜೀನಾಮೆ ನೀಡಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು