9:29 PM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಶಿಕಾರಿಪುರ: ಮನೆಯಲ್ಲೇ ತಯಾರಿಸಿದ್ದ 7 ನಾಡ ಬಂದೂಕು ವಶ; ಆರೋಪಿಯ ಬಂಧನ

06/02/2026, 21:22

ಶಿವಮೊಗ್ಗ(reporterkarnataka.com):ನಾಡ ಬಂದೂಕು ತಯಾರಿಸಿ ಮಾರಾಟಕ್ಕಾಗಿ ಮನೆಯಲ್ಲಿ ಇಟ್ಟುಕೊಂಡಿದ್ದ ಸಮೀಪದ ಶಿವಮೊಗ್ಗದ ಶಿಕಾರಿಪುರ ಸಮೀಪದ ಭದ್ರಾಪುರ ಗ್ರಾಮದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಲಕ್ಷ್ಮಣಪ್ಪ (67) ಬಂಧಿತ ಆರೋಪಿ. ಬಡಗಿ ವೃತ್ತಿ ಮಾಡುವ ಅವರು ಮನೆಯಲ್ಲಿ ನಾಡ ಬಂದೂಕು ತಯಾರಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಶೋಧ ನಡೆಸಿದಾಗ ಸಿದ್ಧವಾಗಿರುವ 7ಬಂದೂಕು, ಮರದಲ್ಲಿ ಸಿದ್ಧಪಡಿಸುತ್ತಿರುವ ಮೂರು ಆಕೃತಿ, ಕಬ್ಬಿಣದ ನಳಿಕೆ ಸೇರಿ ಹಲವು ಪರಿಕರ ವಶಕ್ಕೆ ಪಡೆದಿದ್ದಾರೆ. ಶಸ್ತ್ರಾಸ್ತ್ರ ತಿದ್ದುಪಡಿ ಅಧಿನಿಯಮ 2019ರ ಅನ್ವಯ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಡಿವೈಎಸ್‌ಪಿ ಕೆ.ಇ. ಕೇಶವ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಪಿಎಸ್‌ಐ ಎಚ್.ಶರತ್, ಸಿಬ್ಬಂದಿಯಾದ ಕೊಟ್ರೇಶಪ್ಪ, ಕೆ.ಪ್ರದೀಪ್, ನಾಗರಾಜ, ರವಿ ನಾಯ್ಕ, ರವಿಕುಮಾರ್ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು