11:09 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು ನಾಶ

07/02/2026, 19:28

ಬೆಂಗಳೂರು(reporterkarnataka.com): ಬೆಂಗಳೂರಿನಲ್ಲಿ ಅಬಕಾರಿ‌ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ಇಂದು ನಾಶಪಡಿಸಲಾಯಿತು.
ದಾಬಸ್‌ಪೇಟೆಯ KWWA‌ನಲ್ಲಿ ಬೆಂಗಳೂರು ಉತ್ತರ ವಿಭಾಗದ 1,2,3,4 ಅಬಕಾರಿ ಜಿಲ್ಲೆಗಳಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ 156 ಪ್ರಕರಣಗಳಲ್ಲಿ ಸುಮಾರು 650 ಕೆಜಿಯಷ್ಟು ಗಾಂಜಾ, 2.296 ಕೆಜಿ ಗಾಂಜಾ ಮಿಶ್ರಿತ ಚಾಕೋಲೆಟ್, 70 ಗ್ರಾಂ MDMA, 570 ಗ್ರಾಂ ಹಶೀಶ್ ಆಯಿಲ್, ಗಾಂಜಾ ಗಿಡಗಳು ಸೇರಿದಂತೆ ಹಲವು ರೀತಿಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿತ್ತು.
ಕಾನೂನಿನ ಕಣ್ಣುತಪ್ಪಿಸಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಮಾದಕ ವಸ್ತುಗಳನ್ನು ಅಬಕಾರಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ನ್ಯಾಯಾಲಯದ ಅನುಮತಿ ಮೇರೆಗೆ ಇಂದು ಮಾದಕ ವಸ್ತಗಳನ್ನು ನಾಶಪಡಿಸಲಾಗಿದೆ‌. ಈ ವೇಳೆ ಬಿಯುಡಿ 1 ಉಪ ಆಯುಕ್ತ ಮೌಸಸ್ ಸ್ಯಾಮುಯೆಲ್, ಬಿಯುಡಿ 2 ಉಪ ಆಯುಕ್ತ ಕ್ಯಾಪ್ಟನ್ ಅಜಿತ್ ಕುಮಾರ್, ಬಿಯುಡಿ 3 ಉಪ ಆಯುಕ್ತ ಮುರುಳಿ, ಬಿಯುಡಿ 4 ಉಪ ಆಯುಕ್ತ ಶಿವಲಿಂಗಪ್ಪ ಬನಹಟ್ಟಿ ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಇಲಾಖೆಯ‌ ಸಿಬ್ಬಂದಿ ಉಪಸ್ಥಿತರಿದ್ದರು.


ನಾವು ಅಧಿಕಾರಕ್ಕೆ ಬಂದ ನಂತರ ಡ್ರಗ್ಸ್‌ಗೆ ಕಡಿವಾಣ ಹಾಕಬೇಕು ಎಂದು ನಮ್ಮ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿತ್ತು. ಯುವಕರ ಆರೋಗ್ಯ, ಭವಿಷ್ಯದ ದೃಷ್ಟಿಯಿಂದ ಡ್ರಗ್ಸ್‌ಗೆ ಕಡಿವಾಣ ಹಾಕ್ಬೇಕು. ಎನ್‌ಡಿಪಿಎಸ್ ಕಾಯ್ದೆ ಸಮರ್ಪಕವಾಗಿ, ಮತ್ತಷ್ಟು ಪರಿಣಾಮವಾಗಿ ಜಾರಿಗೊಳಿಸಬೇಕು ಎಂದು ಸೂಚಿಸಲಾಗಿದೆ ಎಂದು ಅಬಕಾರಿ ಹಾಗೂ ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪೂರ ಅವರು ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು