2:50 AM Friday3 - July 2026
ಬ್ರೇಕಿಂಗ್ ನ್ಯೂಸ್
Raichuru | ಮಸ್ಕಿ: ಅತಿಥಿ ಶಿಕ್ಷಕರ ಭದ್ರತೆ ಸೇರಿದಂತೆ ವಿವಿಧ ಬೇಡಿಕೆ ಆಗ್ರಹಿಸಿ… ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜೂಜಾಟ: 28 ಜನರ ಬಂಧನ;… ಮತ ಪರಿಷ್ಕರಣೆ ವಿಚಾರದಲ್ಲಿ ಅಧಿಕಾರಿಗಳ ಕಳ್ಳಾಟ..!?: ಮನೆ ಮನೆಗೆ ಹೋಗುವ ಬದಲಾಗಿ ಜನರನ್ನೇ… ಮುಂದಿನ ಪೀಳಿಗೆಗೆ ಹಿಂಸೆ, ದ್ವೇಷ, ಸುಳ್ಳಿನ ಭಾರತವನ್ನು ಕೊಡಬಾರದು: ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ಕಾಸು ಬೇಕಾದ್ರೆ ನನ್ನ ಹತ್ರ ಕೇಳೋ: ಲಂಚಕೋರ ಅಧಿಕಾರಿಗೆ ಕುಣಿಗಲ್ ಶಾಸಕ ಡಾ.… Bangalore | ವೇಶ್ಯಾವಾಟಿಕೆ:12 ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಿಸಿಬಿ ಪೊಲೀಸರ ವಶಕ್ಕೆ ಶಾಸಕ ಪ್ರದೀಪ್ ಈಶ್ವರ್ ಮೇಲೆ ಹಲ್ಲೆ ಯತ್ನ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ… ಬೆಂಗಳೂರು | ನಕಲಿ ಪೊಲೀಸ್ ಅಸಲಿ ಆಟ: ಯೂನಿಫಾರ್ಮ್ ಧರಿಸಿ ಬೈಕ್ ಸವಾರರಿಂದ… Belagavi | ವಿವಾಹಿತೆಯೊಂದಿಗೆ ಪರಾರಿ: ಯುವಕನ ಮನೆ ಧ್ವಂಸ; ಕುರಿಗಳನ್ನೂ ಹೊತ್ತೊಯ್ದು ಭರ್ಜರಿ… ಮತಾಂತರ ಆರೋಪ: ಕುಶಾಲನಗರದಲ್ಲಿ ಸ್ವಯಂಪ್ರೇರಿತ ಬಂದ್; ಎಲ್ಲವೂ ಸ್ತಬ್ದ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆ 3ನೇ ವಾರ್ಷಿಕೋತ್ಸವ; ಗ್ರಾಹಕರ ಸಭೆ

10/02/2026, 14:44

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯ 3ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಳದಂಗಡಿ ಶಾಖೆಯ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಅಳದಂಗಡಿ ಶಾಖೆಯಲ್ಲಿ ಜರುಗಿತು.
ಈ ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ತುಳುಪುಲೆ, ಶ್ರೀ ರಾಜು ಪೂಜಾರಿ , ಶ್ರೀ ವಿಶ್ವನಾಥ್ ಕುದ್ಯಾಡಿ, ಶ್ರೀ ಪೂರ್ನೇಶ್, ಶ್ರೀ ರತ್ನಾಕರ ಕೋಟ್ಯಾನ್, ಶ್ರೀ ಅಜುರುದ್ದೀನ್, ಶ್ರೀ ದಯಾಕರ ರೈ, ಶ್ರೀಮತಿ ಜಲಜ ವಿ. ಸಾಲ್ಯಾನ್, ಶ್ರೀಮತಿ ಶೋಭ ಹಾಗೂ ಶ್ರೀ ನೀಲಯ್ಯ ಗೌಡ ಅವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.
ಸಂಘದ ಸದಸ್ಯರಾದ ಶ್ರೀ ಮನೋಹರ ಶೆಟ್ಟಿರವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ಸಿಬ್ಬಂದಿಗಳು ಗುಣಮಟ್ಟದ ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿದ್ದಾರೆ. ಇನ್ನೂ ಹೆಚ್ಚಿನ ಸೇವೆಯನ್ನು ನೀಡುವಂತಾಗಲಿ” ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಸದಸ್ಯರಾದ ಶ್ರೀ ನೀಲಯ್ಯ ಗೌಡ ರವರು ಮಾತನಾಡಿ “ಶಾಖೆ ಆರಂಭದಿಂದಲು ಉತ್ತಮ ವ್ಯವಹಾರ ನಡೆಸುತ್ತಿದ್ದು, ಸಂಘದ ಸದಸ್ಯರ ಬೇಡಿಕೆಗಳನ್ನು ಈಡೇರಿಸುತ್ತಿದೆ” ಎಂದು ಶ್ಲಾಘಿಸಿದರು.
ಸದಸ್ಯರಾದ ಶ್ರೀಮತಿ ಸುರೇಖ ರವರು ಮಾತನಾಡಿ “ ಉಳಿತಾಯದ ದೃಷ್ಟಿಯಿಂದ ಆವರ್ತನ ಖಾತೆಯಲ್ಲಿ ಹಣವನ್ನು ಉಳಿತಾಯ ಮಾಡಿದ್ದು, ಇದರಿಂದ ನನಗೆ ತುಂಬಾ ಪ್ರಯೋಜನವಾಗಿದೆ” ಎಂದು ಸಂಘದ ಉಳಿತಾಯ ಯೋಜನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಮಾತನಾಡಿ, “ಗ್ರಾಹಕರ ಪ್ರೋತ್ಸಾಹದಿಂದ ಸಂಘವು ಇಂದಿಗೆ 33ನೇ ಶಾಖೆಯನ್ನು ಹೊಂದಲು ಸಾಧ್ಯವಾಗಿದೆ. ಸಂಘದ ಪಾಲುಬಂಡವಾಳವು 22.5 ಲಕ್ಷದಿಂದ ಪ್ರಾರಂಭವಾಗಿ ಇಂದು 300 ಕೋಟಿ ಠೇವಣಿಯಾಗಲು ಗ್ರಾಹಕರೇ ಕಾರಣ ಎಂದು ಪ್ರಶಂಸಿದರು. ಸಂಸ್ಥೆಯು ಕೇವಲ ಬ್ಯಾಂಕಿಂಗ್ ಮಾತ್ರವಲ್ಲದೆ ಜೀವ ವಿಮೆ, ಆರೋಗ್ಯ ವಿಮೆ, ಮತ್ತು ವಾಹನ ವಿಮಾ ಸೌಲಭ್ಯಗಳನ್ನು ಹೊಂದಿರುತ್ತದೆ. ಆರೋಗ್ಯ ಶಿಬಿರವನ್ನು ಸಹ ನಮ್ಮ ಸಂಘ ಹಮ್ಮಿಕೊಂಡು ಬರುತ್ತಿದೆ. ಮುಂದಿನ ದಿನಗಳಲ್ಲಿ ಅಳದಂಗಡಿ ಶಾಖೆಯಲ್ಲೂ ಆರೋಗ್ಯ ಶಿಬಿರವನ್ನು ನಡೆಸಲ್ಲಿದ್ದೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರಾದ ಶ್ರೀ ಗೋಪಾಲ್ ಎಂ. ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ಉಪಸ್ಥಿತರಿದ್ದರು.
ಸಂಘದ ಅಳದಂಗಡಿ ಶಾಖೆಯ ಶಾಖಾಧಿಕಾರಿಯಾದ ಶ್ರೀಮತಿ ಕಾವ್ಯಶ್ರೀ ಎಸ್. ಸ್ವಾಗತಿಸಿದರು. ಶಾಖೆಯ ಸಿಬ್ಬಂದಿಯಾದ ಶ್ರೀಮತಿ ಲೋಶಿತ ಅವರು ವಂದಿಸಿದರು. ಶಾಖೆಯ ಸಿಬ್ಬಂದಿಯಾದ ಶ್ರೀಮತಿ ಸ್ವಾತಿ ಎಸ್. ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು