1:14 AM Monday10 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ

10/02/2026, 21:18

ದಾವಣಗೆರೆ(reporterkarnataka.com): ಬೆಲೆ ಏರಿಕೆ ವಿರುದ್ದ ದನಿ ಎತ್ತಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯರನ್ನು ಬಂಧನ ಮಾಡಿದ್ದಾರೆ. ಇದರಿಂದ ಸಿದ್ದರಾಮಯ್ಯ ಎಷ್ಟು ಪುಕ್ಕಲ, ಹೇಡಿ ಸಿಎಂ ಎಂದು ಗೊತ್ತಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.
ದಾವಣಗೆರೆಯ ಹರಿಹರದ ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ಮಾತನಾಡಿದ ಅವರು, ಒಂದು ವರ್ಷದಲ್ಲಿ ಎರಡು ಬಾರಿ ಮೆಟ್ರೋ ದರ ಏರಿಕೆ ಮಾಡಿದ್ದಾರೆ. ಜನರ ತಾಳ್ಮೆಯನ್ನು ತಡೆಯಲು ಆಗುವುದಿಲ್ಲ ಎಂದು ತೇಜಸ್ವಿ ಸೂರ್ಯ ಹೋರಾಟ ಮಾಡಿದ್ದಾರೆ. ಹೋರಾಟ ಮಾಡಿ ದರ ಏರಿಕೆಯನ್ನು ತಡೆ ಹಿಡಿದಿದ್ದಾರೆ. ಮೆಟ್ರೋ ಅಭಿವೃದ್ಧಿಗೆ ಕೇಂದ್ರ ಸರ್ಕಾರಿಂದ ಅನುದಾನ ಬರುತ್ತಿದೆ. ಆದರೆ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಮೆಟ್ರೋ ಗೆ ಅನುದಾನ ನೀಡದೆ ದರ ಏರಿಕೆ ಮಾಡಿದ್ದಾರೆ. ಇದರ ವಿರುದ್ದ ಸಂಸದ ತೇಜಸ್ವಿ ಸೂರ್ಯ ಹೋರಾಟ ಮಾಡಿ ನ್ಯಾಯ ಕೊಡಿಸಿದ್ದಾರೆ ಎಂದರು.
ಈಗ ಖಜಾನೆ ಖಾಲಿಯಾಗಿದೆ ಎಂದು ಖಾಲಿ ಡಬ್ಬಿ ಹಿಡಿದು ತೇಜಸ್ವಿ ಸೂರ್ಯ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ್ದಾರೆ. ಅವರನ್ನು ಬಂಧನ ಮಾಡುವ ಕೆಲಸವನ್ನು ಈ ಸರ್ಕಾರ ಮಾಡಿದೆ. ಅವರ ವೈಫಲ್ಯ ತೋರಿಸಿದವರನ್ನು ಯಾವ ರೀತಿ ಹತ್ತಿಕ್ಕುತ್ತಾರೆ ಎನ್ನುವುದಕ್ಕೆ ಇದೇ ಉದಾಹರಣೆ. ತೇಜಸ್ವಿ ಸೂರ್ಯ ಸಮಸ್ತ ಬೆಂಗಳೂರಿಗರ ಪರವಾಗಿ ಹೋರಾಟ ಮಾಡಿದ್ದಾರೆ ಎಂದರು.
ಸಿದ್ದರಾಮಯ್ಯನವರು 17 ಬಜೆಟ್ ಮಂಡನೆ ಮಾಡಿ ವಿಶ್ವ ಪ್ರಖ್ಯಾತ ಅರ್ಥಶಾಸ್ತ್ರಜ್ಞರು ಆಗಿದ್ದಾರೆ. ಖಜಾನೆ ಖಾಲಿಯಾಗಿ ಅಭಿವೃದ್ಧಿ ಕೆಲಸಕ್ಕೆ ಹಣ ಕೊಡದ ಪರಿಸ್ಥಿತಿ ಇದೆ. ಬರೀ ಸಭೆ ಸಮಾರಂಭಗಳಲ್ಲಿ ಏಕವಚನದ ಉಡಾಫೆ ಮಾತನಾಡುವುದು ಬಿಟ್ಟು ಏನು ಗೊತ್ತಿಲ್ಲ. 17 ಬಜೆಟ್ ಮಂಡನೆ ಮಾಡಿದ ನಿಮಗೆ ಅರ್ಥಿಕ ವ್ಯವಸ್ಥೆಯ ಗಂಧಗಾಳಿ ಗೊತ್ತಿಲ್ಲ. ಒಬ್ಬ ಯುವ ಸಂಸದ ನಿಮ್ಮನ್ನು ಪ್ರಶ್ನೆ ಮಾಡಿದರೆ ಅರೆಸ್ಟ್ ಮಾಡಿಸುತ್ತೀರಿ. ಕರ್ನಾಟಕ ಕಂಡ ಅತ್ಯಂತ ಪುಕ್ಕಲ ಹೇಡಿ ಮುಖ್ಯಮಂತ್ರಿ ನೀವು ಎಂದು ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು