8:21 PM Tuesday23 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ ಬ್ಯಾಂಕ್ ಗಳಿಗೆ ಕೇಂದ್ರ ವಿತ್ತ ಸಚಿವೆ ಆದೇಶ

12/02/2026, 19:07

ನವದೆಹಲಿ(reporterkarnataka.com): ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ ಅವರ ನೇತೃತ್ವದ ನಿಯೋಗಕ್ಕೆ ಮಾರ್ಗದರ್ಶಕರಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ವಿತ್ತ ಸಚಿವರಿಗೆ SARFAESI ಎಂಬ ಕರಾಳ ಕಾಯ್ದೆಯ ಕುರಿತು ಮನಮುಟ್ಟುವಂತೆ ವಿವರಿಸಿದರು.

ಶೇ. 95 ಕ್ಕೂ ಹೆಚ್ಚು ಭಾಗ ಸಣ್ಣ-ಅತಿ ಸಣ್ಣ ಬೆಳೆಗಾರರನ್ನು ಹೊಂದಿರುವ ಕಾಫಿ ಕೃಷಿ ಕ್ಷೇತ್ರದ ಸಾಲಗಾರರಿಗೆ ಮಾರಕವಾಗಿ ಪರಿಣಮಿಸಿರುವ ಸರ್ಫಾಸಿ ಕಾಯ್ದೆಯ ದುಷ್ಪರಿಣಾಮ ಹಾಗೂ ಕೆಲವು ಬ್ಯಾಂಕರ್ ಗಳು ಹಾಗೂ ಮಧ್ಯವರ್ತಿಗಳು ಈ ಕಾಯ್ದೆಯ ದುರುಪಯೋಗ ಮಾಡುತ್ತಿರುವ ಕುರಿತು ಸವಿವರವಾಗಿ ಮನದಟ್ಟು ಮಾಡಲಾಯಿತು.
ಈ ಬಗ್ಗೆ ಅತ್ಯಂತ ಸಹಾನುಭೂತಿ ಹಾಗೂ ಸಕಾರಾತ್ಮಕವಾಗಿ ಸ್ಪಂದಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ರವರು ತಾವು ಕಾಫಿ ಕೃಷಿ ಸಾಲದ ವಸೂಲಾತಿಗೆ SARFAESI ಕಾಯ್ದೆ ಬಳಕೆ ಬಗ್ಗೆ ವಿವರವಾಗಿ ಪರಿಶೀಲಿಸುವುದಾಗಿ ತಿಳಿಸಿರುತ್ತಾರೆ. ಅತ್ಯಂತ ಪ್ರಮುಖವಾಗಿ ಈ ಕೂಡಲೇ ಜಾರಿಗೆ ಬರುವಂತೆ SARFA ESl ಅಡಿಯಲ್ಲಿ e-auction (ಆನ್ ಲೈನ್ ಹರಾಜು) ಸ್ಥಗಿತಗೊಳಿಸುವಂತೆ ಬ್ಯಾಂಕ್ ಗಳಿಗೆ ಸೂಚಿಸಲು ಅಧಿಕಾರಿಗಳಿಗೆ ಆದೇಶ ನೀಡಿರುತ್ತಾರೆ.
ಸಚಿವರನ್ನು ಭೇಟಿಯಾದ ನಿಯೋಗದಲ್ಲಿ ಸಂಸದರಾದ ಡಾ. ಸಿ.ಎನ್. ಮಂಜುನಾಥ್. ಶ್ರೀ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಶ್ರೀ ಮಲ್ಲೇಶ್ ಇದ್ದರು.
ಫೆಬ್ರವರಿ 9,10 ಹಾಗೂ 11 ರಂದು ಕರ್ನಾಟಕ ಗೊವರ್ಸ್ ಫೆಡರೇಶನ್ (ಕೆಜಿಫ್) ಅಧ್ಯಕ್ಷರಾದ ಹಳಸೆ ಶಿವಣ್ಣನವರ ನೇತೃತ್ವದ ನಿಯೋಗ ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಹೆಚ್. ಡಿ. ಕುಮಾರಸ್ವಾಮಿ, ಭೂಪೇಂದ್ರ ಯಾದವ್,ಮಾಜಿ ಪ್ರಧಾನಿಗಳಾದ ಹೆಚ್. ಡಿ. ದೇವೇಗೌಡರು. ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಡಾ. ಸಿ.ಎನ್ ಮಂಜುನಾಥ್ ಹಾಗೂ ಹಲವು ಸಚಿವಾಲಯದ ಉನ್ನತ ಅಧಿಕಾರಿಗಳನ್ನು ಭೇಟಿ ಮಾಡಿ ಬೆಳೆಗಾರರ ಸಮಸ್ಯೆಗಳ ಬಗ್ಗೆ ಮನದಟ್ಟು ಮಾಡಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು