8:28 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಂಗಳೂರು ಸಿಸಿಬಿ ಕಾರ್ಯಾಚರಣೆ: 11 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ; 3 ಮಂದಿ ಬಂಧನ

13/02/2026, 21:54

ಮಂಗಳೂರು(reporterkarnataka.com): ಬೆಂಗಳೂರು ನಗರದಿಂದ ಮಾದಕವಸ್ತು ಎಂಡಿಎಂಎ ಅನ್ನು ಖರೀದಿಸಿಕೊಂಡು ಮಾರಾಟ ಮಾಡಲು ಯತ್ನಿಸಿದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 11 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ.
ಬಂಧಿತರನ್ನು ಉಳ್ಳಾಲ ಬಸ್ತಿಪಡ್ಪು ನಿವಾಸಿ ಮುಸ್ತಫಾ ಸೀದಿಯಬ್ಬ( 34),ಉಳ್ಳಾಲ ಕೋಡಿ,ಡಿ ರೋಡ್ ನ ಮೈಯದ್ದಿ (28) ಹಾಗೂ ಉಳ್ಳಾಲ ಮುಕ್ಕಚೇರಿಯ ಮೊಹಮ್ಮದ್ ಶಿಫಾನ್ (28) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ಅನ್ನು ಖರೀದಿಸಿಕೊಂಡು ಅದನ್ನು ಮಂಗಳೂರು ನಗರದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಬೂದು ಬಣ್ಣದ ಸ್ವೀಪ್ಟ್ ಕಾರಿನಲ್ಲಿ ಉಳ್ಳಾಲ ತಾಲೂಕಿನ ತಲಪಾಡಿಯ ಪರಿಸರದಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಫೆ. 12ರಂದು ಎಂಡಿಎಂಎ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಕಾರನ್ನು ಪತ್ತೆ ಹಚ್ಚಿ ವಶಪಡಿಸಿಕೊಂಡಿದ್ದಾರೆ.
ಆರೋಪಿಗಳಿಂದ 11,90,000 ರೂ. ಮೌಲ್ಯದ 118.13 ಗ್ರಾಂ ತೂಕದ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ, ಮೊಬೈಲ್ ಫೋನ್-4, KA-19-MQ-3420 ನೇ ನಂಬ್ರದ ಬೂದು ಬಣ್ಣದ ಸ್ವೀಪ್ಟ್ ಕಾರು ಸಹಿತ ಒಟ್ಟು ರೂ. 17,95,000/- ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿ ಮುಸ್ತಫಾ ಸೀದಿಯಬ್ಬ ಎಂಬಾತನ ಮೇಲೆ ಈ ಹಿಂದೆ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ದನ ಕಳ್ಳತನ ಪ್ರಕರಣ ಮತ್ತು ಮೈಯದ್ದಿ ಎಂಬಾತನ ಮೇಲೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ದಾಖಲಾಗಿರುತ್ತದೆ. ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು