8:12 AM Saturday3 - October 2026
ಬ್ರೇಕಿಂಗ್ ನ್ಯೂಸ್
ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3… ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು, ಇನ್ನೋರ್ವನಿಗೆ ಗಾಯ

14/02/2026, 22:08

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡ ಘಟನೆ ನಡೆದಿದೆ.
ಸೋಮವಾರಪೇಟೆ ಸಮೀಪದ ಕೋತಿ ಗ್ರಾಮದ ಸಿ.ಜೆ. ಸಂದೀಪ್ (41) ಮೃತಪಟ್ಟ ದುರ್ದೈವಿ ಎಂದು ತಿಳಿದು ಬಂದಿದೆ.
ಕಾಫಿ ತೋಟದಲ್ಲಿ ಕೆಲಸ ಮುಗಿಸಿ ದೊಡ್ಡ ತೋಳೂರು ಗ್ರಾಮದ ಪ್ರಸನ್ನ ಅವರನ್ನು ಅವರ ಮನೆಗೆ ಬಿಡಲು ಸಂದೀಪ್ ತಮ್ಮ ಬೈಕಿನಲ್ಲಿ ತೆರಳುತ್ತಿದ್ದರು.
ಈ ವೇಳೆ ತೋಳೂರು-ಶೆಟ್ಟಳ್ಳಿ ಸಮೀಪದ ಇನಕನಹಳ್ಳಿ ಬಳಿ ಮುಖ್ಯರಸ್ತೆ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ನಿಯಂತ್ರಣ ತಪ್ಪಿ ಅಪ್ಪಳಿಸಿದೆ. ಡಿಕ್ಕಿ ಹೊಡೆದ ಪರಿಣಾಮ ಸಂದೀಪ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೈಕ್ ಹಿಂಬದಿ ಸವಾರ ಪ್ರಸನ್ನ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಘಟನೆ ಕುರಿತು ಸಂಬಂಧಿಸಿದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು