2:00 PM Sunday15 - February 2026
ಬ್ರೇಕಿಂಗ್ ನ್ಯೂಸ್
ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,… ನಟ ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿ ಅಭಿಮಾನಿಯಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ: 100 ಕಿಮೀ. ನಡಿಗೆ Kodagu | ಮಡಿಕೇರಿ ನಗರಸಭೆ: ಬಯಲು ಪ್ರದೇಶದಲ್ಲಿ ಮಲ ಮೂತ್ರ ವಿಸರ್ಜನೆ ನಿಷೇಧ ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ!

ಇತ್ತೀಚಿನ ಸುದ್ದಿ

ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ ಪ್ರತಿಭಟನೆ

15/02/2026, 13:58

ಮೈಸೂರು(reporterkarnataka.com): ಮೈಸೂರಿನ ಕುವೆಂಪು ಪಾರ್ಕ್‌ ನಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯಾಧ್ಯಕ್ಷರಾದ ಕುರುಬುರ್ ಶಾಂತಕುಮಾರ್ ನೇತೃತ್ವದಲ್ಲಿ ತೋಳಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಧಿಕ್ಕಾರ ಕೂಗಿ ಪ್ರತಿಭಟನೆ ನಡೆಸಲಾಯಿತು.
ಕೇಂದ್ರ ಸರ್ಕಾರಕ್ಕೆ ಧಿಕ್ಕಾರ, ದೇಶದ ರೈತರ ಮರಣ ಶಾಸನ ಬರೆದಿರುವ ಒಪ್ಪಂದಕ್ಕೆ ಧಿಕ್ಕಾರ ಎಂದು ಕೂಗಲಾಯಿತು. ಇದೇ ಸಂದರ್ಭದಲ್ಲಿ ಮಾತನಾಡಿದ ಕುರುಬೂರು ಶಾಂತಕುಮಾರ್ ಕೇಂದ್ರ ಸರ್ಕಾರ ಇತ್ತೀಚೆಗೆ ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಮಾಡುವ ಮೂಲಕ ಭಾರತ ದೇಶದ ರೈತರ ಮರಣ ಶಾಸನ ಬರೆದಿದ್ದಾರೆ ಕೃಷಿ ಉತ್ಪನ್ನಗಳು ಹೈನುಗಾರಿಕೆ ಉತ್ಪನ್ನಗಳು ಅಮೆರಿಕದಿಂದ ಭಾರತದ ದೇಶಕ್ಕೆ ಆಮದಾಗಲು ಯಾವುದೇ ಸುಂಕವಿಲ್ಲದೆ ವಿನಾಯಿತಿ ನೀಡಿರುವುದು ದೇಶದ ಕೃಷಿ ಉತ್ಪನ್ನಗಳಿಗೆ ಬೇಡಿಕೆ ಇಲ್ಲದಂತಾಗಿ ಉತ್ಪನ್ನಗಳಿಗೆ ಬೆಲೆ ಇಲ್ಲದಂತಾಗುತ್ತದೆ ಇದರಿಂದ ರೈತರು ಸಾಲಗಾರರಾಗುತ್ತಾರೆ ರೈತರ ಆತ್ಮಹತ್ಯೆಗಳು ಹೆಚ್ಚುತ್ತವೆ.
ಅಮೆರಿಕಾ ದೇಶದ ರೈತರು ದೊಡ್ಡ ದೊಡ್ಡ ರೈತರು ಇವರಿಗೆ ಶೇಕಡ 200ರಷ್ಟು ಸಹಾಯಧನ ದೊರೆಯುತ್ತದೆ. ಭಾರತ ದೇಶದ ರೈತರು ಸಣ್ಣ ಸಣ್ಣ ರೈತರು ಕೇವಲ 3% ನಷ್ಟು ಸಹಾಯಧನ ಸಿಗುತ್ತದೆ ಇಂಥ ಸಂದರ್ಭದಲ್ಲಿ ಪೈಪೋಟಿ ನಡೆಸಿ ಕೃಷಿಕರು ಬೆಳೆದ ಬೆಳೆ ಮಾರಲು ಕಷ್ಟವಾಗುತ್ತದೆ ಬೀದಿಗೆ ಸುರಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಅದೇ ರೀತಿ ದೇಶದ ಎಲ್ಲ ವರ್ಗದ ವ್ಯಾಪಾರಸ್ಥರು ಹಾಗೂ ಜನರ ಮೇಲೆ ದುಷ್ಪರಿಣಾಮ ಉಂಟು ಮಾಡುತ್ತದೆ. ಬ್ರಿಟಿಷರು ವ್ಯಾಪಾರ ಮಾಡಲು ಭಾರತಕ್ಕೆ ಬಂದು ದೇಶವನ್ನು ಆಕ್ರಮಿಸಿಕೊಂಡು ಆಳಿದರು ಆದರೆ ಈಗ ನಮ್ಮ ಪ್ರತಿನಿಧಿಗಳೇ ಅಮೆರಿಕ ದೇಶಕ್ಕೆ ದಾಸರಾಗಿ ರೈತರನ್ನು ಮಾರಾಟ ಮಾಡಲು ಹೊರಟಿದ್ದಾರೆ ಇದು ದುರ್ದೈವದ ಸಂಗತಿ ಕೇಂದ್ರ ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಒಪ್ಪಂದದಿಂದ ಹೊರಗೆ ಬರಬೇಕು ಇಲ್ಲದಿದ್ದರೆ ದೇಶದ ರೈತರ ತೀವ್ರ ಆಕ್ರೋಶಕ್ಕೆ ಗುರಿಯಾಗಬೇಕಾಗುತ್ತದೆ. ಸಂಸದರು ಕೇಂದ್ರ ಮಂತ್ರಿಗಳಿಗೆ ಘೇರಾವ್ ಮಾಡಬೇಕಾಗುತ್ತದೆ ಎಂದು ಎಚ್ಚರಿಸುತ್ತಿದ್ದೇವೆ
ಭಾರತ- ಅಮೆರಿಕ ಮುಕ್ತ ವ್ಯಾಪಾರ ಒಪ್ಪಂದಕೆ
(FTA) ರೈತರ ದಿಕ್ಕಾರ
ರೈತರ ಮರಣ ಶಾಸನ ಬರೆದಿರುವ ಕೇಂದ್ರ ಸರ್ಕಾರಕ್ಕೆ ಧಿಕ್ಕಾರ.
ಅಮೆರಿಕ ದೇಶದ ಕೃಷಿ ಉತ್ಪನ್ನಗಳಿಗೆ ಆಮದು ಸುಂಕ ವಿನಾಯಿತಿ ದೇಶದ ರೈತರ ಸರ್ವನಾಶ ತಪ್ಪಿಸಲಿ ಎಂದು ಘೋಷಣೆ ಕೂಗಿದರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಒಪ್ಪಂದ ಪತ್ರ ಸುಡುವ ಚಳುವಳಿ ನಡೆಸಿ ಆಕ್ರೋಸ ವ್ಯಕ್ತಪಡಿಸಿದರು ಪ್ರತಿಭಟನೆಯಲ್ಲಿ ರೈತ ಮುಖಂಡರುಗಳಾದ
ತಾಲೂಕ ಅಧ್ಯಕ್ಷ ಲಕ್ಷ್ಮಿಪುರ ವೆಂಕಟೇಶ್. ಜಿಲ್ಲಾ ಸಂಘಟನೆ ಕಾರ್ಯದರ್ಶಿ ವರಕೂಡು ನಾಗೇಶ್. ಜಿಲ್ಲಾ ಉಪಾಧ್ಯಕ್ಷ ಮಾರ್ಬಳ್ಳಿ ನೀಲಕಂಠಪ್ಪ, ದೊಡ್ಡಕಾಟೂರು ಮಹದೇವಸ್ವಾಮಿ, ಕಾಟೂರು ಶಿವಣ್ಣ, ವಾಜಮಂಗಳ ಮಹಾದೇವು, ಗಿರೀಶ್, ಮಹೇಶ್, ಪಿ.ನಾಗೇಂದ್ರ, ಪ್ರಭಾಕರ್, ಶಿವಣ್ಣ, ಚಿಕ್ಕಳ್ಳಿ ನಾಗರಾಜು, ಪಾಳ್ಯಸ್ವಾಮಿ, ಚಿನ್ನ ನಾಯಕ, ಕಮಲಮ್ಮ, ಸೇರಿದಂತೆ ಇನ್ನೂ 50 ಕ್ಕೂ ಹೆಚ್ಚು ರೈತರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು