7:26 AM Sunday19 - April 2026
ಬ್ರೇಕಿಂಗ್ ನ್ಯೂಸ್
ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ ಹಾಸನದಲ್ಲಿ ಮೂರು ದಿನಗಳ ಆಪರೇಷನ್‌ ಯಶಸ್ವಿ: ನರಹಂತಕ ಕಾಡಾನೆ ಸೆರೆ ಬಳ್ಳಾರಿ | ಪ್ಯಾರಚೂಟ್ ತರಬೇತಿ ವೇಳೆ ತಾಂತ್ರಿಕ ದೋಷ: 50 ಅಡಿ ಎತ್ತರದಿಂದ… ತೀರ್ಥಹಳ್ಳಿಯಲ್ಲಿ ಕುಡಿಯುವ ನೀರಿನ ಬಾವಿಗೆ ವಿಷ: ಪ್ರಕರಣ ದಾಖಲು Udupi | ಕಾಪು ಬಳಿ ಭೀಕರ ಲಾರಿ-ಕಾರು ಅಪಘಾತ: ಓರ್ವ ಸಾವು; ಇಬ್ಬರು… ಮಂತ್ರಾಲಯದ ಬಳಿ ಭೀಕರ ಅಪಘಾತ: 8 ಮಂದಿ ಸಾವು, ತರೀಕೆರೆ ತಾಲೂಕಿನ ಇಬ್ಬರು… ಶಾಸಕರು ಸಚಿವ ಸ್ಥಾನ ಕೇಳೋದು ತಪ್ಪಲ್ಲ, ಸಂಪುಟ ಪುನರ್ ರಚನೆ ಆಗಲಿ: ಆರೋಗ್ಯ… ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ 17 ಮಂದಿಗೆ ಜೀವಾವಧಿ… ಪುತ್ರನ ಮೇಲಿನ ಹಲ್ಲೆ ಕೇಸ್ ಕೈಬಿಡಿ: ಅನಂತ ಕುಮಾರ್ ಹೆಗಡೆ ಮನವಿಗೆ ಸ್ಪಂದಿಸಿದ…

ಇತ್ತೀಚಿನ ಸುದ್ದಿ

ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ

16/02/2026, 11:27

ಗಿರಿಧರ್ ಕೊಂಪುಳಿರ ಮೈಸೂರು

info.reporterkarnataka@gmail.com

ಉಘೇ ಉಘೇ ಮಾದಪ್ಪ, ಎಂದು ಏಳುಮಲೆಯ ಒಡೆಯನ ಕ್ಷೇತ್ರ ಮಲೆ ಮಹದೇಶ್ವರ ಕ್ಷೇತ್ರಕ್ಕೆ ಭಕ್ತರ ಸಾಗರವೇ ಹರಿದು ಬರುತ್ತಿದೆ, ಕಳೆದ ರಾತ್ರಿ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ವಿಶೇಷ ಪೂಜಾ ಕಾರ್ಯಕ್ರಮಗಳು ಧಾರ್ಮಿಕವಾಗಿ ವಿಧಿ-ವಿಧಾನಗಳೊಂದಿಗೆ ಸಂಭ್ರಮ ಸಡಗರದೊಂದಿಗೆ ಜರುಗಿದವು.


ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಮಾದಪ್ಪನಿಗೆ ಸಾಲೂರು ಬೃಹನ್ ಮಠ ಶಾಂತ ಮಲ್ಲಿಕಾರ್ಜುನ ಸ್ವಾಮಿ ದಿವ್ಯ ಸಾನಿಧ್ಯದಲ್ಲಿ ಸರದಿ ಅರ್ಚಕರು ಮಹದೇಶ್ವರನಿಗೆ ವಿಶೇಷ ಪೂಜಾ ಕಾರ್ಯಕ್ರಮಗಳು, ಎಣ್ಣೆ ಮಜ್ಜನ ಸೇವೆ, ದೂಪದ ಸೇವೆ, ಅಭಿಷೇಕ, ಪಂಚ ಕಳಶ ಸಮೇತ ನವರತ್ನ ಕಿರೀಟ ಧಾರಣೆ, ಏಕವಾರ ರುದ್ರಭಿಷೇಕ, ಬಿಲ್ವಾರ್ಚನೆ, ಪಂಚಾಮೃತ ಅಭಿಷೇಕ, ಮಹಾಮಂಗಳಾರತಿ ಮಹಾಶಿವರಾತ್ರಿಯ ಪೂಜಾ ಕಾರ್ಯಕ್ರಮಗಳು ನಡೆಯಿತು.

*ಗಮನ ಸೆಳೆದ ಅಲಂಕಾರ:* ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿ ಹಬ್ಬದ ಹಿನ್ನೆಲೆಯಲ್ಲಿ ದೇವಾಲಯದ ಪ್ರಾಂಗಣದಲ್ಲಿ ವಿವಿಧ ಫಲಪುಷ್ಪಗಳ ಹಾಗೂ ಮುಸುಕಿನ ಜೋಳದ ತೆನೆಗಳಿಂದ ಅಲಂಕಾರಗೊಳಿಸಿರುವುದು ಕಣ್ಮನ ಸೆಳೆಯಿತು. ಜೊತೆಗೆ 108 ಅಡಿ ಮಾದಪ್ಪನ ಪ್ರತಿಮೆ ದೇವಾಲಯ ರಾಜಗೋಪುರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಆಕರ್ಷಕ ವಿದ್ಯುತ್ ದೀಪಾಲಂಕಾರ ಗಮನ ಸೆಳೆಯಿತು.

*ಭಕ್ತರ ದಂಡು:* ಮಲೆ ಮಾದೇಶ್ವರ ಬೆಟ್ಟಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಹಾಗೂ ತಮಿಳುನಾಡಿನಿಂದಲೂ ಲಕ್ಷಾಂತರ ಭಕ್ತರು ಮಹಾಶಿವರಾತ್ರಿ ಹಬ್ಬಕ್ಕೆ ದಂಡೆ ಆಗಮಿಸುತ್ತಿದ್ದು ಎಲ್ಲಿ ನೋಡಿದರೂ ಭಕ್ತ ಸಾಗರವೇ ಕಂಡು ಬಂದಿದೆ.

*ಮಾದಪ್ಪನ ದರ್ಶನಕ್ಕೆ ಸಾರತಿ ಸಾಲು:* ಶಿವರಾತ್ರಿ ಅಂಗವಾಗಿ ಮಹದೇಶ್ವರ ದೇವಸ್ಥಾನಕ್ಕೆ ಬರುವ ಭಕ್ತರ ಸಂಖ್ಯೆಯು ಹೆಚ್ಚಿದ್ದ ಕಾರಣ, ಯಾವುದೇ ನೂಕುನುಗ್ಗಲು ಆಗದಂತೆ ಸರತಿ ಸಾಲಿನ ವ್ಯವಸ್ಥೆ ಮಾಡಲಾಗಿತ್ತು. ಅದರಲ್ಲಿಯೂ ವಿಶೇಷ ಚೇತನರಿಗೆ, ಪಾದಯಾತ್ರಿಗಳಿಗೆ ವಿಶೇಷ ಸಾಲು ಇತ್ತು.

*ವಸತಿ ಗೃಹ ಹೌಸ್‌ಫುಲ್‌:*
ಶ್ರೀ ಕ್ಷೇತ್ರಕ್ಕೆ ರಾಜ್ಯದ ನಾನಾ ಭಾಗಗಳಿಂದ ಮಾದಪ್ಪನ ಭಕ್ತಾದಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ವಸತಿ ಗೃಹಗಳು ತುಂಬಿ ತುಳುಕಿದ್ದು ಜೊತೆಗೆ ದೇವಾಲಯದ ಮುಂಭಾಗ ಇರುವ ರಂಗಮಂದಿರದಲ್ಲಿ ಭಕ್ತಾದಿಗಳು ತಂಗುವ ಮೂಲಕ ರಜೆಯ ನಡುವೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಭಕ್ತಾದಿಗಳಿಗೆ ಮುಗಿಲು ಮುಟ್ಟುವಂತಿತ್ತು.

*ಬಿಗಿ ಬಂದೋಬಸ್ತ್ ಪರಿಶೀಲನೆ:* ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಶಿವರಾತ್ರಿಯ ಐದು ದಿನದ ಹಬ್ಬದ ಹಿನ್ನೆಲೆಯಲ್ಲಿ ರಾಜ್ಯದ ನಾನಾ ಭಾಗಗಳಿಂದ ಆಗಮಿಸುವ ಲಕ್ಷಾಂತರ ಭಕ್ತರಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ ಕಲ್ಪಿಸಲಾಗಿದ್ದು, ಚಾಮರಾಜನಗರ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್‌ ಹಾಗೂ ಕೊಳ್ಳೇಗಾಲ ವಿಭಾಗ ಡಿವೈಎಸ್ಪಿ ಧರ್ಮೇಂದರ್‌ ಇನ್‌ಸ್ಪೆಕ್ಟರ್‌ಗಳಾದ ಜಗದೀಶ್, ಚಿಕ್ಕರಾಜ ಶೆಟ್ಟಿ ಹಾಗೂ ಹನೂರು ಇನ್ಸ್‌ಪೆಕ್ಟರ್‌ ಆನಂದ್ ಮೂರ್ತಿ ಸೇರಿದಂತೆ ಅಧಿಕಾರಿಗಳ ದಂಡೇ ಇಲ್ಲಿ ನೆರೆದಿದೆ.

*ಉತ್ಸವಗಳ ಒಡೆಯ ಮಾದಪ್ಪ*: ಮಹಾಶಿವರಾತ್ರಿ ಹಬ್ಬದ ಹಿನ್ನೆಲೆ ಹರಕೆ ಹೊತ್ತ ಮಾದಪ್ಪನ ಭಕ್ತಾದಿಗಳಿಂದ ಚಿನ್ನದ ರಥೋತ್ಸವ ಹಾಗೂ ಬೆಳ್ಳಿ ರಥೋತ್ಸವ ರುದ್ರಾಕ್ಷಿ ಮಂಟಪೋತ್ಸವ ಮತ್ತು ಹುಲಿವಾಹನ ಉತ್ಸವ ಮಾದೇಶ್ವರ ಹಾಗೂ ದೂಪದ ಸೇವೆ ಪಂಜಿನ ಸೇವೆ ಉರುಳು ಸೇವೆ ಮುಡಿಸೇವೆ ಸೇರಿದಂತೆ ಹರಕೆ ಹೊತ್ತು ಭಕ್ತರಿಂದ ವಿವಿಧ ಉತ್ಸವಗಳು ಹಾಗೂ ಸೇವೆಗಳು ಸಂಭ್ರಮ ಸಡಗರೊಂದಿಗೆ ಉಫೇ ಉಫೇ ಎಂದು ಭಕ್ತರ ಕೂಗು ಮುಗಿಲು ಮುಟ್ಟುವಂತಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು