12:59 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅಜ್ಜಿಯ ಇಷ್ಟ ತಂದಿತು ಸಂಕಷ್ಟ: ಬೆಳ್ತಂಗಡಿಯಲ್ಲಿ ಆಮೆ ಬೇಟೆ; ನಾಲ್ವರ ಬಂಧನ

16/02/2026, 16:55

ಬೆಳ್ತಂಗಡಿ(reporterkarnataka.com): ಅಜ್ಜಿಯ ತಿಥಿ ಕಾರ್ಯಕ್ಕೆ ಮಾಂಸಾಹಾರ ಮಾಡಲು ನದಿಯಲ್ಲಿ ಆಮೆ ಬೇಟೆಯಾಡಿ ಮಾಂಸ ಸುಡುವಾಗ ನಾಲ್ವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಮಣಿಕಂಠ(42), ರಾಜೇಂದ್ರ (54), ವಿಘ್ನೇಶ್ (32) ಹಾಗೂ ಪ್ರಶಾಂತ್(35) ಎಂಬವರ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ನಗರದ ಸೋಮಾವತಿ ನದಿಯಲ್ಲಿ ನಾಲ್ಕು ಆಮೆಯನ್ನು ಬೇಟೆಯಾಡಿ ನದಿ ತಟದಲ್ಲಿ ಮಾಂಸ ಮಾಡಲು ಯತ್ನಿಸುತ್ತಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕ ಬಳಿಕ ದಾಳಿ ಮಾಡಿ ಆಮೆಯನ್ನು ಜಪ್ತಿ ಮಾಡಿ, ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
ಬೆಳ್ತಂಗಡಿ ಪೊಲೀಸರು ದಾಳಿ ಮುಂದಿನ ತನಿಖೆಗಾಗಿ ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಹಸ್ತಾಂತರಿಸಿದ್ದಾರೆ. ಇವರನ್ನು ಬೆಳ್ತಂಗಡಿ ವಲಯ ಅರಣ್ಯಾಧಿಕಾರಿಗಳು ವಿಚಾರಣೆ ನಡೆಸಿ ಬಳಿಕ ನ್ಯಾಯಾಲಯಕ್ಕೆ ಹಾಜರಾಗಲು ನೋಟಿಸ್ ನೀಡಿ 14 ರಂದು ರಾತ್ರಿ ಬಿಡುಗಡೆ ಮಾಡಿದ್ದಾರೆ.

*ಅಜ್ಜಿಯ ಇಷ್ಟ ತಂದಿತು ಸಂಕಷ್ಟ:* ಆರೋಪಿಗಳು ಉಜಿರೆ ಗ್ರಾಮದ ಕುಂಟಿನಿ ನಿವಾಸಿ ಸಂಬಂಧಿ ಅಜ್ಜಿಯ ಉತ್ತರಕ್ರಿಯೆ ಕಾರ್ಯಕ್ರಮಕ್ಕಾಗಿ ಫೆ.13ರಂದು ಆಗಮಿಸಿದ್ದರು. ಮರುದಿನ ಅಜ್ಜಿಗೆ ಇಷ್ಟವಾದ ಆಮೆ ಮಾಂಸ ಮಾಡಲೆಂದು ಬೆಳ್ತಂಗಡಿಯ ಸೋಮವತಿ ನದಿಯಲ್ಲಿ ಬೇಟೆಯಾಡಿದ್ದಾರೆ. ಅಲ್ಲಿಯೇ ಮಾಂಸ ಸುಡುವಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು