7:52 PM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಮಾಣಿ ಜಂಕ್ಷನ್ ನಲ್ಲಿ ರಸ್ತೆ ಅಪಘಾತ: ಕಾರುಗಳೆರಡರ ಮುಂಭಾಗ ಸಂಪೂರ್ಣ ಜಖಂ; ಪವಾಡಸದೃಶ ಚಾಲಕರು ಪಾರು

16/02/2026, 19:13

ಬಂಟ್ವಾಳ(reporterkarnataka.com): ರಾಷ್ಟ್ರೀಯ ಹೆದ್ದಾರಿ ಮಾಣಿ – ಮೈಸೂರು ಜಂಕ್ಷನ್ ನಲ್ಲಿ ಸೋಮವಾರ ಬೆಳಿಗ್ಗೆ ನಡೆದ ರಸ್ತೆ ಅಪಘಾತದಲ್ಲಿ ಕಾರುಗಳೆರಡರ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕರು ಪವಾಡಸದೃಶ್ಯ ಪಾರಾಗಿದ್ದಾರೆ.
ಬೆಳಗ್ಗೆ 7.15ರ‌ ಹೊತ್ತಿಗೆ ಫ್ಲೈ ಓವರ್ ಕೆಳಗಿಂದ ಪುತ್ತೂರು ಕಡೆಗೆ ಹೋಗುತ್ತಿದ್ದ ಕಾರಿಗೆ ಉಪ್ಪಿನಂಗಡಿ ಕಡೆಯಿಂದ ಸರ್ವಿಸ್ ರಸ್ತೆಯಲ್ಲಿ ಬರುತ್ತಿದ್ದ ಕಾರೊಂದು ಡಿಕ್ಕಿ‌ ಹೊಡೆದಿದೆ. ಇದರ ಪರಿಣಾಮ ಎರಡೂ ಕಾರುಗಳ ಮುಂಭಾಗ ಜಖಂಗೊಂಡಿದೆ. ವಾಹನ ಚಾಲಕರಿಬ್ಬರೂ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.
ಫ್ಲೈ ಓವರ್ ಕೆಳಗಡೆಯೇ ಇರುವ ಈ ಜಂಕ್ಷನ್ ನಲ್ಲಿ ಸ್ವಲ್ಪ ಗಮನ ತಪ್ಪಿದರೂ ಅಪಘಾತವಾಗುವ ಸಂಭವ ಇದೆ. ಇಲ್ಲಿ ಕಾಮಗಾರಿ ಇನ್ನೂ ಪೂರ್ತಿಯಾಗಿಲ್ಲ. ಉಪ್ಪಿನಂಗಡಿ ಕಡೆಯಿಂದ ಬರುವ ಸರ್ವಿಸ್ ರಸ್ತೆಗೆ ಹಂಪ್ಸ್ ಹಾಕುವುದರಿಂದ ಅಪಘಾತ ತಪ್ಪಿಸಬಹುದೆಂದು ಸ್ಥಳೀಯ ರಿಕ್ಷಾ ಚಾಲಕರ‌ ಅಭಿಪ್ರಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು