8:40 AM Saturday11 - January 2025
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿ ಪ್ರತಿಯೊಂದಕ್ಕೂ ರೇಟ್ ಫಿಕ್ಸ್ ಆಗಿದೆ: ಕೇಂದ್ರ ಸಚಿವ ಕುಮಾರಸ್ವಾಮಿ ಆರೋಪ ಸಂಕಷ್ಟಕ್ಕೀಡಾದ ಬಿಗ್ ಬಾಸ್ ಸೀಸನ್ 11: ಶೋ ನಿಲ್ಲಿಸುವಂತೆ ಬೆಂಗಳೂರು ಜಿಪಂ ಸಿಇಒ… ಶೃಂಗೇರಿ ದೇಗುಲಕ್ಕೆ ನಾಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ: ಸುವರ್ಣ ಮಹೋತ್ಸವದಲ್ಲಿ ಭಾಗಿ ಸುಪ್ರೀಂ ಕೋರ್ಟ್ ತೀರ್ಪು ಉಲ್ಲಂಘನೆ: ಸರಕಾರಿ ನೌಕರರ ಸಂಘಕ್ಕೆ ಚುನಾವಣೆಗೆ ಸಿವಿಲ್ ಕೋರ್ಟ್… ಚಾರ್ಮಾಡಿ ಘಾಟಿಯಲ್ಲಿ ಕೆಟ್ಟು ನಿಂತ ಸರಕಾರಿ ಬಸ್: ಪ್ರಯಾಣಿಕರಲ್ಲಿ ಆತಂಕ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್ ಸ್ಥಾಪನೆ, ರಾಹುಲ್ ಗಾಂಧಿ ಕೊಟ್ಟಿದ್ದ ಭರವಸೆ ಸಾಕಾರ: ಸಚಿವ… ನಿಮ್ಹಾನ್ಸ್‌ನಲ್ಲಿ ಕರ್ನಾಟಕ ಆಡಳಿತ ಸೇವೆಯ ಅಧಿಕಾರಿಯ ನೇಮಕಾತಿಗೆ ಕ್ರಮ ಕೈಗೊಳ್ಳಿ: ಮುಖ್ಯಮಂತ್ರಿ ಸೂಚನೆ ದೇಸಿ ತಿನಿಸಿನ ಬೇಡಿಕೆ ಹೆಚ್ಚಸಲು ಕ್ರಮ: ಸಚಿವ ಎನ್. ಚಲುವರಾಯಸ್ವಾಮಿ ನಂಜನಗೂಡು: ಶಿವಶರಣ ಒಕ್ಕಲಿಗರ ಮುದ್ದಣನವರ ಪ್ರಪ್ರಥಮ ಜಯಂತಿ ಆಚರಣೆ ಬಳ್ಳಾರಿ: ಎಲ್ಲ ರೈಲುಗಳ ಆರಂಭಕ್ಕಾಗಿ ರಾಜ್ಯ ರೈಲ್ವೆ ಕ್ರಿಯಾ ಸಮಿತಿಯಿಂದ ಒಂದು ತಿಂಗಳ…

ಇತ್ತೀಚಿನ ಸುದ್ದಿ

ರಾಯಚೂರು ಗ್ರಾಮೀಣ ಭಾಗದಲ್ಲಿ ಎಗ್ಗಿಲ್ಲದೆ ನಡೆಯುತ್ತಿದೆ ಸಾರಾಯಿ, ಮಟ್ಕಾ ದಂಧೆ: ಪೊಲೀಸ್ ಇಲಾಖೆ ಮಾತ್ರ ಘೋರ ಮೌನ!

10/09/2021, 07:48

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಜಿಲ್ಲೆಯಲ್ಲಿ ಅಕ್ರಮ ದಂಧೆಗಳು ದಿನ ಕಳೆದಂತೆ ಹೆಚ್ಚಾಗುತ್ತಿದೆ. ಮಟ್ಕಾ, ಜುಗಾರಿ, ಸಾರಾಯಿ ಚಟುವಟಿಕೆ ಯಾವುದೇ ಎಗ್ಗಿಲ್ಲದೆ ರಾಜಾರೋಷವಾಗಿ ನಡೆಯುತ್ತಿದೆ. ಜಿಲ್ಲೆಯ ಯುವಪೀಳಿಗೆ ಸಾರಾಯಿ, ಮಟ್ಕಾದ ದಾಸರಾಗುತ್ತಿದ್ದಾರೆ. ಆದರೆ ಪೊಲೀಸ್ ಇಲಾಖೆ ಮಾತ್ರ ಕಣ್ಮುಚ್ಚಿ ಕುಳಿತಿದೆ. ಜಿಲ್ಲೆಯಲ್ಲಿ ಪ್ರತಿ ಗ್ರಾಮಗಳಲ್ಲಿ, ಹೋಬಳಿ ಮಟ್ಟಗಳಲ್ಲಿ ಅಕ್ರಮ ಚಟುವಟಿಕೆಗಳು ಜೋರಾಗಿ

ನಡೆಯುತ್ತಿದೆ. ಆದರೆ ಪೊಲೀಸ್ ಇಲಾಖೆ  ಸುಮ್ಮನಾಗಿರುವುದು ಹಲವು ಸಂಶಯಗಳಿಗೆ ದಾರಿ ಮಾಡಿ ಕೊಟ್ಟಿದೆ. ಸಾರ್ವಜನಿಕ  ವಲಯದಲ್ಲಿ ಚರ್ಚೆಗೂ ಕಾರಣವಾಗಿದೆ.ಬಡ ಕುಟುಂಬಗಳು ಬೀದಿಗೆ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಳಗ್ಗೆ ಟೀ ಕುಡಿಯದಿದ್ದರೂ ಪರವಾಗಿಲ್ಲ.ಯುವಕರಿಗೆ ಸಾರಾಯಿ ಮಾತ್ರ ಬೇಕು. ಇಂದಿನ ದಿನಗಳಲ್ಲಿ ದುಡಿದರು ಜೀವನ ಸಾಯಿಸುವುದು ಕಷ್ಟ. ಹಾಗಿರುವಾಗ ಬೆಳಗ್ಗೆನೇ ಯುವಕರು ಮದ್ಯಕ್ಕೆ ಮೊರೆ ಹೋದರೆ ಹೇಗೆ ಎಂದು ಹಿರಿಯರು ತಲೆ ಬಿಸಿ ಮಾಡಿಕೊಳ್ಳುತ್ತಾರೆ. ಸಾರಾಯಿ ಜತೆ ಗ್ರಾಮೀಣ ಭಾಗದಲ್ಲಿ ಮಟ್ಕಾ ದಂಧೆಯೂ ಬಹಳಷ್ಟು ಸಕ್ರೀಯವಾಗಿದೆ. ಮನೆ ಸೊತ್ತು ಮಾರಿ ಮಟ್ಕಾ ಆಟವಾಡುತ್ತಿರುವ ಹಲವು ಪ್ರಸಂಗಗಳು ಬೆಳಕಿಗೆ ಬಂದಿವೆ. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಂಡು ಬಡ ಕುಟುಂಬಗಳನ್ನು ರಕ್ಷಿಸ ಬಹುದಲ್ಲ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.

ಕುಡಿತದಿಂದ ಸಣ್ಣ ಯುವಕರು ಹಾಳಾಗುತ್ತಿದ್ದಾರೆ. ತಂದೆ-ತಾಯಿಯರ ಕೇಳೋರೆ ಇಲ್ಲ. ಬಡ ಕುಟುಂಬಗಳು ಬೀದಿಗೆ ಬರಬಾರದು, ಯುವಕರು ಹಾಳಾಗಬಾರದು ಎಂದರೆ ಜಿಲ್ಲೆಯ ಪೊಲೀಸರು ತಾವೇ ಖುದ್ದಾಗಿ ಫೀಲ್ಡಿಗಿಳಿದು ಜಿಲ್ಲೆಗಳ ಪ್ರತಿ ಗ್ರಾಮಗಳಲ್ಲಿ ಸರ್ಚ್ ಮಾಡುವುದು ಇಂದಿನ ತುರ್ತು ಅಗತ್ಯ.

ಇತ್ತೀಚಿನ ಸುದ್ದಿ

ಜಾಹೀರಾತು