10:52 PM Tuesday29 - September 2026
ಬ್ರೇಕಿಂಗ್ ನ್ಯೂಸ್
ಮೂಡಿಗೆರೆ | ನಿಶ್ಚಿತಾರ್ಥವಾದ ಯುವಕ ಆತ್ಮಹತ್ಯೆ: ಮುಂದಿನ ತಿಂಗಳು 25ಕ್ಕೆ ಮದುವೆ ಇತ್ತು ನೈಸ್ ಯೋಜನೆ | 1995ರಿಂದ ಯೋಜನೆ ನಡೆದು ಬಂದ ಹಾದಿಯನ್ನು ಜನರ ಮುಂದಿಡುತ್ತೇನೆ:… ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ…

ಇತ್ತೀಚಿನ ಸುದ್ದಿ

Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ

19/02/2026, 13:58

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕಾಡಾನೆಗಳ ಆವಾಸ ತಾಣವಾಗಿರುವ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಸುತ್ತಮುತ್ತಲಿನ ಪ್ರದೇಶದಲ್ಲಿ ಮತ್ತೆ ಕಾಡಾನೆಯೊಂದು ಚಲಿಸುತ್ತಿದ್ದ ಕಾರು ಮೇಲೆ ದಾಳಿ ನಡೆಸಿದ್ದು ಕಾರು ನಜ್ಜುಗುಜ್ಜು ಆಗಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಸಿದ್ದಾಪುರ ಸಮೀಪದ ಕೆಸುವಿನಹಳ್ಳ ಬಳಿ ಅಮ್ಮತ್ತಿಯ ಪುಲಿಯೇರಿ ಗ್ರಾಮದ ಪ್ರಜಿತ್ ಮೈಸೂರು ಕಡೆಯಿಂದ ಬರುತ್ತಿದ್ದ ವೇಳೆ ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ತಕ್ಷಣ ರಸ್ತೆಯಲ್ಲೇ ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಕಾರಿನ ಹಿಂಭಾಗಕ್ಕೆ ಬಂದ ಒಂಟಿ ಸಲಗ ಕಾರಿನ ಮೇಲೆ ದಾಳಿ ನಡೆಸಿ ಕಾರನ್ನು ನಜ್ಜು ಗುಜ್ಜು ಮಾಡಿದೆ, ಸಂಪೂರ್ಣ ಘಟನೆ ನಡೆಯುವ ವರೆಗೂ ಆತಂಕದಲ್ಲೇ ಕಾರಿನಲ್ಲೇ ಕುಳಿತಿದ್ದ ಪ್ರಜಿತ್ ಮತ್ತು ಇತರೆ ಪ್ರಯಾಣಿಕರು ಪ್ರಾಣಪಾಯ ದಿಂದ ಪಾರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಈ ರಸ್ತೆ ಭಾಗದಲ್ಲಿ ಆನೆಗಳು ಓಡಾಡುತ್ತಿದ್ದು, ಅರಣ್ಯ ಇಲಾಖೆ ಪ್ರಯಾಣಿಕರಿಗೆ ಎಚ್ಚರಿಕೆ ನೀಡದೆ ಇರುವುದು ದುರಂತ.

ಇತ್ತೀಚಿನ ಸುದ್ದಿ

ಜಾಹೀರಾತು