3:40 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

New Delhi | ವಿಶ್ವಸಂಸ್ಥೆ ಜತೆ ಭಾರತ ಒಡಂಬಡಿಕೆ; 2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಕೆಗೆ ಸಹಿ

19/02/2026, 20:45

ನವದೆಹಲಿ(reporterkarnataka.com): ಜಾಗತಿಕ ಆಹಾರ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಭಾರತ ಬದ್ಧತೆ ಪ್ರದರ್ಶಿಸುತ್ತಿದ್ದು, ಇದೀಗ ಐದು ವರ್ಷಗಳ ಕಾಲ ಅಕ್ಕಿ ಪೂರೈಕೆಗೆ ವಿಶ್ವಸಂಸ್ಥೆ ಜತೆ ಒಪ್ಪಂದಕ್ಕೆ ಸಹಿ ಹಾಕಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಮಾಹಿತಿ ನೀಡಿದ್ದಾರೆ.
ಜಾಗತಿಕವಾಗಿ ಹಸಿವು ನೀಗಿಸುವ ಗುರಿಯೊಂದಿಗೆ ಹೆಜ್ಜೆ ಹಾಕಿರುವ ಭಾರತ, ಮಾನವೀಯತೆ ತೋರುವ ಜತೆಗೆ ಆಹಾರ ಪೂರೈಕೆಯಲ್ಲಿ ವಿಶ್ವಕ್ಕೇ ಬೆಂಬಲವಾಗಿ ನಿಂತಿದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಅಕ್ಕಿ ಪೂರೈಕೆಗಾಗಿ ಫೆ.18ರಂದು ಭಾರತೀಯ ಆಹಾರ ನಿಗಮ (FCI) ವಿಶ್ವ ಆಹಾರ ಕಾರ್ಯಕ್ರಮ (WFP) ತಿಳುವಳಿಕೆ ಒಪ್ಪಂದಕ್ಕೆ (MoU) ಸಹಿ ಹಾಕಿದೆ ಎಂದಿದ್ದಾರೆ.
ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಕಾರ್ಯದರ್ಶಿ ಸಮ್ಮುಖದಲ್ಲಿ FCI CMD ರವೀಂದ್ರ ಕುಮಾರ್ ಅಗರ್ವಾಲ್ ಮತ್ತು WFP ಉಪ ಕಾರ್ಯನಿರ್ವಾಹಕ ನಿರ್ದೇಶಕ ಕಾರ್ಲ್ ಸ್ಕೌ ಅವರು ಈ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

*2 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಪೂರೈಕೆ:*
ಒಪ್ಪಂದದ ಪ್ರಕಾರ FCI 2 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು (25% ವರೆಗೆ ಮುರಿದ) WFPಗೆ ಪೂರೈಸುತ್ತದೆ. ಈ ಒಪ್ಪಂದ ಇದೇ 2026ರ ಫೆಬ್ರವರಿ 18ರಿಂದ ಐದು ವರ್ಷಗಳ ಅವಧಿಗೆ ಮಾನ್ಯವಾಗಿರುತ್ತದೆ. ಅಲ್ಲದೆ, ಭವಿಷ್ಯದಲ್ಲಿ ಪರಸ್ಪರ ಒಪ್ಪಿಗೆ ಮೂಲಕ ವಿಸ್ತರಿಸಲೂಬಹುದು ಎಂದು ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದ್ದಾರೆ.
ಅಕ್ಕಿ ಬೆಲೆಯನ್ನು ವಾರ್ಷಿಕ ಆಧಾರದ ಮೇಲೆ ಪರಸ್ಪರ ಒಪ್ಪಿಕೊಳ್ಳಲಾಗುತ್ತದೆ. ಪ್ರಸ್ತುತ ಬೆಲೆ ಕ್ವಿಂಟಲ್‌ಗೆ ₹2,800 ಆಗಿದ್ದು, ಇದೇ ಮಾರ್ಚ್ 31ರವರೆಗೆ ಮಾತ್ರ ಈ ಬೆಲೆ ನಿಗದಿಪಡಿಸಿರುತ್ತದೆ ಎಂದಿದ್ದಾರೆ.
“WFP ಜತೆಗಿನ ಪಾಲುದಾರಿಕೆ ಮೂಲಕ ಭಾರತ ಜಗತ್ತಿನಲ್ಲಿ ಹಸಿವನ್ನು ಎದುರಿಸುತ್ತಿರುವವರಿಗೆ ಭರವಸೆಯಾಗಿ ನಿಂತಿದೆ. ಈ ಒಪ್ಪಂದ ಯಾರೂ ಹಸಿವಿನಿಂದ ಬಳಲದಂತೆ ನೋಡಿಕೊಳ್ಳುವ ಭಾರತದ ಸಂಕಲ್ಪವನ್ನು ಪ್ರದರ್ಶಿಸುತ್ತದೆ” ಎಂದು ಪ್ರತಿಪಾದಿಸಿದ್ದಾರೆ ಸಚಿವ ಪ್ರಲ್ಹಾದ ಜೋಶಿ.
ಜಾಗತಿಕವಾಗಿ ಅಪೌಷ್ಟಿಕತೆ ಮತ್ತು ಆಹಾರ ಅಭದ್ರತೆ ಎದುರಿಸುವಲ್ಲಿ ಭಾರತ ಅಂತರಾಷ್ಟ್ರೀಯ ಸಮುದಾಯದೊಂದಿಗೆ ನಿಲ್ಲುವುದನ್ನು ಮುಂದುವರಿಸುತ್ತದೆ. ಭಾರತದ ಈ ಬೆಂಬಲ ಮುಂದಿನ ಐದು ವರ್ಷಗಳಲ್ಲಿ ಪೌಷ್ಟಿಕ ಆಹಾರದೊಂದಿಗೆ ದುರ್ಬಲರನ್ನು ಹೆಚ್ಚು ಪರಿಣಾಮಕಾರಿಯಾಗಿ ತಲುಪಲು WFP ಗೆ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.
ಅಕ್ಕಿ ಪೂರೈಕೆ ಒಪ್ಪಂದಕ್ಕೆ ಸಹಿ ಹಾಕುವ ವೇಳೆ ವಿಶ್ವ ಸಂಸ್ಥೆಯ ವಿಶ್ವ ಆಹಾರ ಕಾರ್ಯಕ್ರಮದ ಉಪ ಕಾರ್ಯನಿರ್ವಾಹಕ ನಿರ್ದೇಶಕ ಕಾರ್ಲ್ ಸ್ಕೌ, “ಭಾರತದೊಂದಿಗಿನ ಈ ಒಪ್ಪಂದವು ಜಾಗತಿಕ ಹಸಿವಿನ ವಿರುದ್ಧ ಹೋರಾಡುವಲ್ಲಿ ಪ್ರಮುಖ ಮೈಲಿಗಲ್ಲಾಗಿದೆ ಎಂದಿದ್ದಾರೆ.
ಕೃಷಿ ಪ್ರಧಾನ ರಾಷ್ಟ್ರ ಮತ್ತು ಜಾಗತಿಕ ಒಗ್ಗಟ್ಟಿನ ಪ್ರತಿಪಾದಕವಾಗಿರುವ ಭಾರತ, ಜಾಗತಿಕ ‘ಶೂನ್ಯ ಹಸಿವು ನೀಗಿಸುವ ಗುರಿ’ಯನ್ನು ಕಾರ್ಯರೂಪಕ್ಕೆ ತತರುವಲ್ಲಿ ಸ್ಫೂರ್ತಿ ನೀಡುತ್ತದೆ. ಈ ಪರಿವರ್ತನಾತ್ಮಕ ಪಾಲುದಾರಿಕೆಗಾಗಿ ಭಾರತಕ್ಕೆ ಧನ್ಯವಾದ ಹೇಳಿದ್ದಾರೆ ಕಾರ್ಲ್ ಸ್ಕೌ.
ವಿಶ್ವಸಂಸ್ಥೆ ಜತೆಗಿನ ಈ ಪಾಲುದಾರಿಕೆ ಜಾಗತಿಕ ಆಹಾರ ಭದ್ರತೆಗೆ ಭಾರತದ ಬದ್ಧತೆಯನ್ನು ಬಲಪಡಿಸುತ್ತದೆ. ವಿಶ್ವಾದ್ಯಂತ ಮಾನವೀಯ ಅಗತ್ಯತೆಗಳನ್ನು ಪೂರೈಸುವಲ್ಲಿ WFP ಯೊಂದಿಗೆ ಸಹಕಾರವನ್ನು ಬಲಪಡಿಸುತ್ತದೆ ಎಂದು ಜೋಶಿ ಹೇಳಿದ್ದಾರೆ.
WFP ಮತ್ತು FCI ಒಪ್ಪಂದಕ್ಕೆ ಸಹಿ ಹಾಕುವ ವೇಳೆ ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಕಾರ್ಯದರ್ಶಿ ಸಂಜೀವ್ ಚೋಪ್ರಾ ಹಾಗು ಉನ್ನತ ಅಧಿಕಾರಿಗಳು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು