9:29 PM Tuesday29 - September 2026
ಬ್ರೇಕಿಂಗ್ ನ್ಯೂಸ್
ಕಾಡಿನಲ್ಲಿ ಕಾದಾಟದಿಂದ ತೀವ್ರ ಗಾಯ | ದುಬಾರೆ ಶಿಬಿರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಂಡಾನೆ… ದೋಷಪೂರಿತ ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಗೊಳಿಸಿ: ನಟ ಪ್ರಕಾಶ್ ರೈ ಆಗ್ರಹ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ವಜಾಗೊಳಿಸಿ ಬಂಧಿಸಿ: ಕಾಂಗ್ರೆಸ್ ಪಾದಯಾತ್ರೆಯಲ್ಲಿ ಆಗ್ರಹ ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು…

ಇತ್ತೀಚಿನ ಸುದ್ದಿ

ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

19/02/2026, 22:38

ಮಂಗಳೂರು(reporterkarnataka.com): ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಕನ್ನಡಿಗ ಐರ್ಲೆಂಡ್‌ನಲ್ಲಿ ನಿಗೂಢವಾಗಿ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಟ್ರುಪಾಡಿ ವಿಮಲಗಿರಿ ಸಾಂಜೋ ಸುನೀಲ್(31) ಈ ರೀತಿ ನಿಗೂಢವಾಗಿ ಸಾವನ್ನಪ್ಪಿರುವ ಯುವಕ. ತಾನು ವಾಸಿಸುತ್ತಿದ್ದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ. ಹೀಗಾಗಿ ಅನುಮಾನಾಸ್ಪದ ಸಾವಿನ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಐರ್ಲೆಂಡ್ ಪೊಲೀಸರು, ತನಿಖೆ ನಡೆಸುತ್ತಿದ್ದಾರೆ.
ಸಾವನ್ನಪ್ಪಿರುವ ಸಾಂಜೋ ಸುನೀಲ್ ಐರ್ಲೆಂಡ್ ಡಬ್ಲಿನ್ನ ಫಿಂಗ್ಲಾಸ್‌ನ ಚಾರ್ಲ್ಸ್ಟೌನ್‌ನಲ್ಲಿರುವ ಮನೆಯೊಂದರಲ್ಲಿ ವಾಸಿಸುತ್ತಿದ್ದರು. ಪತ್ನಿ ಕೆಲಸಕ್ಕೆ ತೆರಳಿದ್ದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ. ವರ್ಷದ ಹಿಂದೆ ಕಡಬ ಮೂಲದ ಯುವತಿಯನ್ನ ಸಾಂಜೋ ಸುನೀಲ್ ವಿವಾಹವಾಗಿದ್ದರು.
ಸುನೀಲ್ ಮೊದಲು ಇಸ್ರೇಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದರು. ಅವರ ಪತ್ನಿ ಐರ್ಲೆಂಡ್‌ನಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಇತ್ತೀಚೆಗಷ್ಟೇ ಸಾಂಜೋ ಸುನೀಲ್ ಕೂಡ ಐರ್ಲೆಂಡ್‌ಗೆ ತೆರಳಿದ್ದರು. ಪೊಲೀಸರ ತನಿಖೆ ನಂತರ ಘಟನೆಯ ಹಿಂದಿನ ಸತ್ಯ ಬಹಿರಂಗವಾಗಬೇಕಿದೆ.

ಇತ್ತೀಚಿನ ಸುದ್ದಿ

ಜಾಹೀರಾತು