10:59 PM Friday20 - February 2026
ಬ್ರೇಕಿಂಗ್ ನ್ಯೂಸ್
ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ ಕುಖ್ಯಾತ ರೌಡಿ ಶೀಟರ್ ಸಫ್ವಾನ್ ಬಂಧನ: ಮಂಗಳೂರು ಸಿಸಿಬಿ ಪೊಲೀಸರಿಂದ 26 ಪ್ರಕರಣಗಳ… ಆಗುಂಬೆ ಬಸ್ ನಿಲ್ದಾಣ ಬಳಿ ಎರಡು ಪ್ರತ್ಯೇಕ ಅಪಘಾತ: ಇಬ್ಬರಿಗೆ ಗಾಯ ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ

ಇತ್ತೀಚಿನ ಸುದ್ದಿ

28ನೇ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಸರ್ವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

20/02/2026, 22:09

ಮಂಗಳೂರು(reporterkarnataka.com): ಬಂಟ್ವಾಳದ ಬಿ.ಸಿ. ರೋಡಿನ‌ ಸ್ಪರ್ಶಾ ಕಲಾ ಮಂದಿರದಲ್ಲಿ ಮಾರ್ಚ್ 27 ಮತ್ತು 28ರಂದು ನಡೆಯಲಿರುವ 28ನೇಯ ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ.
ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದ. ಕ. ಜಿಲ್ಲಾ ಕಸಾಪ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪತ್ರಕರ್ತ, ಲೇಖಕರಾದ ಚಿದಂಬರ ಬೈಕಂಪಾಡಿಯವರು ಮುಂಗಾರು, ಕನ್ನಡಪ್ರಭ ಪತ್ರಿಕೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಸುದೀರ್ಘ ಅವಧಿ ಸೇವೆ ಸಲ್ಲಿಸಿದ್ದಾರೆ. ಕನ್ನಡದ ಮಹತ್ವದ ಕವಿಯಾಗಿ ಗುರುತಿಸಿಕೊಂಡಿರುವ ಇವರು ಬೇಗುದಿ, ವಾಸ್ತವದ ಲೆಕ್ಕಾಚಾರ, ಕಪ್ಪು ಹುಡುಗ ಇತ್ಯಾದಿ ಕವನ ಸಂಕಲನಗಳನ್ನು ಪ್ರಕಟಿಸಿದ್ದಾರೆ. ತುಳು ಪ್ರೇಮಗೀತೆಗಳ ಇವರ ಧ್ವನಿ ಸುರುಳಿ ಬಿಡುಗಡೆಯಾಗಿದೆ.
ಮಂಗಳೂರು ವಿಶ್ವವಿದ್ಯಾನಿಲಯದ ಸೆನೆಟ್ ಸದಸ್ಯರಾಗಿ, ಕರ್ನಾಟಕ ತುಳುಸಾಹಿತ್ಯ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ‘ಇದು ಮುಂಗಾರು’ ಕೃತಿ ಪತ್ರಿಕೋದ್ಯಮದ ಬಗ್ಗೆಗಿನ ಕೃತಿ. ಹಿರಿಯ ಪತ್ರಕರ್ತರಾದ ವಡ್ಡರ್ಸೆ ರಘುರಾಮ ಶೆಟ್ಟಿ ಅವರ ಒಡನಾಡಿಯಾಗಿ ಹತ್ತು ವರ್ಷ ಕಾಲ ಮುಂಗಾರು ಪತ್ರಿಕೆಯಲ್ಲಿ ಸೇವೆ ಸಲ್ಲಿಸಿ ಅವರ ಆಶಯಗಳಿಗೆ ಜೀವ ತುಂಬಿದ್ದರು.
ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಮೃತ ವಾರಪತ್ರಿಕೆಯಲ್ಲಿ 2 ವರ್ಷ, ದಿವ್ಯವಾಣಿ ವಾರಪತ್ರಿಕೆಯಲ್ಲಿ 3 ವರ್ಷ, ಮುಂಗಾರು ದಿನಪ್ರತಿಕೆ 10 ವರ್ಷ ಮುಖ್ಯ ವರದಿಗಾರರಾಗಿ, ಕನ್ನಡಪ್ರಭ ದಿನಪತ್ರಿಕೆಯಲ್ಲಿ 15 ವರ್ಷ ಪ್ರಧಾನ ವರದಿಗಾರರಾಗಿ ‘ಬಿಂಬಧ್ವನಿ’ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಹೀಗೆ ಹತ್ತು ಹಲವು ಮಜಲುಗಳಲ್ಲಿ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸಿ ತಮ್ಮ ವೈಚಾರಿಕ, ಚಿಂತನಪೂರ್ಣ ಹಾಗೂ ಸಾಮಾಜಿಕ ಕಳಕಳಿಯ ವರದಿ ಮತ್ತು ಲೇಖನಗಳ ಮೂಲಕ ಕನ್ನಡ ಮಾಧ್ಯಮ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ.
ಮುಂಗಾರು ಎನ್ನುವ ಪತ್ರಿಕೋದ್ಯಮದ ಕುರಿತ ಪುಸ್ತಕ, ಪ.ಗೋ ಪ್ರಪಂಚ – ಪತ್ರಿಕೋದ್ಯಮ ಕುರಿತ ಪುಸ್ತಕ, ರಾಜಕೀಯ ಒಳಸುಳಿಗಳು ಲೇಖನಗಳು ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲೂ ಹಲವು ಕೃತಿ ಹೊರತಂದಿದ್ದಾರೆ.
ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯಿಂದ ಪುರಸ್ಕಾರಗೊಂಡ ಬೈಕಂಪಾಡಿಯವರು ಕರ್ನಾಟಕ ಪತ್ರಕರ್ತರ ಸಂಘದ ಅತ್ಯುತ್ತಮ ತನಿಖಾ ಪತ್ರಕರ್ತ ಗೌರವ ಪ್ರಶಸ್ತಿಗೆ ಪಾತ್ರರಾಗಿದ್ದರು. ಅಖಿಲ ಭಾರತ ಆಕಾಶವಾಣಿ ವಾರ್ಷಿಕ ಪ್ರಶಸ್ತಿ ಬೈಕಂಪಾಡಿಯವರ ‘ಬೆಂಗರೆ’ ಬಾನುಲಿ ಸಾಕ್ಷರೂಪಕಕ್ಕೆ ಒಲಿದು ಬಂದಿದೆ. ಬನ್ನಂಜೆ ರಾಮಾಚಾರ್ಯ ಪತ್ರಿಕೋದ್ಯಮ ಪ್ರಶಸ್ತಿ ಪತ್ರಿಕೋದ್ಯಮ ಕ್ಷೇತ್ರದ ಇನ್ ಲ್ಯಾಂಡ್ ಅವಾರ್ಡ್, ಕರ್ನಾಟಕ ಮಾಧ್ಯಮ ಅಕಾಡೆಮಿ ಅವಾರ್ಡ್, ಡಾ. ಕೋಟ ಶಿವರಾಮ ಕಾರಂತ ಪ್ರಶಸ್ತಿ ಮುಂತಾದ ಗೌರವಕ್ಕೆ ಪಾತ್ರರಾದ ಬೈಕಂಪಾಡಿಯವರು 2025ನೇ ಸಾಲಿನ ಪತಿಷ್ಠಿತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ಪಡೆದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು