11:00 PM Monday22 - June 2026
ಬ್ರೇಕಿಂಗ್ ನ್ಯೂಸ್
ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್…

ಇತ್ತೀಚಿನ ಸುದ್ದಿ

ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು ಪಾರು

21/02/2026, 19:12

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಸಿದ್ದಾಪುರ ವ್ಯಾಪ್ತಿಯಲ್ಲಿ ವಾಹನಗಳ ಮೇಲೆ ವನ್ಯಜೀವಿಗಳ ದಾಳಿ ಮುಂದುವರೆದಿದೆ. ನೆನ್ನೆ ಯಷ್ಟೇ ಕಾಡು ಕೋಣ ಮೇಲೆ ಟಾಟಾ ಏಸ್ ದಿಕ್ಕಿಯಾದ ಬೆನ್ನಲ್ಲೇ ಮಾಲ್ದಾರೆ ಯಲ್ಲಿ ಕಾಡಾನೆಯೊಂದು ತೋಟದ ಕೆಲಸಕ್ಕೆ ಕಾರ್ಮಿಕರನ್ನು ಕಡೆದುಕೊಂಡು ಹೋಗುತ್ತಿದ್ದ ಸಂದರ್ಭ ಜೀಪ್ ಮೇಲೆ ದಾಳಿ ನಡೆಸಿದೆ.

ಮಾಲ್ದಾರೆಯ ತಟ್ಟಳ್ಳಿ ಈ ದಾಳಿ ಸಂಭವಿಸಿದ್ದು ಕಾರ್ಮಿಕ ಮಹಿಳೆ ಸುನೀತಾ ಎಂಬುವರು ಗಂಭೀರ ಗಾಯಗೊಂಡು ಸಿದ್ದಾಪುರ ಸಮುದಾಯ ಕೇಂದ್ರದಲ್ಲಿ ಚಿಕಿತ್ಸೆ ಪಡೆದು ಮಡಿಕೇರಿ ಜಿಲ್ಲಾಸ್ಪತ್ರೆ ಗೆ ದಾಖಲಾಗಿ ಚಿಕಿತ್ಸೆ ನೀಡಲಾಗುತ್ತಿದೆ. ಇದೆ ಆನೆ ಹಿಂದಿನ ದಿನ ಕಾರಿನ ಮೇಲೆ ದಾಳಿ ಮಾಡಿದ ಪರಿಣಾಮ ಆನೆಯನ್ನು ಕಾಡಿಗೆ ಅಟ್ಟುವ ಕೆಲಸವನ್ನು ಅರಣ್ಯ ಇಲಾಖೆ ರಾಪಿಡ್ ಆಕ್ಷನ್ ಫೋರ್ಸ್ ಸಿಬ್ಬಂದಿಗಳ ಮೇಲೂ ದಾಳಿಗೆ ಮುಂದಾಗಿತ್ತು ಎಂದು ತಿಳಿದು ಬಂದಿದೆ.
ಒಂಟಿಯಾಗಿ ಕಾಡಾನೆ ಕಾಫಿ ತೋಟದಲ್ಲಿ ಅಡ್ಡಾಡುತ್ತಿದ್ದು ಕಾರ್ಮಿಕರು ಮತ್ತು ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಇತ್ತೀಚಿನ ಸುದ್ದಿ

ಜಾಹೀರಾತು