2:53 PM Saturday25 - April 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ? ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್…

ಇತ್ತೀಚಿನ ಸುದ್ದಿ

ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12 ಲಕ್ಷ ರೂ. ಮೌಲ್ಯದ ಡ್ರಗ್ಸ್, ಸೊತ್ತು ವಶ

22/02/2026, 12:41

ಮಂಗಳೂರು(reporterkarnataka.com): ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ, ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಗಾಂಜಾವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಬಂಧಿಸಲಾಗಿದ್ದು, ಅವರಿಂದ 22 ಕೆ.ಜಿ 250 ಗ್ರಾಂ ತೂಕದ ಅಕ್ರಮ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
ಮಹಾರಾಷ್ಟ್ರಜಲಗಾಂ ಜಿಲ್ಲೆಯ ಚೊಪ್ಪಡ ತಾಲೂಕಿನ
ಸಮತಾ ನಗರದ ಕರಣ್ ಬಾಬು ರಾಂ ಜಾದವ್ (27),
ಮಧ್ಯಪ್ರದೇಶದ ದೇವಾಸ್ ಜಿಲ್ಲೆಯ ತಾಶಿಲ್ ಬಗಳಿಯ
ಸಮೀರ್ ಶಾ (19),ಉಡುಪಿ ಜಿಲ್ಲೆಯ ಹೆಜಮಾಡಿ ಗ್ರಾಮದ
ಹೆಜಮಾಡಿ ಕೋಡಿಯ ನ್ಯೂ ಹೌಸ್ ನಿವಾಸಿ ಎಂ.ಹೆಚ್. ಮಯ್ಯದಿ (48) ಹಾಗೂ ಮಂಗಳೂರು ಕುದ್ರೋಳಿಯ ಕರ್ಬಾಲ ರೋಡ್ ನಿವಾಸಿ ಇಬ್ರಾಹಿಂ ಕಲೀಲ್ (47) ಬಂಧಿತರು ಎಂದು ತಿಳಿದು ಬಂದಿದೆ.
ಶನಿವಾರ ಜೋಕಟ್ಟೆ ಕ್ರಾಸ್ ರೈಲ್ವೇ ಬ್ರಿಡ್ಜ್ ಹತ್ತಿರ ಗಾಂಜಾವನ್ನು ಮಾರಾಟ ಮಾಡಲು ಹೊರ ರಾಜ್ಯ ದಿಂದ ತಂದಿರುವ ಬಗ್ಗೆ ಮಾಹಿತಿ ಪಡೆದು ಉತ್ತರ ಉಪ ವಿಭಾಗದ ಎಸಿಪಿ ಅವರು ಮತ್ತು ಅವರ ತಂಡದ ಅಧಿಕಾರಿ ಮತ್ತು ಸಿಬ್ಬಂದಿಗಳು ಹಾಗೂ ಪಣಂಬೂರು ಠಾಣಾ ಪಿ.ಎಸ್.ಐ ಮತ್ತು ಸಿಬ್ಬಂದಿಗಳ ನೇತೃತ್ವದಲ್ಲಿ ದಾಳಿ ನಡೆಸಿದ್ದಾರೆ. ಬಂಧಿತರಿಂದ 22 ಕೆಜಿ 250 ಗ್ರಾಂ ಗಾಂಜಾ (ಅಂದಾಜು ಮೌಲ್ಯ ರೂ. 11,12,500) ಮತ್ತು 6 ಮೊಬೈಲ್ ಪೋನ್ (ಅಂದಾಜು ಮೌಲ್ಯ ರೂ. 18,000) ನ್ನು ಹಾಗೂ ಗಾಂಜಾ ಸಾಗಿಸಲು ಬಳಸಿದ KA 20 H.E. 2915 ಮತ್ತು K.A 19 H.P 6021 ಸ್ಕೂಟರ್ ಗಳನ್ನು (ಅಂದಾಜು ಮೌಲ್ಯ ರೂ. 1,00,000) ಸ್ವಾಧೀನಪಡಿಸಿಕೊಳ್ಳಲಾಗಿದೆ.
ಆರೋಪಿತರ ಪೈಕಿ ಕರಣ್ ಬಾಬು ರಾಂ ಜಾದವ್ ಮತ್ತು ಸಮೀರ್ ಶಾ ಎಂಬವರು ಗಾಂಜಾವನ್ನು ಮಹಾರಾಷ್ಟ್ರ ಮಯ್ಯದಿ ಹಾಗೂ ಮಧ್ಯ ಪ್ರದೇಶ ಶಾರೂಕ್ ಎಂಬವರು ತಂದು ಉಡುಪಿ ಹೆಜಮಾಡಿ ಕೋಡಿಯ ಎಂ.ಹೆಚ್. ಮಯ್ಯದಿ ಮತ್ತು ಮಂಗಳೂರಿನ ಇಬ್ರಾಹಿಂ ಕಲೀಲ್ ರವರಿಗೆ ನೀಡುತ್ತಿದ್ದು, ಈ ಇಬ್ಬರು ಗಾಂಜಾವನ್ನು ಉಡುಪಿ, ಮಲ್ಪೆ, ಕಾರ್ಕಳ, ಮುಲ್ಕಿ, ಸುರತ್ಕಲ್, ಪಣಂಬೂರು, ಹಾಗೂ ಮಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಮಾರಾಟ ಮಾಡುತ್ತಿದ್ದುದಾಗಿ ತಿಳಿದು ಬಂದಿದೆ. ಈ ಹಿಂದೆ ಕೂಡಾ ಹಲವು ಭಾರಿ ಗಾಂಜಾವನ್ನು ಅಕ್ರಮವಾಗಿ ತಂದು ಉಡುಪಿ ಜಿಲ್ಲೆ ಮತ್ತು ಮಂಗಳೂರು ನಗರದಲ್ಲಿ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ.
ಆರೋಪಿತರುಗಳಿಂದ ಸ್ವಾಧೀನಪಡಿಸಿಕೊಳ್ಳಲಾದ ಗಾಂಜಾ, ಮೊಬೈಲ್ ಮತ್ತು ಸ್ಕೂಟರ್ ಗಳ ಒಟ್ಟು ಮೌಲ್ಯ 12,30,500 ರೂಗಳಾಗಿದ್ದು, ಈ ಬಗ್ಗೆ ಪಣಂಬೂರು ಪೊಲೀಸ್ ಠಾಣೆಯಲ್ಲಿ ಅ.ಕ್ರ.21/2026 ಕಲಂ:8(C), 20(b),(ii)(C) NDPS Act ನಂತೆ ಪ್ರಕರಣ ದಾಖಲಿಸಿ ತನಿಖೆ ನಡೆಯುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು