1:22 AM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಸಾಧನೆ ಸಮಾಜಕ್ಕೆ ಮಾದರಿ: ಹುಟ್ಟುಹಬ್ಬ ಸಂಭ್ರಮದಲ್ಲಿ ಸ್ಪೀಕರ್ ಖಾದರ್

24/02/2026, 19:11

ಅನುಷ್ ಪಂಡಿತ್ ಮಂಗಳೂರು

ಮಂಗಳೂರು(reporterkarnataka.com):ಡಾ. ಎಂ. ಎನ್.ರಾಜೇಂದ್ರ ಕುಮಾರ್ ಅವರ ಸಹಕಾರಿ ಕ್ಷೇತ್ರದಲ್ಲಿನ ಕಾರ್ಯಕ್ಷಮತೆ ಸಮಾಜಕ್ಕೆ, ಭವಿಷ್ಯದ ಮಕ್ಕಳಿಗೆ, ಯುವಕರಿಗೆ ಮಾದರಿಯಾಗಿದೆ ಎಂದು ವಿಧಾನ ಸಭೆ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.


ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ಅಭಿವಂದನಾ ಕಾರ್ಯಕ್ರಮ ಹಾಗೂ ಸವಲತ್ತುಗಳ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
4 ದಶಕಗಳಿಂದ ಸಾಮಾಜಿಕ, ಸಹಕಾರ ಚಟುವಟಿಕೆಯ ಮೂಲಕ ಕರಾವಳಿ ಅಷ್ಟೇ ಅಲ್ಲದೆ ರಾಜ್ಯ, ರಾಷ್ಟ್ರಮಟ್ಟದಲ್ಲಿ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದಾರೆ. ಸಹಕಾರಿ ಕ್ಷೇತ್ರದಲ್ಲಿ ಸರ್ವರನ್ನು ಗೌರವಿಸುವುದು, ಪ್ರೀತಿ ವಿಶ್ವಾಸದಿಂದ ಕಾಣುವುದು ಅಷ್ಟೇ ಅಲ್ಲದೆ ಸಹಕಾರಿ ಕ್ಷೇತ್ರದಲ್ಲಿ ಬರುವಂತಹ ಸವಾಲುಗಳನ್ನು ಎದುರಿಸಿ ಸಹಕಾರಿ ಕ್ಷೇತ್ರವನ್ನು ಉನ್ನತ ಮಟ್ಟಕ್ಕೆ ಏರಿಸುವುದರಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ. ತನ್ನ ಅಭಿವೃದ್ದಿ ಅಷ್ಟೇ ಅಲ್ಲದೆ ಜನಸಾಮಾನ್ಯರ ಅಭಿವೃದ್ಧಿಯಾಗಬೇಕು ಎಂಬ ಅವರ ಇಚ್ಛಾಶಕ್ತಿ ಎಲ್ಲರಿಗೂ ಮಾದರಿಯಾಗಿದೆ ಎಂದು ಸ್ಪೀಕರ್ ನುಡಿದರು.

ಅಭಿನಂದನಾ ಮಾತುಗಳನ್ನಾಡಿದ ಮಾಜಿ ಮುಖ್ಯಮಂತ್ರಿ

ಡಾ. ಎಂ.ವೀರಪ್ಪ ಮೊಯ್ಲಿ, ಅಂದು ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷರಾಗಿ ನೇಮಿಸುವ ಸಂದರ್ಭದಲ್ಲಿ ಅಧ್ಯಕ್ಷರ ಜವಾಬ್ದಾರಿಯನ್ನು ಹೇಗೆ ನಿಭಾಯಿಸುತ್ತಾರೆ ಎಂಬ ಭಯವಿತ್ತು. ಆದರೆ ನನ್ನ ಅಂದಿನ ನಿರ್ಧಾರಕ್ಕೆ ಚ್ಯುತಿಬಾರದ ರೀತಿಯಲ್ಲಿ ನಡೆದುಕೊಂಡಿದ್ದಾರೆ.
ನೆಹರು ಅವರ ಕನಸಿನಂತೆ ಸಹಕಾರಿ ಸಂಘದ ಕಟ್ಟುವುದರ ಮೂಲಕ ಕೃಷಿಕರ ಅಭಿವೃದ್ಧಿಗೆ ಪ್ರಮುಖ ಪಾತ್ರ ವಹಿಸಿದ್ದಾರೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ಒಂದು ರೈತರ ಆತ್ಮಹತ್ಯೆಯನ್ನು ನಾನು ಇದುವರೆಗೂ ಕಂಡಿಲ್ಲ. ಇದಕ್ಕೆ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರ ಸಹಕಾರಿ ಸಂಘಗಳ ಹಾಗೂ ಸ್ವ -ಸಹಾಯ ಗುಂಪುಗಳು ಪಾತ್ರ ಪ್ರಮುಖವಾಗಿದೆ ಎಂದರು.
ಅಭಿವಂದನೆ ಸ್ವೀಕಾರ ಮಾಡಿ ಮಾತನಾಡಿದ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅವರು 33 ವರ್ಷಗಳ ಹಿಂದೆ ಸಹಕಾರ ಬ್ಯಾಂಕ್ ನ ಅಧ್ಯಕ್ಷ ಸ್ಥಾನಕ್ಕೆ ಏರಿದ ಸಂದರ್ಭ ಪೈಪೋಟಿಯಿಂದ ಕೂಡಿತ್ತು. ಎಲ್ಲರನ್ನು ಪ್ರೀತಿ,ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಲು ಆರಂಭಿಸಿದ ಮೇಲೆ ಹಿಂತಿರುಗಿ ನೋಡಲೇ ಇಲ್ಲ.
ಜನಸಾಮಾನ್ಯರಿಗೆ ಉಪಯೋಗವಾಗುವ ರೀತಿಯಲ್ಲಿ ಹಾಗೂ ಹೆಚ್ಚಿನ ಗ್ರಾಮದಲ್ಲಿ ಸೇವೆ ನೀಡಬೇಕೆಂಬ ದೃಷ್ಟಿಕೋನದಿಂದ ಸಹಕಾರಿ ಬ್ಯಾಂಕ್ ಮಾಡಲಾಯಿತು. ನಮ್ಮ ಸಹಕಾರಿ ಬ್ಯಾಂಕ್ ಗಳು ತಮ್ಮ ಸ್ವಂತ ಕಟ್ಟಡದಲ್ಲಿ, ಹವಾ ನಿಯಂತ್ರಣ ವ್ಯವಸ್ಥೆಯಲ್ಲಿ ಕಾರ್ಯಾಚರಿಸುವುದು ವಾಣಿಜ್ಯ ಬ್ಯಾಂಕ್ ಗಳಿಗೆ ಸವಾಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ರಾಜ್ಯದಲ್ಲೇ ಅತಿ ಹೆಚ್ಚು ಸಾಲ ನೀಡುವ ಸಹಕಾರಿ ಬ್ಯಾಂಕ್ ಆಗಿದೆ. ನಿಮ್ಮೆಲ್ಲರ ಸಹಕಾರ ಇದೆ ರೀತಿ ಇದ್ದರೆ ಇನ್ನೂ ಅತೀ ಹೆಚ್ಚಿನ ಸಾಧನೆಯನ್ನು ಮಾಡಲು ಪ್ರೇರಣೆಯಾಗುತ್ತದೆ ಎಂದರು.
ಅಧ್ಯಕ್ಷ ವಹಿಸಿದ್ದ ಶಾಸಕ ಡಿ.ವೇದವ್ಯಾಸ ಕಾಮತ್ ಮಾತನಾಡಿ, ಆರ್ಥಿಕವಾಗಿ ಹಿಂದುಳಿದವರಿಗೆ ಸಹಕಾರಿ ಸಂಘ ಹಾಗೂ ಸ್ವಸಹಾಯ ಗುಂಪುಗಳು ಶಕ್ತಿ ಒದಗಿಸಿದೆ. ಹಳ್ಳಿಗಳಿಗೂ ಬ್ಯಾಂಕ್ ಸೇವೆ ಒದಗಿಸಬೇಕೆಂಬ ಉದ್ದೇಶದಿಂದ ಮೊಬೈಲ್ ಬ್ಯಾಂಕ್ ಸ್ಥಾಪಿಸಿತ್ತು. ಇವರ ಸಾಧನೆಗೆ ಕೈಗನ್ನಡಿ ಎಂದರು.


ಕಾರ್ಯಕ್ರಮದಲ್ಲಿ 77 ಮಂದಿ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣೆ ಕಾರ್ಯಕ್ರಮ ನಡೆಯಿತು.
ಈ ಸಂದರ್ಭ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ದ. ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟ ಅಧ್ಯಕ್ಷ ರವಿರಾಜ್ ಹೆಗ್ಡೆ, ನಬಾರ್ಡ್ ಡಿಜಿಎಂ ಕೆ. ಜಗದೀಶ್, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿಯ ಎಂಡಿ ಲಿಂಗರಾಜ್, ಮುಡಾ ಅಧ್ಯಕ್ಷ ಸದಾಶಿವ ಉಳ್ಳಾಲ್, ಆಕಾಶ್ ಕಾಲೇಜ್ ಸಿಎಂಡಿ ಮುನಿರಾಜ್, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ದೇವರಾಜ್, ನಿರ್ದೇಶಕರುಗಳಾದ , ಶಶಿಕುಮಾರ್ ರೈ ಬಾಲ್ಯೊಟ್ಟು, ಭಾಸ್ಕರ್ ಎಸ್.ಕೋಟ್ಯಾನ್, ಎಸ್.ಬಿ. ಜಯರಾಮ ರೈ, ಮೊದಲಾದವರು ಉಪಸ್ಥಿತರಿದ್ದರು.
ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಸ್ವಾಗತಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು