8:06 PM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

Karkala | ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ: ತಹಶೀಲ್ದಾರ್ ರಿಂದ ಬೀಗ ಜಡಿಯುವ ಭರವಸೆ

24/02/2026, 22:45

ಕಾರ್ಕಳ(reporterkarnataka.com): ಪಡುಬಿದ್ರಿಯಿಂದ ಸ್ಥಳಾಂತರಗೊಂಡು ಕಾರ್ಕಳದ ಪಳ್ಳಿ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ ‘ಫಿಷ್ ಮೀಲ್’ ಘಟಕವನ್ನು ವಿರೋಧಿಸಿ ಗ್ರಾಮಸ್ಥರು ಪಂಚಾಯತ್ ಸದಸ್ಯರ ನೇತೃತ್ವದಲ್ಲಿ ಪಳ್ಳಿ ಪಂಚಾಯತ್‌ ಮುಂಭಾಗ ಪ್ರತಿಭಟನೆ ನಡೆಸಿದರು.
ಒಂದು ವೇಳೆ ಫಿಷ್ ಮೀಲ್ ಘಟಕವನ್ನು ಸಂಪೂರ್ಣವಾಗಿ ಬಂದ್ ಮಾಡದೇ ಇದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಪಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಿಮಲೆ ಪರಿಸರದ ಕಂದಾಯ ಸ.ನಂ 229/1ರ 3.60 ಎಕರೆ ಜಾಗದಲ್ಲಿ ಈ ಘಟಕ ನಿರ್ಮಾಣವಾಗುತ್ತಿದ್ದು ಯಾವುದೇ ಅಧಿಕೃತ ಪರವಾನಗಿ ಪಡೆಯದೆ ಕಾಮಗಾರಿ ನಡೆಸಲಾಗುತ್ತಿದೆ ಎಂಬ ದೂರು ಕೇಳಿಬಂದಿದೆ.

*ಪ್ರತಿಭಟನಾ ಸ್ಥಳಕ್ಕೆ ಅಧಿಕಾರಿಗಳ ಭೇಟಿ:*
ಅಕ್ರಮ ನಿರ್ಮಾಣದ ವಿರುದ್ಧ ಫೆಬ್ರವರಿ 23ರಂದು ಪಂಚಾಯತ್ ಕಚೇರಿ ಮುಂಭಾಗ ನಡೆದ ಪ್ರತಿಭಟನಾ ಸ್ಥಳಕ್ಕೆ ಕಾರ್ಕಳ ತಹಶೀಲ್ದಾರ್ ಪ್ರದೀಪ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಮೀಳಾ ನಾಯಕ್ ಹಾಗೂ ವಿಎ ಅಭಿಷೇಕ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮಸ್ಥರ ಅಹವಾಲುಗಳನ್ನು ಸ್ವೀಕರಿಸಿದ ತಹಶೀಲ್ದಾರರು, ಫಿಷ್ ಮೀಲ್ ಘಟಕವನ್ನು ಸ್ಥಳಾಂತರಿಸುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

*ಅಕ್ರಮ ಪತ್ತೆ:*
ಅಧಿಕಾರಿಗಳ ಸ್ಥಳ ಪರಿಶೀಲನೆಯ ವೇಳೆ ಗಂಭೀರ ನಿಯಮಬಾಹಿರ ಚಟುವಟಿಕೆಗಳು ಕಂಡುಬಂದಿವೆ. ಇಲ್ಲಿ ಯಾವುದೇ ಭೂಪರಿವರ್ತನೆ, ಇ-ಖಾತಾ ಅಥವಾ ಗ್ರಾಮ ಪಂಚಾಯತ್‌ನಿಂದ ಕಟ್ಟಡ ಪರವಾನಗಿ ಪಡೆಯದೆ ಕಾಮಗಾರಿ ಸುತ್ತಿರುವುದು ಕಂಡುಬಂದಿದೆ. ಕೃಷಿ ಉದ್ದೇಶದ ಬಾವಿಗೆ ನೀಡಲಾಗಿದ್ದ ವಿದ್ಯುತ್ ಸಂಪರ್ಕವನ್ನು ಅಕ್ರಮವಾಗಿ ಈ ಕಟ್ಟಡ ನಿರ್ಮಾಣಕ್ಕೆ ಬಳಸುತ್ತಿರುವುದು ದೃಢಪಟ್ಟಿದೆ. ಅಲ್ಲದೆ ಜಮೀನಿನಲ್ಲಿದ್ದ ಮರಗಳನ್ನು ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ತೆರವುಗೊಳಿಸಿರುವುದನ್ನು ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಕಾಮಗಾರಿಯನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ನಿರ್ಮಾಣದ ಉಸ್ತುವಾರಿ ವಹಿಸಿದ್ದವರಿಗೆ ಅಧಿಕೃತ ನೋಟೀಸು ಜಾರಿ ಮಾಡಿದ್ದಾರೆ. ಅಲ್ಲದೆ ನಿಯಮಬಾಹಿರವಾಗಿ ಬಳಸುತ್ತಿರುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ಮೆಸ್ಕಾಂ ಬೈಲೂರು ಶಾಖಾಧಿಕಾರಿಗಳಿಗೆ ಪತ್ರ ಬರೆಯಲಾಗಿದೆ.
ಈ ಸಂದರ್ಭದಲ್ಲಿ ಪಳ್ಳಿ ಪಂಚಾಯತಿನ ಮಾಜಿ ಪ್ರತಿನಿಧಿಗಳು ಉಷಾ ಎ. ಅಂಚನ್, ಶ್ರೀಕಾಂತ್ ಪ್ರಭು, ಸಂದೀಪ್ ಅಮೀನ್ , ವಿಜಯ್ ಎಂ. ಶೆಟ್ಟಿ, ಸಂತೋಷ್ ಶೆಟ್ಟಿ ನಿಂಜೂರು ಹಾಗೂ ಕೌಡೂರು ಪಂಚಾಯತಿನ ಮಾಜಿ ಪ್ರತಿನಿಧಿ ವಿಶೇಷ್ ದೇವಾಡಿಗ ಸೇರಿ ಊರ ಗ್ರಾಮಸ್ಥರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು