5:28 PM Wednesday25 - February 2026
ಬ್ರೇಕಿಂಗ್ ನ್ಯೂಸ್
ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ Kodagu | ಸಿದ್ದಾಪುರ ಬಳಿ ಕಾರು ಮೇಲೆ ಕಾಡಾನೆ ದಾಳಿ: ಜಖಂ

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ತುಂಬೆ ಶಾಖೆಯ 5ನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆ

25/02/2026, 15:57

ಮಂಗಳೂರು(reporterkarnataka.com): ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ತುಂಬೆ ಶಾಖೆಯ ಐದನೇ ವಾರ್ಷಿಕೋತ್ಸವ ಹಾಗೂ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರ ಅಧ್ಯಕ್ಷತೆಯಲ್ಲಿ ತುಂಬೆ ಶಾಖೆಯಲ್ಲಿ ಜರುಗಿತು.
ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಶ್ರೀ ಗಣೇಶ್ ಸುವರ್ಣ, ಶ್ರೀ ಹೊನ್ನಪ್ಪ ಪೂಜಾರಿ, ಶ್ರೀ ಅಬ್ದುಲ್ ಹಕೀಮ್, ಶ್ರೀ ಅಶೋಕ್ ಕುಲಾಲ್, ಶ್ರೀ ಭಾಸ್ಕರ್ ಕುಲಾಲ್ ಹಾಗೂ ಶ್ರೀಮತಿ ಭಾರತಿ ಯವರು ದೀಪ ಬೆಳಗಿಸಿ ಉದ್ಘಾಟಿಸಿದರು.
ಸಂಘದ ಸದಸ್ಯರಾದ ಶ್ರೀ ಹೊನ್ನಪ್ಪ ಪೂಜಾರಿ ರವರು ಮಾತನಾಡಿ “ಸಂಘದ ಸಿಬ್ಬಂದಿಗಳು ನಗುಮುಖದ ಸೇವೆಯೊಂದಿಗೆ ಉತ್ತಮ ಸೇವೆಯನ್ನು ಗ್ರಾಹಕರಿಗೆ ನೀಡುತ್ತಿದ್ದಾರೆ. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಸಿಗುವ ಎಲ್ಲಾ ವಿಧದ ಬ್ಯಾಂಕಿಂಗ್ ಸೇವಾ ಸೌಲಭ್ಯಗಳು ಸಂಘದಲ್ಲಿ ಲಭ್ಯವಿದ್ದು, ಇನ್ನೂ ಹೆಚ್ಚಿನ ಸೇವಾ ಸೌಲಭ್ಯಗಳು ಗ್ರಾಹಕರಿಗೆ ದೊರೆಯುವಂತಾಗಲಿ” ಎಂದು ಶುಭ ಹಾರೈಸಿದರು.
ಸದಸ್ಯರಾದ ಶ್ರೀ ಭಾಸ್ಕರ್ ಕುಲಾಲ್ ರವರು ಮಾತನಾಡಿ “ಸಂಘದಲ್ಲಿ ಬ್ಯಾಂಕಿಂಗ್ ಸೇವೆಯ ಜೊತೆಯಲ್ಲಿ ಕ್ಲಪ್ತ ಸಮಯದಲ್ಲಿ ಠಸೆ ಪೇಪರ್ ಸೇವೆಯು ದೊರೆಯುತ್ತಿದ್ದು, ಈ ನಿಟ್ಟಿನಲ್ಲಿ ಆತ್ಮಶಕ್ತಿ ಸಂಘವು ಶೀಘ್ರಗತಿಯ ಸೇವೆ ನೀಡುವುದರ ಮೂಲಕ ಗ್ರಾಹಕ ಸ್ನೇಹಿ ಸಂಘವಾಗಿದೆ” ಎಂದು ತಿಳಿಸಿದರು.
ಸದಸ್ಯರಾದ ಶ್ರೀಮತಿ ಭಾರತಿ ರವರು ಮಾತನಾಡಿ ಸಂಘದ ಹಿರಿಯ ಸದಸ್ಯರಿಗೆ ಮನೆಯ ಬಾಗಿಲಿಗೆ ಬಂದು ಬ್ಯಾಂಕಿಂಗ್ ಸೇವೆಯನ್ನು ನೀಡುತ್ತಿರುವುದರಿಂದ ಹಿರಿಯ ನಾಗರಿಕರಿಗೆ ತುಂಬಾ ಅನುಕೂಲವಾಗಿದೆ. ಸಂಘದ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ, “ಸಂಘದ ತುಂಬೆ ಶಾಖೆಯಲ್ಲಿ ಉತ್ತಮ ರೀತಿಯಲ್ಲಿ ನಿರಖು ಠೇವಣಿ ಸಂಗ್ರಹಣೆ ಹಾಗೂ ಆಭರಣ ಸಾಲವನ್ನು ವಿತರಿಸಿದ್ದು, ಆಭರಣ ಸಾಲದ ಮರುಪಾವತಿಯು ಉತ್ತಮ ರೀತಿಯಲ್ಲಿದೆ. ಸಂಘವು ಆರೋಗ್ಯ ಶಿಬಿರವನ್ನು ಸಹ ನಿರಂತರವಾಗಿ ಹಮ್ಮಿಕೊಂಡು ಬರುತ್ತಿದ್ದು, ಕೇವಲ ಹಣಕಾಸಿನ ವ್ಯವಹಾರವಲ್ಲದೆ ಜನರ ಆರೋಗ್ಯದ ಬಗ್ಗೆಯು ಜಾಗೃತಿ ಮೂಡಿಸುವ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬರುತ್ತಿದೆ. ಸಂಘವು ಒಟ್ಟು ರೂ. 300 ಕೋಟಿಗೂ ಮಿಕ್ಕಿ ದುಡಿಯುವ ಬಂಡವಾಳ ಹೊಂದಿದ್ದು, ಸಂಘವು ಸದಸ್ಯರ ಸಹಕಾರದಿಂದ ಉತ್ತಮ ರೀತಿಯಲ್ಲಿ ಅಭಿವೃದ್ದಿಯತ್ತ ಸಾಗುತ್ತಿದೆ. ಸಹಕಾರಿ ಸಂಘದ ಸದಸ್ಯರಿಗೆ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿಯ ಪ್ರಯೋಜನ ಸಂಘದ ಎಲ್ಲಾ ಶಾಖೆಗಳಲ್ಲಿ ಲಭ್ಯವಿದ್ದು, ಇದರ ಪ್ರಯೋಜನ ಪಡೆಯಬೇಕೆಂದು ವಿನಂತಿಸಿದರು. ಸಂಘದ ಮೇಲೆ ವಿಶ್ವಾಸವನ್ನಿಟ್ಟು ಸಂಘದ ಬೆಳವಣಿಗೆಗೆ ನಿರಂತರವಾಗಿ ಸಹಕರಿಸಿದ ಎಲ್ಲರಿಗೂ ಈ ಸಂದರ್ಭದಲ್ಲಿ ಕೃತಜ್ಞತೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾಗಿರುವ ಶ್ರೀ ಗೋಪಾಲ್ ಎಮ್. ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್ ರವರು ಉಪಸ್ಥಿತರಿದ್ದರು.
ಶಾಖೆಯ ಸಿಬ್ಬಂದಿಯಾದ ಶ್ರೀಮತಿ ಭವ್ಯಾ ರವರು ಸ್ವಾಗತಿಸಿ, ಶಾಖಾಧಿಕಾರಿ ಶ್ರೀಮತಿ ಧನಲಕ್ಷ್ಮೀ ರವರು ವಂದಿಸಿದರು. ಶಾಖೆಯ ಸಿಬ್ಬಂದಿಯಾದ ಕುಮಾರಿ ಶ್ರಾವ್ಯ ಕಾರ್ಯಕ್ರಮವನ್ನು ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು