7:13 PM Thursday6 - August 2026
ಬ್ರೇಕಿಂಗ್ ನ್ಯೂಸ್
ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ…

ಇತ್ತೀಚಿನ ಸುದ್ದಿ

ಪಾಲಿಕೆಯಿಂದ ಮಹಿಳೆಯರಿಗಾಗಿ ಸ್ತನ, ಗರ್ಭಕಂಠ ಹಾಗೂ ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರ

25/02/2026, 19:23

ಮಂಗಳೂರು(reporterkarnataka.com): ರೋಟರಿ ಕ್ಲಬ್ ಮಂಗಳೂರು, ಝಲೇಖಾ ಯೆನಪೊಯ ಇನ್ಸ್ಟಿಟ್ಯೂಟ್ ಆಫ್ ಆಂಕೋಲಾಜಿ ಹಾಗೂ ಮಂಗಳೂರು ಮಹಾನಗರ ಪಾಲಿಕೆಯ ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಸಹಯೋಗದೊಂದಿಗೆ ಮಹಿಳೆಯರಿಗಾಗಿ ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ಹಾಗೂ ಗರ್ಭಕೋಶದ ಕ್ಯಾನ್ಸರ್ ತಪಾಸಣಾ ಶಿಬಿರದ ಉದ್ಘಾಟನಾ ಸಮಾರಂಭವು ಎಸ್.ಕೆ.ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ಕಚೇರಿಯಲ್ಲಿ ಜರುಗಿತು.
ಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಹಿಳಾ ಸಿಬ್ಬಂದಿಗಳಿಗೆ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು, ಯಾವುದೇ ಅಂಜಿಕೆ ಇಲ್ಲದೇ ಮಹಿಳೆಯರು ಇದರ ಪ್ರಯೋಜನವನ್ನು ಪಡೆಯುವಂತೆ ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರೋಟರಿ ಕ್ಲಬ್ ಮಂಗಳೂರು ಇದರ ಸಮುದಾಯ ಸೇವಾ ನಿರ್ದೇಶಕರಾದ ರೋಟರಿಯನ್ ಪಿ.ಎಚ್.ಎಫ್. ಡಾ. ಸಿದ್ಧಾರ್ಥ ಶೆಟ್ಟಿ ಅವರು ಮಾತನಾಡಿ, ರೋಟರಿ ಫೌಂಡೇಶನ್ ಗ್ಲೋಬಲ್ ಗ್ರ್ಯಾಂಟ್ ಯೋಜನೆ ಮುಖಾಂತರ 1.25 ಕೋಟಿ ರೂ. ವೆಚ್ಚದಲ್ಲಿ ರೋಟರಿ ಕ್ಲಬ್ ಆಫ್ ಮಂಗಳೂರು ಸುಸಜ್ಜಿತ ಸೌಕರ್ಯವುಳ್ಳ “ವಿಮೆನ್ ವೆಲ್ ನೆಸ್ ಕ್ಲಿನಿಕ್” ಎನ್ನುವ ಬಸ್ ನ್ನು ಝಲೇಖಾ ಯೆನಪೊಯ ಆಸ್ಪತ್ರೆಗೆ ಹಸ್ತಾಂತರಿಸಿದ್ದು, ಪ್ರಸ್ತುತ ಕಾಲಘಟ್ಟದಲ್ಲಿ ಹೆಚ್ಚಾಗಿ ಕಾಣಿಸುತ್ತಿರುವ ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್ , ಗರ್ಭಕಂಠದ ಕ್ಯಾನ್ಸರ್ ಹಾಗೂ ಗರ್ಭಕೋಶದಂತಹ ಕ್ಯಾನ್ಸರ್ ಕಾಯಿಲೆ ಗಂಭೀರವಾಗುವ ಮುನ್ನವೇ ಆರಂಭಿಕ ಹಂತದಲ್ಲಿ ರೋಗವನ್ನು ಪತ್ತೆಹಚ್ಚಲು ಇದು ಸಹಕಾರಿಯಾಗಿದೆ ಎಂದು ತಿಳಿಸಿದರು.
ಝಲೇಕಾ ಯೆನಪೊಯ ಇನ್ಸ್ಟಿಟ್ಯೂಟ್ ಆಫ್ ಆಂಕೋಲಾಜಿ ವಿಭಾಗದ ಡಾ. ಅಶ್ವಿನಿ ಶೆಟ್ಟಿ ಅವರು ಮಹಿಳೆಯರಲ್ಲಿ ಕಂಡು ಬರುವ ಕ್ಯಾನ್ಸರ್ ರೋಗದ ಲಕ್ಷಣಗಳನ್ನು ವಿವರಿಸಿ ಪ್ರತಿಯೊಬ್ಬ ಮಹಿಳೆಯು ಯಾವುದೇ ಮುಜುಗರವಿಲ್ಲದೇ ಆರೋಗ್ಯ ತಪಾಸಣೆ ನಡೆಸುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿ ಹಾಗೂ ಉಪ ಆಯುಕ್ತರಾದ (ಕಂದಾಯ) ಅಕ್ಷತಾ, ರೋಟರಿ ಕ್ಲಬ್ ಮಂಗಳೂರು ಇದರ ಸದಸ್ಯರು, ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್
ಅಧ್ಯಕ್ಷ ಬಾಲು ಹಾಗೂ ಮಂಗಳೂರು ಮಹಾನಗರಪಾಲಿಕೆಯ ಕಚೇರಿ ಸಹಾಯಕರಾದ (ಕಂದಾಯ) ಭಾರತಿ ಉಪಸ್ಥಿತರಿದ್ದರು.
ಪಾಲಿಕೆಯ ಮಹಿಳಾ ಸಿಬ್ಬಂದಿಯವರು ಕ್ಯಾನ್ಸರ್ ತಪಾಸಣಾ ಶಿಬಿರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಇದರ ಪ್ರಯೋಜನ ಪಡೆದುಕೊಂಡರು.
ಪಾಲಿಕೆಯ ಸಮುದಾಯ ಸಂಘಟನಾಧಿಕಾರಿ ಮಾಲಿನಿ ರೋಡ್ರಿಗಸ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಎಸ್.ಕೆ. ಮುನ್ಸಿಪಲ್ ಎಂಪ್ಲಾಯಿಸ್ ಯೂನಿಯನ್ ನ ಲಕ್ಷ್ಮೀಕಾಂತ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು