11:19 PM Thursday26 - February 2026
ಬ್ರೇಕಿಂಗ್ ನ್ಯೂಸ್
ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ… ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ

ಇತ್ತೀಚಿನ ಸುದ್ದಿ

ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ: ಮಕ್ಕಳ ಹಿತದೃಷ್ಟಿಯಿಂದ ಸಾಮಾಜಿಕ ಜಾಲತಾಣ ನಿಯಂತ್ರಣಕ್ಕೆ ಸಚಿವ ಮಧು ಬಂಗಾರಪ್ಪ ಚಿಂತನೆ

26/02/2026, 23:07

ಬೆಂಗಳೂರು(reporterkarnataka.com): ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣಗಳನ್ನು (Social Media) ನಿಷೇಧಿಸುವ ಕುರಿತು ರಾಜ್ಯ ಸರ್ಕಾರ ಆಲೋಚಿಸುತ್ತಿದ್ದು, ಈ ನಿಟ್ಟಿನಲ್ಲಿ ಮಕ್ಕಳು, ಪೋಷಕರು ಮತ್ತು ತಜ್ಞರ ಅಭಿಪ್ರಾಯ ಪಡೆದು ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.
ಗುರುವಾರ ಬೆಂಗಳೂರಿನ ಜವಾಹರಲಾಲ್ ನೆಹರು ತಾರಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ವಿಜ್ಞಾನ ದಿನಾಚರಣೆ’ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.
ಪೋಷಕರು ಮೊದಲು ಎಚ್ಚೆತ್ತುಕೊಳ್ಳಬೇಕು ಮಕ್ಕಳು ಮೊಬೈಲ್ ಚಟಕ್ಕೆ ಬೀಳುವಲ್ಲಿ ಪೋಷಕರ ಪಾತ್ರದ ಬಗ್ಗೆ ಬೇಸರ ವ್ಯಕ್ತಪಡಿಸಿದ ಸಚಿವರು, “ಇವತ್ತಿನ ವ್ಯವಸ್ಥೆಯಲ್ಲಿ ಮಗು ಅಳುತ್ತಿದೆ ಅಥವಾ ಸುಮ್ಮನಿರಲಿ ಎಂದು ಪೋಷಕರೇ ತಮ್ಮ ಕೈಯಾರೆ ಮೊಬೈಲ್ ಕೊಡುತ್ತಾರೆ. ಸಮಸ್ಯೆಯ ಮೂಲ ಇರುವುದೇ ಅಲ್ಲಿ. ಮೊಬೈಲ್ ಮತ್ತು ಸಾಮಾಜಿಕ ಜಾಲತಾಣಗಳಿಂದ ಮಕ್ಕಳು ದಾರಿ ತಪ್ಪುತ್ತಿದ್ದಾರೆ ಎಂಬುದು ಕೇವಲ ನಮ್ಮ ರಾಜ್ಯದ್ದಲ್ಲ, ಇಡೀ ದೇಶದ ಸಮಸ್ಯೆಯಾಗಿದೆ,” ಎಂದರು.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸೂಚನೆಯಂತೆ ‘ಮೊಬೈಲ್ ಬಿಡಿ, ಪುಸ್ತಕ ಹಿಡಿಯಿರಿ’ ಎಂಬ ಆಂದೋಲನವನ್ನು ರೂಪಿಸಲಾಗುತ್ತಿದೆ ಎಂದು ತಿಳಿಸಿದ ಅವರು, “ಮುಖ್ಯಮಂತ್ರಿಗಳು ಈಗಾಗಲೇ ಎರಡು-ಮೂರು ಬಾರಿ ಈ ಬಗ್ಗೆ ಎಚ್ಚರಿಸಿದ್ದಾರೆ. ಇದನ್ನು ಕೇವಲ ತರಗತಿಗಳಿಗೆ ಸೀಮಿತಗೊಳಿಸದೆ, ಒಂದು ಜವಾಬ್ದಾರಿಯುತ ತೀರ್ಮಾನವಾಗಿ ಜಾರಿಗೆ ತರಬೇಕಿದೆ. ಈ ಕುರಿತು ವಿಸ್ತೃತ ಚರ್ಚೆಯ ಅಗತ್ಯವಿದೆ,” ಎಂದು ಹೇಳಿದರು.

ಅಭಿಪ್ರಾಯ ಸಂಗ್ರಹದ ನಂತರ ತೀರ್ಮಾನ
ಮಕ್ಕಳ ಅಭಿಪ್ರಾಯವನ್ನು ಹೇಗೆ ಪಡೆಯಲಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು:

* ಯಾವುದೇ ತೀರ್ಮಾನ ತೆಗೆದುಕೊಂಡರು ಅದು ಮಕ್ಕಳ ಹಿತದೃಷ್ಟಿಯಿಂದಲೇ ಇರುತ್ತದೆ.

* ಕೇವಲ ಮಕ್ಕಳಷ್ಟೇ ಅಲ್ಲ, ಶಿಕ್ಷಕರು ಮತ್ತು ಪೋಷಕರ ಜೊತೆಗೂ ಚರ್ಚೆ ಮಾಡಬೇಕಿದೆ.

* ಪೋಷಕರು ಈ ವಿಷಯದಲ್ಲಿ ಹೆಚ್ಚಿನ ಜವಾಬ್ದಾರಿ ತೋರಬೇಕು.

ಸದ್ಯಕ್ಕೆ ಈ ವಿಚಾರ ಚರ್ಚೆಯ ಹಂತದಲ್ಲಿದ್ದು, ಮುಖ್ಯಮಂತ್ರಿಗಳ ಮಾರ್ಗದರ್ಶನದಲ್ಲಿ ಶೀಘ್ರವೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು