10:41 AM Monday28 - September 2026
ಬ್ರೇಕಿಂಗ್ ನ್ಯೂಸ್
ಖಾಸಗಿ ಆಸ್ಪತ್ರೆ ಕೈಚೆಲ್ಲಿದ ಪ್ರಕರಣ: ಲೇಡೀಗೋಶನ್ ನಲ್ಲಿ ಪುನರ್ಜನ್ಮ ಪಡೆದ ಗರ್ಭಿಣಿ ಮಹಿಳೆ;… ಸೈಬರ್ ವಂಚನೆಗೆ ಬ್ರೇಕ್: 9,840 ಕೋಟಿ ಸ್ಪ್ಯಾಮ್ ಕರೆ ಪತ್ತೆಹಚ್ಚಿದ ಏರ್‌ಟೆಲ್ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ಮತ್ತೆ ಮುಖ್ಯಮಂತ್ರಿ ಆಗಲಿದ್ದಾರೆ ಸಿದ್ದರಾಮಯ್ಯ!: ಬೆಳ್ಳಿತೆರೆಗೆ ಭರ್ಜರಿ ಎಂಟ್ರಿ ಕೊಟ್ಟ ಮಾಜಿ ಸಿಎಂ ಮಡಿಕೇರಿ ಮತ್ತು ಕುಶಾಲನಗರ ತಾಲೂಕು ಬರಪೀಡಿತ ಎಂದು ಘೋಷಣೆ: ಶಾಸಕ ಡಾ.ಮಂತರ್ ಗೌಡ… ವಿಜಯನಗರ | ಹೊಸಪೇಟೆ ಬಳಿ ರೈಲು ಡಿಕ್ಕಿಯಾಗಿ 8 ಎಮ್ಮೆಗಳು ಸ್ಥಳದಲ್ಲಿಯೇ ಸಾವು *ಕಾಡಾನೆ ನಿಯಂತ್ರಣ ಚಟುವಟಿಕೆಗೆ ವಾಹನಗಳ ಕೊಡುಗೆ: ಅರಣ್ಯ ಇಲಾಖೆಗೆ ಹಸ್ತಾಂತರಿಸಿದ ಕೇಂದ್ರ ಹಣಕಾಸು… ಬಂಗಾಳ ಕೊಲ್ಲಿಯಲ್ಲಿ ವಾಯಭಾರ ಕುಸಿತ: ಮಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಮಳೆ ಅ.11ರಿಂದ ಕೆಆರ್‌ಎಸ್‌ನಲ್ಲಿ ಸಂಪ್ರದಾಯಬದ್ಧ ಕಾವೇರಿ ಆರತಿ: ಮುಖ್ಯಮಂತ್ರಿ ಉದ್ಘಾಟನೆ *ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ…

ಇತ್ತೀಚಿನ ಸುದ್ದಿ

ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು

26/02/2026, 23:18

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಪಟ್ಟಣದ ಜಗದ್ಗುರು ಶಿವ ಶಕ್ತಿ ಪೀಠದ ಸುಕ್ಷೇತ್ರ ಇರಕಲ್ ಮಠದ ಶ್ರೀ ಬಸವ ಪ್ರಭು ಪೂಜ್ಯರಿಂದ ಪ್ರತಿ ವರ್ಷದಂತೆ ಈ ವರ್ಷವೂ 26ನೇ ವರ್ಷದ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಿತು.


ವೇದಿಕೆಯನ್ನು ಉದ್ದೇಶಿಸಿ ಮಾತನಾಡಿದ ಮುದುಗಲ್ ಶ್ರೀ ಮಹಾಂತ ಸ್ವಾಮೀಜಿ ಸಾಲಿಮಠ ಕಲ್ಯಾಣ ಆಶ್ರಮ ತಿಮ್ಮಾಪುರ ಮಾತನಾಡಿ ಜೀವನದಲ್ಲಿ ಮಾಡಿದ ಪಾಪಗಳು ದೂರವಾಗಬೇಕಾದರೆ
ಶರಣರ ದರ್ಶನ ಶರಣರ ಪ್ರವಚನ ಕೇಳುವುದರಿಂದ ಮನಸ್ಸಿಗೆ ಶಾಂತಿ ನೆಮ್ಮದಿ ಸಿಗುತ್ತದೆ ಹಾಗೂ ಮಾಡಿದ ಪಾಪಗಳು ದೂರವಾಗುತ್ತವೆ ಎಂದು ಸಲಹೆ ನೀಡಿದರು.
ನಾಡಿನ ಅರ ಗುರು ಚರಮೂರ್ತಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮ ಅನಿಸಿಕೆಗಳನ್ನು ಹೇಳಲಾಯಿತು.
ಮಸ್ಕಿ ಶಾಸಕ ಬಸವನಗೌಡ ತುರುವಿಹಾಳ ಮಾತನಾಡಿ ಇಂತಹ ಕಾರ್ಯಕ್ರಮ ನಡೆಯುತ್ತಿರುವುದು ಬಹಳ ಸಂತೋಷದ ವಿಷಯ ಪ್ರತಿ ವರ್ಷವೂ ಇದೇ ತರ ಶ್ರೀಮಠದಲ್ಲಿ ನಡೆಯಲಿ ನಾವು ಜೊತೆಗಿರುತ್ತೇವೆ ಎಂದು ಭರವಸೆ ನೀಡಿದರು.
ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಲಾಯಿತು.

*ಮುತ್ತೈದೆಯರಿಗೆ ಉಡಿ ತುಂಬುವ ಕಾರ್ಯಕ್ರಮ:*
12 ನವ ಜೋಡಿಗಳ ಸಾಮೂಹಿಕ ವಿವಾಹಕ್ಕೆ ಪೂಜ್ಯರಿಂದ ನವ ಜೋಡಿಗಳಿಗೆ ಆಶಿರ್ವಾದಿಸಿ ಅವರ ಜೀವನ ಸುಖವಾಗಿರಲೆಂದು ಶುಭ ಹಾರೈಸಿದರು.
ಆರೋಗ್ಯ ಜಾತ್ರೆ ಪರಿಸರ ಜಾತ್ರೆ ಸುಜ್ಞಾನ ಸಂಗಮ ಕ್ರೀಡಾ ಜಾತ್ರೆ ಇನ್ನು ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು .
ದೂರ ದೂರಗಳಿಂದ ಭಕ್ತಾದಿಗಳ ಆಗಮಿಸಿ ಶ್ರೀಗಳ ಆಶೀರ್ವಾದ ಪಡೆದು ಪುನೀತರಾದರು.

ಇತ್ತೀಚಿನ ಸುದ್ದಿ

ಜಾಹೀರಾತು