12:25 AM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಅಂತಾರಾಜ್ಯ ಸೈಬರ್ ಕ್ರೈಂ ಜಾಲ: ಮಂಗಳೂರಿಗ ಸೇರಿದಂತೆ 6 ಮಂದಿ ಬಂಧನ

27/02/2026, 23:21

ಮಂಗಳೂರು(reporterkarnataka.com): ಬಂದರು ನಿವಾಸಿಯೊಬ್ಬರ ಬ್ಯಾಂಕ್ ಖಾತೆಯನ್ನು ವಂಚನೆಗೆ ಸಂಬಂಧಿಸಿದಂತೆ ಮಂಗಳೂರು ಸೇರಿದಂತೆ 6 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಅಂತಾರಾಜ್ಯ ಸೈಬರ್ ಕ್ರೈಂ ಜಾಲವನ್ನು ಮಂಗಳೂರು ಸೈಬರ್ ಅಪರಾಧ ಪೊಲೀಸ್ ಠಾಣೆಯ ತಂಡವು ಪತ್ತೆ ಹಚ್ಚಿದೆ. ಹೈದರಾಬಾದ್‌ನಲ್ಲಿ ಐವರು ಹಾಗೂ ಮಂಗಳೂರಿನಲ್ಲಿ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ನೆಲ್ಲೂರಿನ ಶೇಖ್ ಕರೀಮುಲ್ಲಾ ಯಾನೆ ರಸೂಲ್ (27), ಕರ್ನೂಲ್ನ ಬುಡಿದಿನ್ನೆ ವಂಶಿ ಯಾನೆ ಗುರು (21), ತೆಲಂಗಾಣದ ಹೈದರಾಬಾದ್‌ನ ಪಂಡಿತಿ ಕ್ರಾಂತಿ ಕುಮಾರ್ (36), ಮಂಗಳೂರಿನ ಮುಲ್ಕಿ ನಿವಾಸಿ ಇಬ್ರಾಹಿಂ (35), ಹೈದರಾಬಾದ್ನ ಬಡೆ ಶ್ರೀನಿವಾಸ್ (38) ಮತ್ತು ನೆಲ್ಲೂರಿನ ಉತ್ಸಲ ಸಂತೋಷ್ ಕೃಷ್ಣ (35) ಬಂಧಿತ ಆರೋಪಿಗಳು. ಈ ಆರೋಪಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಬ್ಯಾಂಕ್ ಖಾತೆದಾರರಿಗೆ ಕಮಿಷನ್ ಆಮಿಷವೊಡ್ಡಿ ವಂಚನೆ ಎಸಗುತ್ತಿದ್ದರು.
ಮಂಗಳೂರಿನ ಬಂದರು ನಿವಾಸಿ ಮೊಹಮ್ಮದ್ ಇಕ್ಬಾಲ್ ಎಂಬುವವರಿಗೆ ಅವರ ಸ್ನೇಹಿತ ಇಬ್ರಾಹಿಂ ಎಂಬಾತನು ವ್ಯವಹಾರದ ಉದ್ದೇಶಕ್ಕೆಂದು ಬ್ಯಾಂಕ್ ಖಾತೆಯನ್ನು ಕೇಳಿದ್ದನು. ಇದನ್ನು ನಂಬಿದ ಇಕ್ಬಾಲ್ ತಮ್ಮ ಬ್ಯಾಂಕ್ ಪಾಸ್‌ಬುಕ್, ಎಟಿಎಂ ಕಾರ್ಡ್, ಚೆಕ್ ಬುಕ್ ಹಾಗೂ ಏರ್ಟೆಲ್ ಸಿಮ್ ಕಾರ್ಡ್ ನೀಡಿದ್ದರು. ಆದರೆ ಬಂಧಿತ ಆರೋಪಿಗಳಿಂದ ಪೊಲೀಸರು ಒಟ್ಟು 18 ಮೊಬೈಲ್ ಫೋನ್‌ಗಳು 1 ಲ್ಯಾಪ್ಟಾಪ್, 12 ಸಿಮ್ ಕಾರ್ಡ್ಗಳು ಮತ್ತು 18 ಡೆಬಿಟ್ ಕಾರ್ಡ್ಗಳನ್ನು ವಶಪಡಿಸಿಕೊಂಡಿದ್ದಾರೆ. ಇದರೊಂದಿಗೆ ವಂಚನೆಗೆ ಬಳಸಲಾದ ಬ್ಯಾಂಕ್ ಖಾತೆಗಳ ವಿವರಗಳನ್ನು ಸಹ ತನಿಖಾ ತಂಡವು ಸಂಗ್ರಹಿಸಿದೆ.

*ಆಘಾತಕಾರಿ ವಂಚನಾ ವಿಧಾನ:*
ಆರೋಪಿಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಆಕರ್ಷಕ ಜಾಹೀರಾತು ನೀಡಿ, ಬ್ಯಾಂಕ್ ಖಾತೆದಾರರಿಗೆ ಶೇ.4 ರಿಂದ 6 ರಷ್ಟು ಕಮಿಷನ್ ನೀಡುವುದಾಗಿ ಆಮಿಷವೊಡ್ಡುತ್ತಿದ್ದರು. ದುರಾಸೆಗೊಳಗಾದವರಿಂದ ಖಾತೆ ವಿವರ ಮತ್ತು ಓಟಿಪಿ ಪಡೆದು ವಿದೇಶದಲ್ಲಿರುವ ಸೈಬರ್ ವಂಚಕರಿಗೆ ರವಾನಿಸುತ್ತಿದ್ದರು. ತನಿಖೆಯ ವೇಳೆ ಇವರಿಂದ ಒಟ್ಟು 72 ಬ್ಯಾಂಕ್ ಖಾತೆಗಳ ವಿವರ ಲಭ್ಯವಾಗಿದ್ದು, ಇವುಗಳ ಮೇಲೆ ದೇಶಾದ್ಯಂತ 272ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. ವಿಶೇಷವೆಂದರೆ, ಫೆ.26, 2026ರಂದು ಒಂದೇ ದಿನ ಈ ತಂಡವು 2 ಕೋಟಿ ರೂಪಾಯಿಗೂ ಅಧಿಕ ಹಣದ ವಹಿವಾಟು ನಡೆಸಿರುವುದು ಬೆಳಕಿಗೆ ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು