1:45 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕೊಲ್ಲಿ ಯುದ್ಧ: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯ

01/03/2026, 18:43

ಶಿವಮೊಗ್ಗ(reporterkarnataka.com): ರಾಜ್ಯ ಸರ್ಕಾರ ವಿದೇಶಾಂಗ ಸಚಿವಾಲಯದೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದು, ಅರಬ್ ರಾಷ್ಟ್ರಗಳಲ್ಲಿ ಸಿಲುಕಿರುವ ಕನ್ನಡಿಗರಿಗೆ ತೊಂದರೆಯಾಗದಂತೆ ಕರೆತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದರು.


ಅವರು ಇಂದು ಶಿವಮೊಗ್ಗದ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಅರಬ್ ದೇಶಗಳಲ್ಲಿ ಸಿಲುಕಿರುವ ಬಳ್ಳಾರಿಯ 30 ಜನರನ್ನು ವಾಪಸ್ಸು ಕರೆತರಲಾಗುವುದು ಎಂದು ಹೇಳಿದರಲ್ಲದೆ ದುಬೈ ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ ಎಂದರು.

*ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ಸು ಕರೆತರಲಾಗುವುದು:*
ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈದಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದರು ಎಂದರು.

*ಅಮೆರಿಕದ ತದ್ವಿರುದ್ಧ ನಿಲುವನ್ನು ಖಂಡಿಸುತ್ತೇನೆ:*
ಅಮೆರಿಕ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುವುದಾಗಿ ತಿಳಿಸಿದರು.
ಇರಾನ್ ಅಧ್ಯಕ್ಷ ಆಯಾತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.

*ಸದ್ಯಕ್ಕೆ ವಿದ್ಯುತ್ ದರ ಏರಿಕೆ ಇಲ್ಲ:*
ಏಪ್ರಿಲ್ ನಲ್ಲಿ ವಿದ್ಯುತ್ ದರ ಏರಿಕೆಯ ಪ್ರಸ್ತಾಪದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಸದ್ಯಕ್ಕೆ ಸರ್ಕಾರದ ಮುಂದೆ ಆ ಪ್ರಸ್ತಾಪವಿಲ್ಲ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು