2:13 AM Sunday26 - April 2026
ಬ್ರೇಕಿಂಗ್ ನ್ಯೂಸ್
New Delhi | 228 ಪ್ರಯಾಣಿಕರಿದ್ದ ವಿಮಾನದಲ್ಲಿ ಬೆಂಕಿ: ಸ್ವಲ್ಪದರಲ್ಲೇ ತಪ್ಪಿತು ಮತ್ತೊಂದು… ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ಇತ್ತೀಚಿನ ಸುದ್ದಿ

ಕನ್ನಡಿಗರ ರಕ್ಷಣೆಗೆ ಕೇಂದ್ರದ ಜತೆ ಮಾತುಕತೆ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

03/03/2026, 18:44

ಬೆಂಗಳೂರು(reporterkarnataka.com): ಅಮೆರಿಕ, ಇಸ್ರೇಲ್ – ಇರಾನ್ ಯುದ್ಧ ನಡೆಯುತ್ತಿರುವ ಸಂದರ್ಭದಲ್ಲಿ ದುಬೈಯಲ್ಲಿ ಸಿಲುಕಿ ಆತಂಕದಲ್ಲಿ ಸಿಲುಕಿರುವ ಕನ್ನಡಿಗರ ಜೊತೆ ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಇಂದು ಮಾತನಾಡಿ ಅವರಿಗೆ ಧೈರ್ಯ ತುಂಬಿದರು.

ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರನ್ನು ತಕ್ಷಣ ಕರ್ನಾಟಕಕ್ಕೆ ಕರೆದುಕೊಂಡು ಬರಲು ಕೇಂದ್ರ ಸರಕಾರದ ಜೊತೆ ಮಾತನಾಡುತ್ತೇನೆಂದು ಅವರು ಭರವಸೆ ನೀಡಿದರು. ಪ್ರಶಸ್ತಿ ಪಡೆಯಲೆಂದು ಒಟ್ಟು 61 ಜನರ ತಂಡವು ತೆರಳಿದ್ದು, ದುಬೈಯಲ್ಲಿ ವಾಸ್ತವ್ಯ ಇರುವುದಾಗಿ ತಂಡದವರು ನುಡಿದರು.
ಅರಸೀಕೆರೆಯ 5 ಜನರೂ ಇವರ ಜೊತೆಗೆ ಇರುವುದಾಗಿ ಹಾಗೂ ಹೋಟೆಲ್ ಒಂದರಲ್ಲಿ ತಂಗಿರುವುದಾಗಿ ಅವರು ಆತಂಕವನ್ನು ಹಂಚಿಕೊಂಡರು. ಇದೀಗ 7ನೇ ದಿನ ತಲುಪಿದೆ. ಇವತ್ತು ರಾತ್ರಿ ಇದ್ದ ವಿಮಾನವೂ ರದ್ದಾಗಿದೆ ಎಂದು ವಿವರಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರು ಇದರ ಸಂಬಂಧ ಆದ್ಯ ಗಮನ ಕೊಟ್ಟಿದ್ದಾರೆ. ಹಿಂದೆ ಉಕ್ರೇನ್‍ನಲ್ಲಿ ಇಂಥ ಸಮಸ್ಯೆ ಆದಾಗ ಕೇಂದ್ರ ಸರಕಾರವು ಅದನ್ನು ಬಗೆಹರಿಸಿತ್ತು. ಅಲ್ಲಿ ಸಿಲುಕಿದ್ದವರನ್ನು ಕರೆದುಕೊಂಡು ಬರುವ ವ್ಯವಸ್ಥೆ ಮಾಡಲಾಗಿತ್ತು. ಈ ಯುದ್ಧ ಅಚಾನಕ್ ಆಗಿ ಆರಂಭವಾಗಿದೆ. ದೆಹಲಿಯ ಸಂಬಂಧಿತರ ಜೊತೆ ನಾನು ಕೂಡ ಮಾತನಾಡುವೆ ಎಂದು ವಿಜಯೇಂದ್ರ ಅವರು ಧೈರ್ಯ ತುಂಬಿದರು. ತಂಡವು ಸುರಕ್ಷಿತವಾಗಿ ವಾಪಸ್ ಬರಲು ಕ್ರಮ ಕೈಗೊಳ್ಳುವಂತೆ ಕೋರುವುದಾಗಿ ತಿಳಿಸಿದರು. ಆತಂಕಗೊಳ್ಳದಿರಿ; ನೀವೆಲ್ಲರೂ ಸುರಕ್ಷಿತವಾಗಿ ವಾಪಸ್ ಬರಲು ಕ್ರಮ ಕೈಗೊಳ್ಳಲು ಕೋರಲಿದ್ದೇನೆ ಎಂದು ಧೈರ್ಯ ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು