2:31 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಪುತ್ತೂರು: ಅತ್ಯಂತ ಕೆಳ ಮಟ್ಟದಲ್ಲಿ ಹಲವು ಬಾರಿ ಜೆಟ್ ವಿಮಾನ ಹಾರಾಟ; ನಾಗರಿಕರಲ್ಲಿ ಆತಂಕ

03/03/2026, 19:09

ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ನಗರದಲ್ಲಿ ಮಂಗಳವಾರ ಮಧ್ಯಾಹ್ನ ಸಣ್ಣ ವಿಮಾನವೊಂದು ಹಲವು ಬಾರಿ ಭೂಮಿ ಮಟ್ಟಕ್ಕೆ ಅತೀ ಸಮೀಪದಲ್ಲಿ ಹಾರಾಟ ನಡೆಸುತ್ತಿದ್ದ ದೃಶ್ಯ ಕಂಡು ಬಂದಿದ್ದು, ಕೆಲ ಕಾಲ ಆತಂಕ ಮೂಡಿದ ಬೆನ್ನಲ್ಲೇ ಇದು ಭೂ ವಿಜ್ಞಾನಕ್ಕೆ ಸಂಬಂಧಿಸಿದ ಸರ್ವೇ ಕಾರ್ಯ ಎಂದು ತಿಳಿದು ಜನರು ನಿಟ್ಟುಸಿರು ಬಿಟ್ಟ ಘಟನೆ ನಡೆದಿದೆ.
ಪುತ್ತೂರು ಮಹಾಲಿಂಗೇಶ್ವರ ದೇವಾಲಯದ ವಠಾರದ ಗದ್ದೆ ಮೇಲ್ಬಾಗದಲ್ಲಿ ನೆಲ ಮಟ್ಟಕ್ಕೆ ಅತಿ ಸಮೀಪದಲ್ಲಿ ಜೆಟ್ ವಿಮಾನ ಹಾರಾಡುತ್ತಿದ್ದ ದೃಶ್ಯವನ್ನು ಜನರು ನೋಡಿದ್ದು, ಪದೇ ಪದೇ ನಗರದ ವಿವಿಧ ಭಾಗದಲ್ಲಿ ಹಾರಾಟ ನಡೆಸಿದೆ. ಸುಮಾರು10 ರಿಂದ 15 ಸುತ್ತು ಹಾರಾಟ ನಡೆಸಿದೆ.
ಇದು ಯಾರದ್ದು, ಯಾಕೆ ಹಾರಾಟ ನಡೆಸಿದೆ ಎನ್ನುವ ಮಾಹಿತಿ ಲಭ್ಯವಾಗಿರಲಿಲ್ಲ. ಏಕಾಏಕಿ ವಿಮಾನ ಹಾರಾಟ ನಡೆಸುತ್ತಿದ್ದ ದೃಶ್ಯ ಜನರಲ್ಲಿ ಆತಂಕ ಮೂಡಿಸಿತು. ಕೊನೆಗೂ ಇದು ಭೂಮಿಯ ರಚನೆ, ಅಧ್ಯಯನಕ್ಕೆ ಸಂಬಂಧಿಸಿದಂತೆ ನಡೆ ಸರ್ವೆಯಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಚಿಕ್ಕಮಗಳೂರು ಮತ್ತು ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಸರ್ವೆ ನಡೆಸುವ ಉದ್ದೇಶದಿಂದ ಈ ವಿಮಾನ ಮಂಗಳೂರು ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿತ್ತು. ಈ ಪ್ರದೇಶದಲ್ಲಿ ವೈಜ್ಞಾನಿಕ ಉದ್ದೇಶಕ್ಕಾಗಿ ಕಾರ್ಯನಿರ್ವಹಿಸುತ್ತಿದ್ದು, ವಿಶೇಷವಾಗಿ ಭೂಭೌತಿಕ ಸಮೀಕ್ಷೆ ನಡೆಸುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು