1:32 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು ಮಹತ್ವದ ಚರ್ಚೆ

03/03/2026, 19:53

ದಾವಣಗೆರೆ(reporterkarnataka.com); ಚೆನ್ನೈ ನ ಐಟಿಸಿ ಗ್ರ್ಯಾಂಡ್ ಚೋಳಾ ಹೋಟೆಲ್‌ನಲ್ಲಿ ಆಯೋಜಿಸಿದ್ದ ದಿ‌ ಥಿಂಕ್‌ಎಡು ಕಾನ್ಕ್ಲೇವ್ 2026 ಸಮಾವೇಶದಲ್ಲಿ ದಾವಣಗೆರೆ ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ಭಾಗವಹಿಸಿ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ.
ಕಾರ್ಯಕ್ರಮದಲ್ಲಿ ಆರೋಗ್ಯ ರಕ್ಷಣೆಯ ಮಹತ್ವವನ್ನು ಕೇಂದ್ರವಾಗಿಟ್ಟುಕೊಂಡು ವಿಶೇಷ ಸಮಾವೇಶ ನಡೆಯಿತು. ಈ ಸಮಾವೇಶದಲ್ಲಿ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಬಲಪಡಿಸುವುದು, ತಡೆಗಟ್ಟುವ ವೈದ್ಯಕೀಯ ಕ್ರಮಗಳ ಅಗತ್ಯತೆ, ಸಮಗ್ರ ಆರೋಗ್ಯ ಸೇವೆಗಳ ವಿಸ್ತರಣೆ, ಶಿಕ್ಷಣ ಮತ್ತು ಆರೋಗ್ಯ ನಡುವಿನ ಸಂಬಂಧ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಅರ್ಥಪೂರ್ಣ ಮತ್ತು ಸಮಗ್ರ ಚರ್ಚೆಗಳು ನಡೆದವು.


ಕಾರ್ಯಕ್ರಮದಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸಿ, ಆರೋಗ್ಯ ಕ್ಷೇತ್ರದ ಪ್ರಗತಿ, ಜನಕೇಂದ್ರಿತ ನೀತಿಗಳ ಅವಶ್ಯಕತೆ ಹಾಗೂ ಭವಿಷ್ಯದ ಆರೋಗ್ಯ ಭದ್ರತೆ ಕುರಿತು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಸಾರ್ವಜನಿಕ ಆರೋಗ್ಯ ಮೂಲಸೌಕರ್ಯವನ್ನು ಬಲಪಡಿಸುವುದು, ತಡೆಗಟ್ಟುವ ಆರೋಗ್ಯ ಕ್ರಮಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುವುದು ಹಾಗೂ ಸಮಗ್ರ ಆರೋಗ್ಯ ಸೇವೆಗಳನ್ನು ಎಲ್ಲ ವರ್ಗಗಳಿಗೂ ತಲುಪಿಸುವುದು ಕಾಲದ ಅವಶ್ಯಕತೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.
ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಗಣ್ಯರು, ತಜ್ಞರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಈ ಸಮಾವೇಶ ಅರ್ಥಪೂರ್ಣವಾಗಿ ಜರುಗಿತು.

ಇತ್ತೀಚಿನ ಸುದ್ದಿ

ಜಾಹೀರಾತು