10:24 AM Friday16 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ: ಅನಂತರಾಜ ಗೌಡ,ಲೋಕೇಶ್ವರಿ ವಿನಯಚಂದ್ರ, ಲಲಿತ ಅಯ್ಯಣ್ಣಗೆ ಪ್ರಶಸ್ತಿ

04/03/2026, 12:18

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯು 2025 ನೇ ಸಾಲಿನ ಗೌರವ ಪ್ರಶಸ್ತಿ ಪ್ರಕಟಿಸಲಾಗಿದೆ. ಇದೇ ಮಾರ್ಚ್ 14 ರಂದು ಮಂಗಳೂರಿನ ಊರ್ವ ಸ್ಟೋರ್ ಸಮೀಪದಲ್ಲಿರುವ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಗೌರವ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.
ಪ್ರಶಸ್ತಿಯು 50 ಸಾವಿರ ರೂ.ನಗದು ಹಾಗೂ ಪ್ರಶಸ್ತಿ ಫಲಕ ಒಳಗೊಂಡಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರಿನ ಅನಂತರಾಜ ಗೌಡ (ಸಾಹಿತ್ಯ ಮತ್ತು ಸಂಶೋಧನಾ ಕ್ಷೇತ್ರ), ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಲೋಕೇಶ್ವರಿ ವಿನಯಚಂದ್ರ (ಅರೆಭಾಷಿಕ ಸಂಘಟನಾ ಕ್ಷೇತ್ರ) ಮತ್ತು ಕೊಡಗು ಜಿಲ್ಲೆ ಮಡಿಕೇರಿಯ ಕಟ್ರತನ ಲಲಿತ ಅಯ್ಯಣ್ಣ (ಅರೆಭಾಷೆ ಸಾಹಿತ್ಯ ಕ್ಷೇತ್ರ) ಇವರುಗಳನ್ನು ಆಯ್ಕೆ ಮಾಡಲಾಗಿದೆ.
ಮಂಗಳೂರಿನಲ್ಲಿ ಮಾರ್ಚ್ 14ರಂದು ನಡೆಯುವ ಸಮಾರಂಭದಲ್ಲಿ ಅಕಾಡೆಮಿ ಪ್ರಕಟಿತ ಪುಸ್ತಕಗಳ ಬಿಡುಗಡೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಕಲಾವಿದರಿಗೆ ವಾದ್ಯ ಪರಿಕರಗಳ ವಿತರಣೆ ಹಾಗೂ ಅರೆಭಾಷೆ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಅಕಾಡೆಮಿ ಅದ್ಯಕ್ಷರಾದ ಸದಾನಂದ ಮಾವಜಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು