11:40 AM Friday7 - August 2026
ಬ್ರೇಕಿಂಗ್ ನ್ಯೂಸ್
ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ…

ಇತ್ತೀಚಿನ ಸುದ್ದಿ

ನಿವೃತ್ತ ಮುಖ್ಯೋಪಾಧ್ಯಾಯ ಮೊರಬನಹಳ್ಳಿ ಜಿ.ಲಕ್ಷ್ಮೀಪಾಲಪ್ಪ ಇನ್ನಿಲ್ಲ: ಗಣ್ಯರ ಸಂತಾಪ

10/09/2021, 17:26

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬನಹಳ್ಳಿ ಗ್ರಾಮದ ವಾಲ್ಮೀಕಿ ಸಮುದಾಯದ ಹಿರಿಯರು, ನಿವೃತ್ತ ಮುಖ್ಯೋಪಾಧ್ಯಾಯರಾದ ಜಿ.ಲಕ್ಷ್ಮೀಪಾಲಪ್ಪ(75) ಅವರು ಕೂಡ್ಲಿಗಿ ಪಟ್ಟಣದ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.

ಅವರು ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಮೃತರು ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರನ್ನು, ಅಪಾರ ಬಂಧು ಹಾಗೂ ಬಳಗವನ್ನು ಅಗಲಿದ್ದಾರೆ.

ಅವರು ಪ್ರೌಢಶಾಲಾ ವಿಭಾಗದಲ್ಲಿ ಆಂಗ್ಲಭಾಷೆ ಹಾಗೂ ವಿಜ್ಞಾನ ವಿಷಯದಲ್ಲಿ ಉಪಾಧ್ಯಾಯರಾಗಿದ್ದರು. ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕುಂಚೂರು,ಬಳ್ಳಾರಿಯ ಕುರುಗೋಡು, ಜೋಗಿಹಳ್ಳಿ, ಬಣವಿಕಲ್ಲು, ಕೂಡ್ಲಿಗಿ, ಹಿರೇಹೆಗ್ಡಾಳು ಗ್ರ‍ಾಮದಲ್ಲಿ ಹಾಗೂ ಇದಕ್ಕೂ ಮುನ್ನ ಬೇರೆ ಜಿಲ್ಲೆಗಳಲ್ಲಿ ತಮ್ಮ ಕರ್ಥವ್ಯ ನಿರ್ವಹಿಸಿದ್ದಾರೆ. ಅವರು ಹದಿನೈದು ವರ್ಷಗಳ ಹಿಂದೆ ಹಿರೇಹೆಗ್ಡಾಳು ಗ್ರಾಮದ ಪ್ರೌಢಶಾಲೆಯಲ್ಲಿ, ಮುಖ್ಯೋಪಾಧ್ಯಾಯರಾಗಿ ಕೆಲ ವರ್ಷಗಳ ಕಾಲ ಕರ್ಥವ್ಯ ನಿರ್ವಹಿಸಿ ನಂತರ ವಯೋ ನಿವೃತ್ತಿ ಹೊಂದಿದ್ದರು.

ಸಂತಾಪ: ಜಿ.ಲಕ್ಷ್ಮೀಪಾಲಪ್ಪರ ಅಗಲಿಕೆಗೆ ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಮುದಾಯದ ಹಿರಿಯರು, ವಿವಿಧ ಸಮುದಾಯಗಳ ಮುಖಂಡರು, ವಿವಿಧ

ಸಂಘ – ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ

ಪಕ್ಷಗಳ ಮುಖಂಡರು, ಸರ್ಕಾರಿ ನೌಕರರ ಸಂಘ ಹಾಗೂ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು. ವಿವಿಧ ಜನ ಪ್ರತಿನಿಧಿಗಳು, ಮುಖ್ಯೋಪಾಧ್ಯಾಯರ ಬಳಗ ಹಾಗೂ ಅವರ ಸ್ನೇಹ ಬಳಗ, ಕೂಡ್ಲಿಗಿ ಪಟ್ಟಣದ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಹಳೇ ವಿದ್ಯಾರ್ಥಿಗಳು ಹಾಗೂ ಜಿಲ್ಲೆಯ ವಿವಿಧ ಭಾಗದ ಅವರ ಶಿಷ್ಯಬಳಗ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು