6:51 PM Tuesday21 - April 2026
ಬ್ರೇಕಿಂಗ್ ನ್ಯೂಸ್
ಕಳಸ: ಕಾಫಿ ತೋಟದ ಕಾರ್ಮಿಕರ ಮಕ್ಕಳ ಮೇಲೆ ಸಾಕು ನಾಯಿಗಳ ದಾಳಿ; ಓರ್ವ… ಪ್ರಧಾನಿ ಮೋದಿ ಜತೆ ಗುಟ್ಟಾಗಿ ಮಾತನಾಡಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಇಡಿ ಶಾಕ್: ಶಾಸಕ ಹ್ಯಾರಿಸ್, ನಲಪಾಡ್ ನಿವಾಸ ಸೇರಿ 17… ಚಿರತೆಯಿಂದ ಅತ್ತೆಯ ಕಾಪಾಡಿದ ಸೊಸೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ: ಸಚಿವ ಲಕ್ಷ್ಮಿ… ಮೈಸೂರು | ಕಾವೇರಿ ನದಿಯಲ್ಲಿ ಮುಳುಗಿ 6 ಜನ‌ ಜಲಸಮಾಧಿ: ದರ್ಗಾಕ್ಕೆ ಬಂದವರು… ಎನ್ ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರುವ ಭಯದಿಂದ ಸ್ಥಳೀಯ ಸಂಸ್ಥೆ ಚುನಾವಣೆ ನಡೆಸುತ್ತಿಲ್ಲ:… ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣ: ಸಂತ್ರಸ್ತರ ಕುಟುಂಬಕ್ಕೆ ಕಡೆಗೂ ಸಿಕ್ತು ಸರ್ಕಾರಿ ನೌಕರಿ… ಎನ್. ಆರ್. ಪುರ | ಭದ್ರಾ ನದಿಯ ಬ್ಯಾಕ್ ವಾಟರ್ ನಲ್ಲಿ ಈಜಲು… ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದಿಂದ ಹೊಸ ಅತಿಥಿಗಳು: ಸಚಿವ ಈಶ್ವರ್ ಖಂಡ್ರೆಯಿಂದ 4 ಚೀತಗಳಿಗೆ… ನವ ಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ: ಕರಾವಳಿ ಪ್ರವಾಸೋದ್ಯಮಕ್ಕೆ ಉತ್ತೇಜನ

ಇತ್ತೀಚಿನ ಸುದ್ದಿ

ಪಚ್ಚನಾಡಿ ಎಸ್ ಟಿ ಪಿ ಕಾಮಗಾರಿ: ಅವಗಣನೆಗೆ ಶಾಸಕ ಡಾ. ಭರತ್ ಶೆಟ್ಟಿ ಆಕ್ರೋಶ

04/03/2026, 20:33

ಮಂಗಳೂರು(reporterkarnataka.com): ನಗರದ ಪಚ್ಚನಾಡಿ ಎಸ್ ಟಿಪಿ ಬಳಿ ಒಳಚರಂಡಿ ಕಾಮಗಾರಿ, ಉನ್ನತೀಕರಣ ಯೋಜನೆಗೆ ಹಾಗೂ ಸುರತ್ಕಲ್ ಮತ್ತು ದಕ್ಷಿಣ ಕ್ಷೇತ್ರದ ಎಸ್ ಟಿಪಿ ಮೇಲ್ದರ್ಜೆ ಚಾಲನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬುಧವಾರ ನೀಡಿದ್ದು, ಸ್ಥಳೀಯ ಶಾಸಕನಾಗಿ ಆಹ್ವಾನ ನೀಡದೆ ಇರುವುದಕ್ಕೆ ಶಾಸಕ ಡಾ. ಭರತ್ ಶೆಟ್ಟಿ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕೇಂದ್ರದ ಸ್ವಚ್ಛ ಭಾರತ್ ಹಾಗೂ ಎನ್ ಜಿ ಟಿ ಅನುದಾನ
40 ಕೋಟಿ ಅನುದಾನ ಬಂದಿದೆ. ರಾಜ್ಯ ಸರಕಾರದ ಪಾತ್ರ ಕೇವಲ ಅನುಷ್ಠಾನ ಮಾತ್ರ.
ಒಳಚರಂಡಿ ಯೋಜನೆಗೆ ನನ್ನ ಪ್ರಥಮ ಅವಧಿಯಲ್ಲಿ ಕಾಮಗಾರಿಗೆ ಸಂಬಂಧಿಸಿದಂತೆ ಪತ್ರ ಬರೆದು ಅನುದಾನ ತರಲು ಕ್ರಮ ವಹಿಸಲಾಗಿತ್ತು ಎಂದಿದ್ದಾರೆ.
ಸಚಿವ ಗುಂಡೂರಾವ್ ಉಸ್ತುವಾರಿ ಸಚಿವರಾಗಿ ಜಿಲ್ಲೆಗೆ ಬರುವುದೇ ಅಪರೂಪ. ಇದರ ನಡುವೆ ಸರ್ಕಾರದ ಸಭೆ, ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕ್ರಮ ಎಂಬಂತೆ ಬಿಂಬಿಸಿ ಹೋಗುತ್ತಾರೆ.
ಸ್ಥಳೀಯ ಶಾಸಕನ್ನಾಗಿ ಪಚ್ಚನಾಡಿಯಲ್ಲಿ ನನ್ನ ಉಪಸ್ಥಿಯಲ್ಲಿ ನಡೆಯಬೇಕಿತ್ತು.
ಸ್ಥಳೀಯ ಕಾಂಗ್ರೆಸ್ ನಾಯಕರ ಕುಮ್ಮಕ್ಕುನಿಂದ ಅಧಿಕಾರಿಗಳು ಕೂಡ ಮಾಹಿತಿ ನೀಡಿಲ್ಲ.
ಜಿಲ್ಲೆಯಲ್ಲಿ ಬಿಜೆಪಿ ಶಾಸಕರ ಪ್ರಾಬಲ್ಯ ಹಾಗೂ ಉತ್ತಮ ಕೆಲಸ ಕಾರ್ಯ ವನ್ನು ಕಾಂಗ್ರೆಸ್ ಗೆ ಸಹಿಸಿಕೊಳ್ಳ ಲಾಗುತ್ತಿಲ್ಲ. ಇದೀಗ ತಮ್ಮದೇ ಸಾಧನೆ ಎಂಬಂತೆ ಕ್ರೆಡಿಟ್ ಪಡೆಯಲು ಹವಣಿಸುತ್ತಿದೆ ಎಂದು ವ್ಯಂಗ್ಯ ವಾಡಿದರು.
ಸಂಬಂಧ ಪಟ್ಟವರ ಮೇಲೆ ಹಕ್ಕು ಚ್ಯುತಿ ಮಂಡನೆ ಮಾಡುವೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು