2:16 PM Sunday26 - April 2026
ಬ್ರೇಕಿಂಗ್ ನ್ಯೂಸ್
ಶಿಕ್ಷಕರೇ ಇಲ್ಲದ ಶಾಲೆಗಳಿಗೆ ಶೇ. 94 ಬಂದಿದ್ದು ಹೇಗೆ? ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ದೊಡ್ಡ… ತಂದೆ ಬೈದ ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆಗೆ ಶರಣು ಬಳ್ಳಾರಿ | ಪೊಲೀಸ್ ಶ್ವಾನಗಳ ಬಗ್ಗೆ ವಿಶೇಷ ಕಾಳಜಿ: ತಂಪಿಗಾಗಿ ಕೂಲರ್; ಕುಡಿಯಲು… ಶಿವಮೊಗ್ಗ | ಹುಡುಗಿ ವಿಚಾರಕ್ಕೆ ಅಪ್ರಾಪ್ತನಿಗೆ ಲಾಂಗಿನೇಟು: ತಲೆಗೇ ಸಿಲುಕಿಕೊಂಡ ಲಾಂಗ್ ಕಾಂತಾರ ದೈವ ಪಾತ್ರದ ಅನುಕರಣೆ ವಿವಾದ: ಬಾಲಿವುಡ್ ನಟ ರಣವೀರ್ ಚಾಮುಂಡೇಶ್ವರಿಯಲ್ಲಿ ಕ್ಷಮೆ… ಚಿಕ್ಕಮಗಳೂರು: ಸೊಪ್ಪು ತರಲು ಹೋದ ವೃದ್ಧೆ ಹೇಮಾವತಿ ನದಿಯಲ್ಲಿ ನೀರುಪಾಲು ಮೇಕೆದಾಟು ಕಾವೇರಿ ಸಂಗಮದಲ್ಲಿ ಆಟವಾಡುತ್ತಿದ್ದವರ ಮೇಲೆ ನುಗ್ಗಿಬಂದ ಕಾಡಾನೆ: ಎದ್ದು ಬಿದ್ದೋಡಿದ ಪ್ರವಾಸಿಗರು Kodagu | ವಿರಾಜಪೇಟೆ: 9 ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟಿದ ಅರಣ್ಯ ಇಲಾಖೆ ಬೆಂಗಳೂರಿನಲ್ಲಿ ಭೀಕರ ಅಗ್ನಿ ದುರಂತ: 10 ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ ತುಮಕೂರು: ಒಂದು ವಾರದ ಅಂತರದಲ್ಲಿ 32 ನವಿಲುಗಳು ಸಾವು; ತಾಪಮಾನ ಕಾರಣ?

ಇತ್ತೀಚಿನ ಸುದ್ದಿ

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ ನಾಳೆ ಉದ್ಘಾಟನೆ

05/03/2026, 20:12

ಮಂಗಳೂರು(reporterkarnataka.com): ಬಿ.ಸಿ ರೋಡ್‌ನಲ್ಲಿ 2012ರಿಂದ ಕಾರ್ಯಾಚರಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಬಿ.ಸಿ. ರೋಡ್ ಶಾಖೆಯು ಸಂಘದ ಸದಸ್ಯರ ಅಪೇಕ್ಷೆಯಂತೆ ವಿಸ್ತಾರಗೊಂಡು ಸುಸಜ್ಜಿತವಾದ ಹವಾನಿಯಂತ್ರಿತ ಶಾಖೆಯಾಗಿ ಪರಿವರ್ತಿತಗೊಳ್ಳಲಿದೆ. ಮಾರ್ಚ್ 6ರಂದು ಶುಕ್ರವಾರ ಸಂಜೆ 4.35 ಕ್ಕೆ ನವೀಕೃತ, ವಿಸ್ತ್ರತ ಹಾಗೂ ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆಯನ್ನು ಮಾಜಿ ಸಚಿವ ಬಿ. ರಮಾನಾಥ ರೈ ಯವರು ಸ್ಥಳೀಯ ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಉದ್ಘಾಟಿಸಲಿದ್ದಾರೆ.
ಸಹಕಾರ ತತ್ವದ ಮೂಲಕ ಸಾರ್ವಜನಿಕ ಸೇವೆಯ ಸದುದ್ದೇಶದ ಧ್ಯೇಯದೊಂದಿಗೆ ಸಾಕಾರಗೊಳಿಸುವ ಮುಖ್ಯ ಉದ್ದೇಶದೊಂದಿಗೆ ಮಂಗಳೂರು ತಾಲೂಕಿನ ಬೆಂದೂರ್‌ವೆಲ್‌ನಲ್ಲಿ 30. 1.2012ರಲ್ಲಿ ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿಯವರ ಅಮೃತ ಹಸ್ತದಿಂದ ಉದ್ಘಾಟನೆಗೊಂಡು, ದಶಮಾನೋತ್ಸವ ಸಂದರ್ಭದಲ್ಲಿ ಸ್ವಂತ ಆಡಳಿತ ಹಾಗೂ ಪ್ರಧಾನ ಕಚೇರಿಯನ್ನು ನಗರದ ಪಡೀಲ್‌ನಲ್ಲಿ ಹೊಂದಿ, ಕಾರ್ಯನಿರ್ವಹಿಸುತ್ತಿರುವ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ವು ಉನ್ನತ ಸಾಧನೆಯ ಹಾದಿಯಲ್ಲಿದೆ.
2020 ರಂದು ಸ್ವಂತ ನಿವೇಶನದಲ್ಲಿ ಸ್ವಂತ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸವೂ ಬಿ. ಜನಾರ್ದನ ಪೂಜಾರಿಯವರ ದಿವ್ಯಹಸ್ತದಿಂದ ನೆರವೇರಿ, ದಿನಾಂಕ 2022ರಲ್ಲಿ ಲೋಕಾರ್ಪಣೆಗೊಂಡಿದೆ. ಸಂಘದ ದಶಮಾನೋತ್ಸವದ ಸಂದರ್ಭದಲ್ಲಿ ಸುಸಜ್ಜಿತವಾದ ಹವಾನಿಯಂತ್ರಿತ ಸ್ವಂತ ಕಟ್ಟಡವನ್ನು ಹೊಂದಿದ ದಕ್ಷಿಣ ಕನ್ನಡ ಜಿಲ್ಲೆಯ ಏಕಮಾತ್ರ ವಿವಿಧೋದ್ದೇಶ ಸಹಕಾರಿ ಸಂಘವಾಗಿದೆ. ಅಲ್ಪಾವಧಿಯಲ್ಲಿ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 33 ಶಾಖೆಗಳು ಆರಂಭವಾಗಿ ನುರಿತ ಸಿಬ್ಬಂದಿ ವರ್ಗದ ಅತ್ಯುತ್ತಮ ಗುಣಮಟ್ಟದ ಸೇವೆಗಾಗಿ ಈಗಾಗಲೇ ರಾಜ್ಯ ಹಾಗೂ ರಾಷ್ಟçಮಟ್ಟದ ಹಲವು ಪ್ರಶಸ್ತಿಗಳ ಗರಿಗಳನ್ನು ಮುಡಿಗೇರಿಸಿಕೊಂಡಿದೆ.
ಆತ್ಮಶಕ್ತಿ ಸಹಕಾರಿ ಸಂಘವು ಮಹಿಳಾ ಸಬಲೀಕರಣದೊಂದಿಗೆ ಶೇ. 95 ಮಹಿಳಾ ಸಿಬ್ಬಂದಿಗಳಿಂದ ಗ್ರಾಹಕರಿಗೆ ಅತ್ಯುತ್ತಮ ಸೇವೆಯೊಂದಿಗೆ ನಿರಂತರವಾಗಿ ಲಾಭಗಳಿಸುತ್ತಾ ಮುಂದುವರಿದಿದೆ. ಮುಂದಿನ ದಿನಗಳಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಮಾತ್ರವಲ್ಲದೇ ಕೊಡಗು, ಚಿಕ್ಕಮಗಳೂರು ಹಾಗೂ ಮೈಸೂರು ಜಿಲ್ಲೆಗಳ ವ್ಯಾಪ್ತಿಗಳಿಗೆ ತನ್ನ ಶಾಖೆಗಳನ್ನು ವಿಸ್ತರಿಸಿ, 50 ಶಾಖೆಗಳನ್ನು ಹೊಂದುವ ಯೋಜನೆಯನ್ನು ಹಮ್ಮಿಕೊಂಡಿದೆ.
ನವೀಕೃತ ಶಾಖೆಯ ಉದ್ಘಾಟನಾ ಸಮಾರಂಭದ ಪ್ರಯಕ್ತ 100 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. ೮.೫೦, ೫೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. ೧೦.೦೦ ಹಾಗೂ ೧೦೦೦ ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. ೧೦.೫೦ ವನ್ನು ನೀಡಲಾಗುತ್ತಿದ್ದು, ಚಿನ್ನಾಭರಣ ಸಾಲಗಳಿಗೆ ಪ್ರತಿ ಗ್ರಾಂ ಗೆ ಗರಿಷ್ಟ ಮೌಲ್ಯ ರೂ. ೧೨,೦೦೦/- ರವರೆಗೆ ಯಾವುದೇ ಸೇವಾ ಶುಲ್ಕವಿಲ್ಲದೆ ಸಾಲವನ್ನು ಸದಸ್ಯರಿಗೆ ನೀಡಲಾಗುವುದು. ನಮ್ಮ ಎಲ್ಲಾ ಶಾಖೆಗಳಲ್ಲಿ ಇ-ಮುದ್ರಾಂಕ, ನೆಫ್ಟ್, ಆರ್‌ಟಿಜಿಎಸ್ ಸೇವೆಯು ವ್ಯವಹಾರದ ಸಮಯದಲ್ಲಿ ಲಭ್ಯವಿದ್ದು, ಅದೇ ರೀತಿ ವಿಮಾ ಪಾಲಿಸಿಗಳಾದ ಎಲ್‌ಐಸಿ, ಕೇರ್, ಇಫ್ಕೋಟೋಕಿಯ, ಜನರಲ್ ಇನ್ಸುರೆನ್ಸ್ ಕಂಪೆನಿ ಮುಂತಾದ ಕಂಪೆನಿಗಳ ವಿಮಾ ಸೌಲಭ್ಯಗಳು ಲಭ್ಯವಿರುತ್ತದೆ ಎಂದು ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್‌ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇತ್ತೀಚಿನ ಸುದ್ದಿ

ಜಾಹೀರಾತು