3:05 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮುಂಬೈ ಟು ಮಂಗಳೂರು ಡ್ರಗ್ಸ್ ಸರಬರಾಜು: ವಿದ್ಯಾರ್ಥಿಗಳೇ ಗುರಿ; 6 ಮಂದಿಯ ಬಂಧನ

05/03/2026, 21:26

ಮಂಗಳೂರು(reporterkarnataka.com): ನಗರದ​ ವಿವಿಧೆಡೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಮಹಿಳೆಯರಿಗೆ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿದ ಮೇಲೆ 6 ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಮಂಗಳೂರು ದಕ್ಷಿಣ ಮತ್ತು ಉತ್ತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮತ್ತು ಹೈಡ್ರೋ ವೀಡ್ ಗಾಂಜಾ ವಶಪಡಿಸಿಕೊಳ್ಳಲಾಗಿದೆ.
​ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಲಾಸಿಕ್ ಕಂಫರ್ಟ್ ಲಾಡ್ಜ್‌ನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮೊಹಮ್ಮದ್ ಸಯ್ಯದ್ ಅಫ್ರೀದಿ, ಮಕ್ಸೂದ್ ಸಾಗ್, ಅಹಮ್ಮದ್ ಅಲಿ ಅರ್ಫಾನ್ ಮತ್ತು ಫೆಲಿಕ್ಸ್ ಎಂಬುವವರನ್ನು ಬಂಧಿಸಲಾಗಿದೆ. ಇವರಿಂದ 53.87 ಗ್ರಾಂ ಎಂಡಿಎಂಎ, 103.20 ಗ್ರಾಂ ಹೈಡ್ರೋ ವೀಡ್ ಗಾಂಜಾ ಹಾಗೂ ಎಂಜಿ ಹೆಕ್ಟರ್ ವಾಹನವನ್ನು ಜಪ್ತಿ ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲಿ ಉತ್ತರ ಠಾಣಾ ಪೊಲೀಸರು ಬಂದರ್‌ನ ಗ್ರೀನ್ ಪಾರ್ಕ್ ಮೈದಾನದ ಬಳಿ ದಾಳಿ ನಡೆಸಿ ಎಡೆಲ್ ರೋಚ್ ಮತ್ತು ಆರೋನ್ ವಿಶಾಲ್ ಎಂಬುವವರನ್ನು ಬಂಧಿಸಿದ್ದು, ಅವರಿಂದ ಸುಮಾರು 1 ಕೆಜಿಗೂ ಅಧಿಕ ಗಾಂಜಾ ಮತ್ತು ಮಾರುತಿ ಸ್ವಿಫ್ಟ್ ಕಾರನ್ನು ವಶಕ್ಕೆ ಪಡೆದಿದ್ದಾರೆ.
​ಪೊಲೀಸ್ ತನಿಖೆಯ ವೇಳೆ ಡ್ರಗ್ಸ್ ಜಾಲದ ಅಂತರರಾಜ್ಯ ನಂಟು ಬಯಲಾಗಿದೆ. ಮುಂಬೈ ಮೂಲದ ಸಂದೀಪ್ ಶೆಟ್ಟಿ ಎಂಬಾತ ಹೈಡ್ರೋ ವೀಡ್ ಗಾಂಜಾವನ್ನು ವಿಮಾನದ ಮೂಲಕ ಬೆಂಗಳೂರಿಗೆ ಸಾಗಿಸುತ್ತಿದ್ದ ಎನ್ನಲಾಗಿದೆ. ಅಲ್ಲಿಂದ ಮಂಗಳೂರಿಗೆ ತಲುಪಿಸಲು ಎಡೆಲ್ ರೋಚ್‌ನನ್ನು ನೇಮಿಸಿಕೊಳ್ಳಲಾಗಿತ್ತು. ಈ ಜಾಲವು ವ್ಯವಸ್ಥಿತವಾಗಿ ಬೆಂಗಳೂರಿನಿಂದ ಮಾದಕ ವಸ್ತುಗಳನ್ನು ತರಿಸಿ ಮಂಗಳೂರಿನ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದೆ.

ಇತ್ತೀಚಿನ ಸುದ್ದಿ

ಜಾಹೀರಾತು