12:15 PM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮುಲ್ಕಿ ಹರೀಶ್ ಸಾಲ್ಯಾನ್ ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ, 10 ಸಾವಿರ ದಂಡ

05/03/2026, 21:32

ಮಂಗಳೂರು(reporterkarnataka.com): ಮುಲ್ಕಿ ಪೇಟೆಯ ಟೂರಿಸ್ಟ್ ಕಾರು ಪಾರ್ಕಿಂಗ್ ಬಳಿಯ ಉಲ್ಲಂಜೆ ಎಂಬಲ್ಲಿಯ ಹರೀಶ್ ಸಾಲ್ಯಾನ್ ಎಂಬವರನ್ನು ಕೊಲೆಗೈದ ಪ್ರಕರಣ ಸಂಬಂಧಿಸಿದಂತೆ ಆರೋಪಿ ಮುರುಗನ್ ಎಂಬಾತನಿಗೆ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
2023 ಮಾರ್ಚ್ 19ರಂದು ರಾತ್ರಿ ಸುಮಾರು 9-45 ಗಂಟೆಗೆ ಬಪ್ಪನಾಡು ಗ್ರಾಮದ ಮುಲ್ಕಿ ಪೇಟೆಯ ಟುರಿಸ್ಟ್ ಕಾರು ಪಾರ್ಕಿಂಗ್ ಬಳಿ ಉಲ್ಲಂಜೆ ಎಂಬಲ್ಲಿಯ ಆರೋಪಿ ಮುರುಗನ್ ಎಂಬಾತ ಹರೀಶ್ ಸಾಲ್ಯಾನ್(47)ಎಂಬವರನ್ನು ಹಣಕಾಸಿನ ದ್ವೇಷದಿಂದ ಕೆಂಪು ಕಲ್ಲಿನಿಂದ ಜಜ್ಜಿ ಕೊಲೆ ಮಾಡಿರುವುದಾಗಿ ಮುಲ್ಕಿ‌ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು‌ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದ ನ್ಯಾಯಧೀಶರಾದ ಜಗದೀಶ್ ವಿ. ಎನ್ . ಅವರು ಆರೋಪಿ ಮುರುಗನ್ ಎಂಬಾತನಿಗೆ ಕಲಂ 302 ಪ್ರಕಾರ ಜೀವಾವಧಿ ಶಿಕ್ಷೆ ಹಾಗೂ 10,000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು