7:42 PM Thursday23 - April 2026
ಬ್ರೇಕಿಂಗ್ ನ್ಯೂಸ್
ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ… ಅಮಾನತು ಅಂತ್ಯವಲ್ಲ, ಅಬ್ದುಲ್ ಜಬ್ಬಾರ್‌ಗೆ ಇನ್ನೂ ಅವಕಾಶ ಇದೆ: ಸಚಿವ ದಿನೇಶ್ ಗುಂಡೂರಾವ್ ವರ್ಗಾವಣೆ ಆದೇಶವಿದ್ದರೂ ಪೊಲೀಸ್ ಕಮಿಷನರ್ ಕರ್ತವ್ಯದಿಂದ ಬಿಡುಗಡೆಗೊಳಿಸಿಲ್ಲ: ಮಂಗಳೂರಿನಲ್ಲಿ ಪೊಲೀಸ್ ಮಹಾ ನಿರ್ದೇಶಕ… ಕೊಡಗಿನ ಹೋಂಸ್ಟೇಯಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲೀಕ ಸೇರಿ ಇಬ್ಬರ…

ಇತ್ತೀಚಿನ ಸುದ್ದಿ

ರಾಜ್ಯ ಬಜೆಟ್ | ದಕ್ಷಿಣ ಕನ್ನಡದ ಮಾಣಿ ಹಾಗೂ ಸಜಿಪನಡು ಸೇರಿದಂತೆ ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್‌ ಠಾಣೆ

06/03/2026, 11:50

ಬೆಂಗಳೂರು(reporterkarnataka.com): ಕರ್ನಾಟಕ ಬಜೆಟ್‌ನಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ 12 ಹೊಸ ಪೊಲೀಸ್‌ ಠಾಣೆಗಳನ್ನು ನಿರ್ಮಾಣ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಈ ಮೂಲಕ ಕಾನೂನು ಸುವ್ಯವಸ್ಥೆಗೆ ಮುಂದಾಗಿದ್ದಾರೆ. ಶುಕ್ರವಾರ ವಿಧಾನಸೌಧದಲ್ಲಿ ಮಂಡಿಸಿದ ಬಜೆಟ್‌ನಲ್ಲಿ ಹೊಸ ಪೊಲೀಸ್‌ ಠಾಣೆ ಆರಂಭ ಮಾಹಿತಿ ನೀಡಲಾಗಿದೆ. 12 ಜಿಲ್ಲೆಗಳಲ್ಲಿ ಪ್ರಮುಖ ಪ್ರದೇಶಗಳಲ್ಲಿ ಈ ಪೊಲೀಸ್‌ ಠಾಣೆಗಳು ನಿರ್ಮಾಣವಾಗಲಿವೆ.

ಕ್ರ.ಸಂ. ಜಿಲ್ಲೆ ಪೊಲೀಸ್ ಠಾಣೆ
1 ದಕ್ಷಿಣ ಕನ್ನಡ: ಮಾಣಿ ಪೊಲೀಸ್ ಠಾಣೆ
2 ದಕ್ಷಿಣ ಕನ್ನಡ: ಸಜಿಪನಡು ಪೊಲೀಸ್ ಠಾಣೆ
3 ಬೆಂಗಳೂರು ಗ್ರಾಮಾಂತರ: ದೊಡ್ಡಬಳ್ಳಾಪುರ ಸಂಚಾರ ಪೊಲೀಸ್ ಠಾಣೆ
4 ಬೆಳಗಾವಿ: ಯರಗಟ್ಟಿ ಪೊಲೀಸ್ ಠಾಣೆ
5 ಯಾದಗಿರಿ : ಕಕ್ಕೇರಾ ಪೊಲೀಸ್ ಠಾಣೆ
6 ಚಿತ್ರದುರ್ಗ: ಹಿರಿಯೂರು ಸಂಚಾರ ಪೊಲೀಸ್ ಠಾಣೆ
7 ದಾವಣಗೆರೆ: ಆನಗೋಡು ಪೊಲೀಸ್ ಠಾಣೆ
8 ಹಾವೇರಿ: ತಿಳುವಳ್ಳಿ ಪೊಲೀಸ್ ಠಾಣೆ
9 ಮೈಸೂರು: ಉದಯಗಿರಿ ದಕ್ಷಿಣ ಪೊಲೀಸ್ ಠಾಣೆ
10 ವಿಜಯಪುರ: ಮುದ್ದೇಬಿಹಾಳ ಗ್ರಾಮಾಂತರ ಪೊಲೀಸ್ ಠಾಣೆ
11 ಕೋಲಾರ: ನರಸಾಪುರ ಕೈಗಾರಿಕಾ ವಲಯ ಪೊಲೀಸ್ ಠಾಣೆ
12 ಚಾಮರಾಜನಗರ: ಗುಂಡ್ಲುಪೇಟೆ ಸಂಚಾರ ಪೊಲೀಸ್ ಠಾಣೆ

*ಬಜೆಟ್‌ 2026ರಲ್ಲಿ ಗೃಹ ಹಾಗೂ ಒಳ ಆಡಳಿತ ಇಲಾಖೆಗೆ ಸಿಕ್ಕಿದ್ದೇನು:?*

ಗೃಹ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 8,000 ವಿವಿಧ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ.
ಸಿಬ್ಬಂದಿಗಳ ವಸತಿಗಾಗಿ ಪ್ರಸಕ್ತ ಸಾಲಿನಲ್ಲಿ 250 ಕೋಟಿ ರೂ. ವೆಚ್ಚದಲ್ಲಿ ವಸತಿಗೃಹಗಳ ನಿರ್ಮಾಣ ಕಾಮಗಾರಿ ಆರಂಭ. ಸುವರ್ಣ ಸೌಧದ ಬಂದೋಬಸ್ತ್ ಸಿಬ್ಬಂದಿಗಾಗಿ 20 ಕೋಟಿ ರೂ. ವೆಚ್ಚದಲ್ಲಿ 1,000 ಸಿಬ್ಬಂದಿಗೆ ವಸತಿ ಸೌಲಭ್ಯ ಕಲ್ಪಿಸಲು ಶಾಶ್ವತ ಬ್ಯಾರಕ್‌ಗಳ ನಿರ್ಮಾಣ.
ಸಂಚಾರ ದಟ್ಟಣೆ ನಿಯಂತ್ರಿಸಲು 25 ಕೋಟಿ ರೂ. ವೆಚ್ಚದಲ್ಲಿ ‘ಸಂಯೋಜಿತ ಡಿಜಿಟಲ್ ವೇದಿಕೆ’ಯನ್ನು ರೂಪಿಸಲಾಗುತ್ತದೆ.
ನಗರ ಪೊಲೀಸಿಂಗ್ ಸವಾಲುಗಳನ್ನು ಎದುರಿಸಲು ಬೆಂಗಳೂರಿನಲ್ಲಿ ಈ ನಾವೀನ್ಯತೆ ಕೇಂದ್ರವನ್ನು ಸ್ಥಾಪನೆ.
ಪೊಲೀಸ್ ಆಧುನೀಕರಣ ಯೋಜನೆಯಡಿ ಸಿಸಿಟಿವಿ, ಬಾಡಿ ವರ್ನ್ ಕ್ಯಾಮೆರಾ, ಡ್ರೋನ್ ಮುಂತಾದವುಗಳಿಗಾಗಿ ಒಟ್ಟು 354 ಕೋಟಿ ರೂ.ಗಳ ಕ್ರಿಯಾಯೋಜನೆ ರೂಪಿಸಲಾಗಿದೆ.
ಗೃಹ ಇಲಾಖೆಯ ಚಲನಶೀಲತೆ ಹೆಚ್ಚಿಸಲು 75 ಕೋಟಿ ರೂ. ವೆಚ್ಚದಲ್ಲಿ ಹೊಸ ವಾಹನಗಳನ್ನು ಒದಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು