2:29 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಎಣ್ಣೆಪ್ರಿಯರಿಗೆ ಶಾಕ್ ನೀಡಿದ ಬಜೆಟ್‌: ಮದ್ಯದ ಮೇಲೆ ಹೊಸ ರೂಪದ ತೆರಿಗೆ

06/03/2026, 15:53

ಬೆಂಗಳೂರು(reporterkarnaraka.com): 2026-27ನೇ ಸಾಲಿನ ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಮದ್ಯಪ್ರಿಯರಿಗೆ ಬಿಗ್​ ಶಾಕ್ ನೀಡಿದ್ದಾರೆ. ಮದ್ಯದ ಮೇಲೆ ಹೊಸ ರೂಪದ ತೆರಿಗೆ ವಿಧಿಸಲಾಗುವುದು ಎಂದು ಘೋಷಿಸಿದ್ದಾರೆ.
ಏಪ್ರಿಲ್ 2026ರಿಂದ ಪಾನೀಯ ಗಳಲ್ಲಿ ಇರುವ ಮದ್ಯದ ಅಂಶವನ್ನು ಆಧಾರವಾಗಿಟ್ಟುಕೊಂಡು ಅಬಕಾರಿ ಸುಂಕ ವ್ಯವಸ್ಥೆ ಜಾರಿಗೆ ತರುವ ಘೋಷಣೆ ಮಾಡಲಾಗಿದೆ.ಮದ್ಯಪಾನ ದುಷ್ಪರಿಣಾಮಗಳು, ಸಮಾಜದಲ್ಲಿ ಉಂಟು ಮಾಡುವ ಹಾನಿಯ ಕಾರಣ, ಜಾಗತಿಕ ಮಟ್ಟದಲ್ಲಿ ಮದ್ಯದ ಅಂಶವನ್ನು ಆಧರಿಸಿ ತೆರಿಗೆ ಪದ್ದತಿಯಲ್ಲಿ ಬದಲಾವಣೆ ಮಾಡಲಾಗಿದೆ. ಈ ತೆರಿಗೆ ಪದ್ದತಿಯು ಗೋಲ್ಡ್ ಸ್ಟ್ಯಾಂಡರ್ಡ್ ಆಗಿದೆ.

2026ರ ಕರ್ನಾಟಕ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳಿಗಾಗಿ ಮದ್ಯದ ಮೇಲಿನ ಅಬಕಾರಿ ಸುಂಕವನ್ನು ಏರಿಕೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಇನ್ನು ಬೆಂಗಳೂರಿನ ನಿಮ್ಹಾನ್ಸ್ ಹಾಗೂ ಧಾರವಾಡ ನಿಮ್ಹಾನ್ಸ್ ಸಂಸ್ಥೆಗಳಲ್ಲಿ ಮಾದಕ ವ್ಯಸನಿಗಳ ಪುನರ್ವಸತಿ ಕೇಂದ್ರಗಳ ಸ್ಥಾಪನೆ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ಮಾದಕ ವ್ಯಸನಕ್ಕೆ ಒಳಗಾದ 18 ವರ್ಷದೊಳಗಿನ ಮಕ್ಕಳಿಗಾಗಿ ಪ್ರಾಯೋಗಿಕವಾಗಿ ಈ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುತ್ತದೆ ಎಂದು ಘೋಷಿಸಿದ್ದಾರೆ.

ಸುಧೀರ್ಘ ಅವಧಿ ಸಿಎಂ, ಅತಿ ಹೆಚ್ಚು ಬಾರಿ ಬಜೆಟ್‌ ಮಂಡಿಸಿದ ಸಿಎಂ ಹಾಗೂ ಇದುವರೆಗಿನ ಅತಿದೊಡ್ಡ ಗಾತ್ರದ ಬಜೆಟ್‌ ಮಂಡಿಸಿದ ಸಿಎಂ ಎಂಬ ದಾಖಲೆಗಳಿಗೆ ಪಾತ್ರರಾಗಿರುವ ಸಿಎಂ ಸಿದ್ದರಾಮಯ್ಯ ಈ ಬಾರಿ ಹಲವು ಸವಾಲುಗಳ ನಡುವೆಯೂ ತಮ್ಮ ಬಜೆಟ್‌ ಮಂಡನೆಯನ್ನು ಪೂರೈಸಿದ್ದಾರೆ. ಗ್ಯಾರೆಂಟಿ ಯೋಜನೆಗಳಿಂದ ಖಜಾನೆ ದಿವಾಳಿಯಾಗುತ್ತದೆ ಎಂಬ ಆರೋಪವನ್ನು ತಳ್ಳಿ ಹಾಕಿರುವ ಸಿಎಂ ಸಿದ್ದರಾಮಯ್ಯ, ಜನರ ಆರ್ಥಿಕ ಅಭಿವೃದ್ಧಿಯನ್ನು ಅಂಕಿ ಅಂಶ ಸಹಿತ ವಿವರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ ಗೆ ಪ್ರತಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರೂ ಕಾಂಗ್ರೆಸ್‌ ಸಚಿವರು, ಶಾಸಕರು ಇದೊಂದು ಸಂಪೂರ್ಣ ತೃಪ್ತಿದಾಯಕ ಬಜೆಟ್‌ ಎಂದು ಪ್ರಶಂಸಿಸಿದ್ದಾರೆ.

ಪ್ರತಿ ಬಜೆಟ್‌ ನಲ್ಲಿಯೂ ಒಂದೊಂದು ವಿಶೇಷ ಘೋಷಣೆಗಳನ್ನು ಮಾಡಿರುವುದು ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ ಗಳ ವಿಶೇಷತೆಯಾಗಿದೆ. ಅನ್ನಭಾಗ್ಯ, ಶೈಕ್ಷಣಿಕ ಸುಧಾರಣ,ಎ ಅಸ್ಪೃಶ್ಯತೆ ನಿವಾರಣೆಗೆ ಕ್ರಮ, ಕೃಷಿಗೆ ಹೆಚ್ಚಿನ ಒತ್ತು ಮುಂತಾದವು ಸಿಎಂ ಸಿದ್ದರಾಮಯ್ಯ ಅವರ ಜನಪ್ರಿಯತೆಯನ್ನು ಹೆಚ್ಚಿಸಿದೆ.

ಈಗ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವು ಘೋಷಿಸಿರುವ ಗ್ಯಾರೆಂಟಿ ಯೋಜನೆಗಳು ಹಲವು ರಾಜ್ಯಗಳಿಗೆ ಮಾದರಿಯಾಗಿವೆ. ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು, ಬಿಹಾರ ರಾಜ್ಯಗಳಲ್ಲಿ ಹಲವು ಪಕ್ಷಗಳು ಇದೇ ರೀತಿಯ ಯೋಜನೆಗಳನ್ನು ಘೋಷಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಈ ಗ್ಯಾರೆಂಟಿ ಯೋಜನಗೆಳನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸುವುದು ಸಿಎಂ ಸಿದ್ದರಾಮಯ್ಯ ಸರ್ಕಾರದ ಉದ್ದೇಶವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು