7:56 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

06/03/2026, 17:27

ಹಾವೇರಿ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ, ಇದರಿಂದ ರಾಜ್ಯದ ಹಣಕಾಸಿನ ಮೇಲೆ ದೂರಗಾಮಿ ಬಹಳ ದೊಡ್ಡ ಪರಿಣಾಮ ಬೀರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಕಳಪೆ ಬಜೆಟ್, ಅಭಿವೃದ್ದಿ ಶೂನ್ಯ ಪ್ರಗತಿ ರಹಿತವಾದ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್, 1.32 ಲಕ್ಷ ಕೋಟಿ ಸಾಲ ಮಾಡಿ ಸುಮಾರು 25 ಸಾವಿರ ಕೋಟಿ ರೂ. ಹೊಸ ತೆರಿಗೆ ಹಾಕಿ 22 ಸಾವಿರ ಕೋಟಿ ರೂ. ಕೊರತೆ ಬಜೆಟ್ ಮಂಡನೆ ಮಾಡಿದ್ದಾರೆ. ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್. ಇದರಿಂದ ದೂರಗಾಮಿ ರಾಜದ ಹಣಕಾಸಿನ ಮೇಲೆ ಬಹಳ ದೊಡ್ಡ ಪರಿಣಾಮ ಬೀರಲಿದೆ. ರಾಜ್ಯವನ್ನು ಹತ್ತರಿಂದ 15 ವರ್ಷ ಹಿಂದೆ ತೆಗೆದುಕೊಂಡು ಹೋಗುತ್ತದೆ. ಇದರಿಂದ ನಿರಾಸೆಯಾಗಿದೆ 17 ಬಾರಿ ಬಜೆಟ್ ಮಂಡನೆ ಮಾಡಿರುವ ಸಿಎಂರಿಂದ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಹೇಳಿದರು.
ಉದಾಹರಣೆಗೆ ನೀರಾವರಿಗೆ ಕೇವಲ 22 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ 25 ಸಾವಿರ ಕೋಟಿ ರೂ. ಮೀಸಲಿಡಬೇಕಿತ್ತು. ಆದರೆ, ಯಾವುದೇ ಅನುದಾನ ಮೀಸಲಿಟ್ಟಿಲ್ಲ. ಆರೋಗ್ಯ, ಗ್ರಾಮೀಣಾಭಿವೃದ್ಧಿಗೆ ಅನುದಾನ ಕಡಿಮೆ ಇದೆ. ಇವರು ಯಾವ ರೀತಿಯ ಬಜೆಟ್ ಮಂಡನೆ ಮಾಡುತ್ತಾರೆ ಎಂದು ಪ್ರಶ್ನಿಸಿದರು

*ಒಳ ಮೀಸಲಾತಿಗಾಗಿ ಹೋರಾಟ*
ಒಳ ಮೀಸಲಾತಿ ಗೊಂದಲ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ಒಳ ಮೀಸಲಾತಿ ವಿಚಾರದಲ್ಲಿ ಸರ್ಕಾರದ ಸಚಿವರ ನಡುವೆ ಗೊಂದಲ ಇದೆ, ಹೀಗಾಗಿ ದಲಿತ ಸಮಾಜಕ್ಕೆ ಅನ್ಯಾಯ ನಡೆಯುತ್ತಿದೆ. ಒಳ ಮೀಸಲಾತಿ ಕಾನೂನು ಮಾಡಿರುವುದೇ ಸರ್ಕಾರ, ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆಗೆ ಒಪ್ಪಿಗೆ ಪಡೆದು ರಾಜ್ಯಪಾಲರ ಒಪ್ಪಿಗೆ ಪಡೆದಿದ್ದಾರೆ. ಮೀಸಲಾತಿ ಪ್ರಮಾಣವನ್ನು 17% ಪರ್ಸೆಂಟ್ ಮಾಡಿ ಈಗ ಅದನ್ನು ಕೊಡುವುದಿಲ್ಲ ಅಂದರೆ ಹೇಗೆ ? ಈ ಬಗ್ಗೆ ಅಡ್ವಕೇಟ್ ಜನರಲ್ ಅವರೇ ಅಫಿಡವಿಟ್ ಸಲ್ಲಿಸಿದ್ದಾರೆ. ಕೋರ್ಟ್ ಯಾವುದೇ ಡೈರೆಕ್ಷನ್ ಕೊಟ್ಟಲ್ಲ, ಆ ಕುಂಟು ನೆಪದಲ್ಲಿ ದಲಿತ ಸಮಾಜಕ್ಕೆ ಅನ್ಯಾಯ ಮಾಡುತ್ತಿದ್ದಾರೆ. ಇದನ್ನು ದಲಿತ ಸಮಾಜ ಸ್ಫೋಟಕವಾಗಿ ವಿರೋಧ ಮಾಡುತ್ತಿದೆ. ಕೂಡಲೇ ಸರ್ಕಾರ ಒಳ ಮೀಸಲಾತಿ ಜಾರಿ ಮಾಡದಿದ್ದರೆ ಬಿಜೆಪಿ ಕೂಡ ತೀವ್ರ ಹೋರಾಟ ಮಾಡಲಿದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು