7:39 AM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಸಂತ್ರಸ್ತೆಯ ಪರ ತಾಯಿಯಂತೆ ನಿಲ್ಲುತ್ತೇನೆ: ಪುತ್ತೂರಿನಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭರವಸೆ

07/03/2026, 13:02

ಪುತ್ತೂರು(reporterkarnataka.com): ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಪುತ್ತೂರಿನ ತಾರಿಗುಡ್ಡೆಗೆ ಭೇಟಿ ನೀಡಿ, ಮದುವೆಯಾಗುವುದಾಗಿ ನಂಬಿಸಿ ವಂಚನೆಗೊಳಗಾದ ಸಂತ್ರಸ್ತ ಯುವತಿಗೆ ಸಾಂತ್ವನ ಹೇಳಿದರು.
ಸಂತ್ರಸ್ತೆಯ ಮನೆಗೆ ತೆರಳಿದ ಡಾ. ಚೌಧರಿ, ನೊಂದ ಕುಟುಂಬದ ಅಹವಾಲನ್ನು ಆಲಿಸಿ ಅವರಿಗೆ ಧೈರ್ಯ ತುಂಬಿದರು. ಮಹಿಳಾ ಆಯೋಗವು ಯಾವಾಗಲೂ ನೊಂದ ಮಹಿಳೆಯರ ಪರವಾಗಿ ತಾಯಿಯ ಸ್ಥಾನದಲ್ಲಿ ನಿಂತು ರಕ್ಷಣೆ ನೀಡುತ್ತದೆ ಎಂದು ಅವರು ಈ ಸಂದರ್ಭದಲ್ಲಿ ಭರವಸೆ ನೀಡಿದರು.
ಸಂತ್ರಸ್ತೆಯ ಭವಿಷ್ಯದ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ಡಾ. ನಾಗಲಕ್ಷ್ಮಿ ಚೌಧರಿ, ಆಕೆಯನ್ನು ಶೈಕ್ಷಣಿಕವಾಗಿ ಮತ್ತು ಆರ್ಥಿಕವಾಗಿ ಸದೃಢಗೊಳಿಸಲು ಆಯೋಗದ ವತಿಯಿಂದ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಯುವತಿಯ ಮುಂದಿನ ಶಿಕ್ಷಣಕ್ಕೆ ಬೇಕಾದ ವ್ಯವಸ್ಥೆಗಳನ್ನು ಮಾಡಿಕೊಡುವುದಾಗಿ ಭರವಸೆ ನೀಡಿದ ಅವರು, ಸದ್ಯ ಪ್ರಕರಣವು ನ್ಯಾಯಾಲಯದ ವ್ಯಾಪ್ತಿಯಲ್ಲಿರುವುದರಿಂದ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಮಹಿಳಾ ಆಯೋಗವು ಸಂತ್ರಸ್ತೆಗೆ ನ್ಯಾಯ ಕೊಡಿಸುವಲ್ಲಿ ಪೂರ್ಣ ಪ್ರಮಾಣದಲ್ಲಿ ಬೆಂಬಲ ನೀಡಲಿದೆ ಎಂದು ಅವರು ಮಾಧ್ಯಮಗಳ ಮುಂದೆ ಹಂಚಿಕೊಂಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು