7:24 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಬಜೆಟ್ ಲೆಕ್ಕಾಚಾರ ಕುರಿತು ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಪಾಠ ಮಾಡಲಿದ್ದಾರೆ: ಸ್ಪೀಕರ್ ಯು.ಟಿ.ಖಾದರ್

07/03/2026, 21:22

ಮಂಗಳೂರು(reporterkarnataka.com): ಬಜೆಟ್ ಲೆಕ್ಕಾಚಾರದ ಕುರಿತು ವಿಧಾನ ಮಂಡಲ ಸದಸ್ಯರಿಗೆ ಇದೇ 9 ರಂದು ಬೆಂಗಳೂರಿನ ಹೋಟೆಲ್ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ನಗರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 17 ಸಲ ಬಜೆಟ್ ಮಂಡಿಸಿ ಅನುಭವ ಇರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಅನೇಕ ಶಾಸಕರಿಗೆ ಬಜೆಟ್‌ಗೆ ಸಂಪನ್ಮೂಲ ಕ್ರೋಢೀಕರಿಸುವುದು ಹೇಗೆ, ಹಣಕಾಸಿನ ವರ್ಗೀಕರಣ ಹೇಗೆ, ವಿತ್ತೀಯ ಹೊಣೆಗಾರಿಕೆ, ವಿತ್ತೀಯ ಕೊರತೆ ಎಂದರೇನು ಎಂಬ ಕುರಿತ ಸಂಪೂರ್ಣ ತಿಳಿವಳಿಕೆ ಇರುವುದಿಲ್ಲ. ನಾನು ಶಾಸಕನಾದಾಗ ಈ ಬಗ್ಗೆ ಗೊತ್ತಿರಲಿಲ್ಲ. ಈ ಕಾರ್ಯಾಗಾರದಿಂದ ಅವರು ಬಜೆಟ್ ಕುರಿತ ಚರ್ಚೆಯಲ್ಲಿ ಸಮರ್ಥವಾಗಿ ಭಾಗವಹಿಸಲು ಸಾಧ್ಯವಾಗಲಿದೆ ಎಂದರು.
‘ಇವತ್ತಿನ ಶಾಸಕರು ಭವಿಷ್ಯದಲ್ಲಿ ಹಣಕಾಸು ಸಚಿವರಾಗಬಹುದು. ಮುಖ್ಯಮಂತ್ರಿಯೂ ಆಗಬಹುದು. ಅವರು ಉತ್ತಮ ಸಂಸದೀಯ ಪಟುಗಳಾಗಿ ರೂಪುಗೊಳ್ಳಬೇಕು ಎಂಬ ಕಾರಣಕ್ಕೆ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ನಾನು ಚರ್ಚಿಸಿಯೇ ವಿಧಾನ ಮಂಡಲ ಸದಸ್ಯರಿಗಾಗಿ ಈ ಕಾರ್ಯಾಗಾರ ಹಮ್ಮಿಕೊಳ್ಳುವ ನಿರ್ಧಾರ ಕೈಗೊಂಡಿದ್ದೇವೆ. ಸೋಮವಾರ ಬಜೆಟ್ ಕಲಾಪದ ಬಳಿಕ ಸಂಜೆ 4 ರಿಂದ ವೇಳೆ ಕಾರ್ಯಾಗಾರ ನಡೆಯಲಿದೆ. ಬಜೆಟ್ ರೂಪಿಸುವ ಕುರಿತು ಉತ್ತಮ ಅನುಭವ ಹೊಂದಿರುವ ಕೆಲವು ಅಧಿಕಾರಿಗಳು, ನಿವೃತ್ತ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಣಕಾಸು ತಜ್ಞರು ಕೂಡ ಭಾಗವಹಿಸಲಿದ್ದಾರೆ. ಕಾರ್ಯಾಗಾರದಲ್ಲಿ ಭಾಗವಹಿಸುವಂತೆ ಎಲ್ಲ ಶಾಸಕರಿಗೆ ತಿಳಿಸಿದ್ದೇವೆ ಎಂದರು.
ರಾಜ್ಯದ 2026-27ನೇ‌ ಸಾಲಿನ ಬಜೆಟ್ ಕುರಿತು ಅಭಿಪ್ರಾಯ ಹಂಚಿಕೊಳ್ಳಲು ಖಾದರ್ ನಿರಾಕರಿಸಿದರು. ಸಾಲದ ಪ್ರಮಾಣ ಹೆಚ್ಚಾಗಿದೆ ಎಂಬ ಟೀಕೆಗೆ ಪ್ರತಿಕ್ರಿಯಿಸಿದ ಅವರು, ‘ಟೀಕೆಗಳು ಎಲ್ಲದಕ್ಕೂ ಬರುತ್ತವೆ. ಕೇಂದ್ರ ಬಜಟ್ ಕುರಿತೂ ಟೀಕೆಗಳು ಬಂದಿವೆ. ವಿಧಾನ ಸಭಾಧ್ಯಕ್ಷನಾಗಿ ಈ ಬಗ್ಗೆ ನಾನು ಹೇಳಿಕೆ ನೀಡುವುದು ಸರಿಯಾಗದು. ರಾಜ್ಯ ಸರ್ಕಾರದ ಬಜೆಟ್ ಕುರಿತು ವಿಧಾನಸಭೆಯಲ್ಲಿ ಅರ್ಥಪೂರ್ಣ ಚರ್ಚೆ ನಡೆಸುವಂತೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು