2:33 PM Wednesday23 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಂಟ್ವಾಳದಿಂದ ರಮಾನಾಥ ರೈ ಮತ್ತೆ ಸ್ಪರ್ಧೆ: ಮುಖ್ಯಮಂತ್ರಿ ಸಿದ್ದರಾಮಯ್ಯ

07/03/2026, 23:27

ಬಂಟ್ವಾಳ(reporterkarnatakak.com): ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿ. ರಮಾನಾಥ ರೈ ಅವರು ಬಂಟ್ವಾಳ ಕ್ಷೇತ್ರದಿಂದ ಮತ್ತೆ ಸ್ಪರ್ಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲಿನಲ್ಲಿ ಶನಿವಾರ ಆರಂಭಗೊಂಡ 15ನೇ ವರ್ಷದ “ಮೂಡೂರು-ಪಡೂರು” ಜೋಡುಕರೆ ಬಯಲು ಕಂಬಳಕೂಟದಲ್ಲಿ ಸಂಜೆ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಮಾನಾಥ ರೈಗಳ ಕ್ಷೇತ್ರಕ್ಕೆ 5 ಸಾವಿರ ಕೋಟಿ ರೂಪಾಯಿಯನ್ನು ಕಳೆದ ಅವಧಿಯಲ್ಲಿ ತರಿಸಿ ಅಭಿವೃದ್ಧಿ ಮಾಡಲಾಗಿತ್ತು. ಆದರೂ ಅವರನ್ನು ಕ್ಷೇತ್ರದ ಜನ ಸೋಲಿಸಿದರು. ಇದು ನೋವಿನ ಸಂಗತಿ, ಇನ್ನೊಂದು ಸಾರಿ ಅವರು ನಿಲ್ಲುತ್ತಾರೆ. 2028ಕ್ಕೆ ಮತ್ತೆ ಅಭ್ಯರ್ಥಿ ಆಗುತ್ತಾರೆ. ಪ್ರಾಮಾಣಿಕ ಮಂತ್ರಿಗಳಲ್ಲಿ ರಮಾನಾಥ ರೈ ಕೂಡ ಒಬ್ಬರಾಗಿದ್ದರು. ಹೀಗಾಗಿ ಅವರು ಮತ್ತೆ ಗೆಲ್ಲಬೇಕು ಎಂದ ಮುಖ್ಯಮಂತ್ರಿ 2028ಕ್ಕೂ ನಾವೇ ಅಧಿಕಾರಕ್ಕೆ ಬರುತ್ತವೆ ಎಂದು ನುಡಿದರು.
ರಾಜಕೀಯ ಪ್ರಜಾಪ್ರಭುತ್ವದ ಜತೆಯಲ್ಲಿ ಸಾಮಾಜಿಕ ಮತ್ತು ಆರ್ಥಿಕ ಪ್ರಜಾಪ್ರಭುತ್ವ ದೊರಕಿದಾಗ ಮಾತ್ರ ಸ್ವಾತಂತ್ರ್ಯದ ಪರಿಕಲ್ಪನೆ ಯಶಸ್ಸು ಕಾಣುತ್ರದೆ ಈ ಹಿನ್ನಲೆಯಲ್ಲಿ ಸಮಾಜದ ದುರ್ಬಲ ವರ್ಗವನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿದ್ದೆವೆ. ಮುಂದೆಯೇ ಮಾಡುತ್ತವೆ. ರಾಜ್ಯದ ಜನ ಕೈ ಹಿಡಿಯುತ್ತಾರೆಂಬ ವಿಶ್ವಾಸವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು