3:55 AM Tuesday22 - September 2026
ಬ್ರೇಕಿಂಗ್ ನ್ಯೂಸ್
*ರೈತರ ಬದುಕು ಉಳಿಸಲು ನಮ್ಮ ಸರ್ಕಾರ ಕೆಲಸ ಮಾಡಲಿದೆ: ಸಿಎಂ ಡಿ ಕೆ… *ರಾಜ್ಯದ ಹಿತವೇ ಸರ್ಕಾರದ ಮೊದಲ ಆದ್ಯತೆ: ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ* ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ

ಇತ್ತೀಚಿನ ಸುದ್ದಿ

ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ

09/03/2026, 15:32

ಬೆಂಗಳೂರು(reporterkarnataka.com): ನಿರ್ಮಾಣ ಹಂತದಲ್ಲಿರುವ ಅಥವಾ ಪೂರ್ಣಗೊಂಡಿರುವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರದ ಬಗ್ಗೆ ಸ್ಪಷ್ಟತೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘವು ಮಾ.11ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ರಮೇಶ್ ಹೇಳಿದ್ದಾರೆ.
ಇಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.
“ಸುಪ್ರೀಂ ಕೋರ್ಟ್ ನ ಆದೇಶದ ಅನ್ವಯ 2025 ಏಪ್ರಿಲ್‌ನಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ ಹಾಗೂ ವಿವಿಧ ಹಂತಗಳಲ್ಲಿ ನಿರ್ಮಾಣ ಹಂತದಲ್ಲಿರುವ, ಪೂರ್ಣಗೊಂಡಿರುವ ಕಟ್ಟಡಗಳಿಗೆ ಪೂರ್ಣ ಪ್ರಮಾಣ ಪತ್ರ (ಓ.ಸಿ) ಅಥವಾ ವಾಸಯೋಗ್ಯ ಪ್ರಮಾಣ ಪತ್ರ ನೀಡುವ ಕುರಿತು ಸ್ಪಷ್ಟ ಮಾರ್ಗಸೂಚಿಗಳನ್ನು ನೀಡಬೇಕು. ರಾಜ್ಯಾದ್ಯಂತ ಲಕ್ಷಾಂತರ ಗ್ರಾಹಕರು ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು, ಭೂ ಪರಿವರ್ತಿತ ಹಾಗೂ ಭೂ ಪರಿವರ್ತನೆಯಾಗದ ಪ್ರದೇಶಗಳು ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿರುವ ಸ್ಥಳಗಲ್ಲಿ ಕಟ್ಟಡ ನಿರ್ಮಾಣ ಕಾರ್ಯಗಳನ್ನು ಬ್ಯಾಂಕ್‌ಗಳಿಂದ ಸಾಲ ಪಡೆದು ವಿವಿಧ ಹಂತಗಳಲ್ಲಿ ನಡೆಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಲಯದ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಿದಲ್ಲಿ ರಾಜ್ಯದ ಲಕ್ಷಾಂತರ ನಾಗರಿಕರಿಗೆ ಆರ್ಥಿಕ, ಮಾನಸಿಕ ಮತ್ತು ಸಾಮಾಜಿಕ ಸಮಸ್ಯೆ ಎದುರಾಗುತ್ತದೆ. ಈ ಹಿನ್ನೆಲೆಯಲ್ಲಿ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದಿರುವ, ಅರ್ಜಿ ಸಲ್ಲಿಸಿರುವ, ಮಂಜೂರಾತಿ ಪಡೆದಿರುವ ಕಾರ್ಯಾದೇಶಗೊಂಡಿರುವ ಕಟ್ಟಡಗಳಿಗೆ ಸೂಕ್ತ ವಿನಾಯಿತಿ ನೀಡುವ ಮೂಲಕ ಈಗಾಗಲೇ ನಿರ್ಮಾಣಗೊಂಡಿರುವ ಕಟ್ಟಡಗಳ ಗ್ರಾಹಕರಿಗೆ ಅನುಕೂಲವಾಗುವಂತೆ ಸರಕಾರ ಕ್ರಮಕೈಗೊಳ್ಳಬೇಕೆಂದು” ಆಗ್ರಹಿಸಿದರು.
“ಯಾವ ಕಟ್ಟಡಗಳಿಗೆ ವಾಸಯೋಗ್ಯ ಪ್ರಮಾಣ ಪತ್ರ ಕಡ್ಡಾಯ ಎಂಬುದನ್ನು ಸ್ಪಷ್ಟಪಡಿಸಬೇಕು. ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಕಟ್ಟಡದ ನಕ್ಷೆಗೆ ಅನುಮೋದನೆ ಪಡೆಯದೇ ನಿರ್ಮಾಣಗೊಂಡ ಕಟ್ಟಡಗಳಿಗೆ ಸಂಬಂಧಿಸಿದ ಲಕ್ಷಾಂತರ ಅರ್ಜಿಗಳು ಬಾಕಿ ಇರುವುದರಿಂದ ಅವುಗಳನ್ನು ಒಮ್ಮೆಯ ಕ್ರಮವಾಗಿ ಪರಿಹರಿಸಲು ವಿಶೇಷ ಕಾನೂನು ರೂಪಿಸುವ ಬಗ್ಗೆ ಸಚಿವ ಸಂಪುಟದಲ್ಲಿ ತೀರ್ಮಾನ ತೆಗೆದುಕೊಳ್ಳಬೇಕು. ಎಂಎಸ್‌ಎಂಇ ಪ್ರಮಾಣ ಪತ್ರದ ಮೂಲಕ ವಿದ್ಯುತ್ ಸಂಪರ್ಕ ಪಡೆಯಲು ಅರ್ಜಿ ಸಲ್ಲಿಸುತ್ತಿದ್ದು, ಸಂಪರ್ಕ ನೀಡುವುದಕ್ಕೆ ಕೆಲ ಸಮಸ್ಯೆಗಳು ಉದ್ಭವಿಸಿದೆ. ಈ ಹಿನ್ನೆಲೆಯಲ್ಲಿ ಸೂಕ್ತ ಮಾರ್ಗಸೂಚಿಗಳನ್ನು ನೀಡಬೇಕೆಂದು” ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ವಿ.ಚಂದ್ರಬಾಬು ಒತ್ತಾಯಿಸಿದರು.
ಈ ಬಗ್ಗೆ ಶೀಘ್ರವಾಗಿ ನಿರ್ದಾರ ಕೈಗೊಳ್ಳುವಂತೆ ಒತ್ತಾಯಿಸಿ ಮಾ.11ರಂದು ಬೆಳಗ್ಗೆ 10.30ಕ್ಕೆ ಪ್ರೀಡಂ ಪಾರ್ಕ್ನಲ್ಲಿ ಬಹೃತ್ ಪ್ರತಿಭಟನೆ ನಡೆಸಲು ಸಂಘ ನಿರ್ಧರಿಸಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಆಗಮಿಸಲಿರುವ ಸದಸ್ಯರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಿ.ರಮೇಶ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು