7:37 AM Saturday17 - October 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ನಿಲ್ಲಿಸಿದ್ದ ಜಾಗದಲ್ಲೇ 2 ಎಲೆಕ್ಟ್ರಿಕ್ ಸ್ಕೂಟರ್ ಸುಟ್ಟು ಭಸ್ಮ ಮೈಸೂರು ದಸರಾ ಫಲಪುಷ್ಪ ಪ್ರದರ್ಶನ | ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಚಾಲನೆ ಬೆಂಗಳೂರು | ವಿಶ್ವ ದೃಷ್ಟಿ ದಿನದ ಅಂಗವಾಗಿ ವರ್ಲ್ಡ್ ಬ್ಲೈಂಡ್ ವಾಕ್ 2026 ಕೊಡಗು ಜಿಲ್ಲೆಯ 5 ತಾಲೂಕು ಪಂಚಾಯತ್ ವರ್ಗವಾರು ಮೀಸಲು ಪಟ್ಟಿ ಪ್ರಕಟ,: 48… ಮತದಾರರ ಹೆಸರು ತೆಗೆದುಹಾಕುವಾಗ ಅವರು ಅನುಮತಿ ಪಡೆದಿದ್ದರೇ?: ಸಿಜೆಪಿ ನಾಯಕ ಅಭಿಜೀತ್ ದಿಪ್ಕೆ ಟೈಮ್ಸ್ ಹೈಯರ್ ಎಜ್ಯುಕೇಶನ್ (THE) ವಿಶ್ವ ವಿಶ್ವವಿದ್ಯಾಲಯಗಳ ಶ್ರೇಯಾಂಕ 2027: ಗಲ್ಫ್ ಮೆಡಿಕಲ್… ಐತಿಹಾಸಿಕ ಮಂಗಳೂರು ದಸರಾ ಮಹೋತ್ಸವ 11ರಿಂದ ಆರಂಭ: 12ರಂದು ಮುಖ್ಯಮಂತ್ರಿ ಡಿ. ಕೆ.… ಫಾಸ್ಟ್‌ಟ್ಯಾಗ್‌ ಯುಗ ಅಂತ್ಯ?: ಮಲ್ಟಿ-ಲೇನ್ ಫ್ರೀ-ಫ್ಲೋ (MLFF) ಟೋಲಿಂಗ್ ವ್ಯವಸ್ಥೆ ಜಾರಿಗೆ ಸರಕಾರ… ಉಸ್ತುವಾರಿ ಸಚಿವ ಖಾದರ್ ಮಧ್ಯಸ್ಥಿಕೆ: ಎಂಆರ್‌ಪಿಎಲ್ ಅವಘಡದಲ್ಲಿ ಮೃತಪಟ್ಟ ನೌಕರನ ಕುಟುಂಬಕ್ಕೆ 1.20… ಬೆಂಗಳೂರು | ಅಕ್ಟೋಬರ್ 2ರಂದು ಪ್ರಾಜೆಕ್ಟ್ ಶೆಲ್ಟರ್‌ನಿಂದ ‘ಅಸಹಾಯಕರಿಗೆ ಸೂರು’ ಅಭಿಯಾನಕ್ಕೆ 3…

ಇತ್ತೀಚಿನ ಸುದ್ದಿ

ಆಶ್ರಯ ವಸತಿ ಹಂಚಿಕೆಯಲ್ಲಿ ಭ್ರಷ್ಟಾಚಾರ: ಗ್ರಾಮ ಸಭೆಯಲ್ಲಿ ಆಯ್ಕೆಯಾದ ಫಲಾನುಭವಿ ಹೆಸರು ಪಂಚಾಯಿತಿಯಲ್ಲಿ ಮಾಯ!!

09/03/2026, 22:48

ವಿರೂಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ ರಾಯಚೂರು

info.reporterkarnataka@gmail.com

ಮಸ್ಕಿ ಗ್ರಾಮ ಪಂಚಾಯತಿಯಲ್ಲಿ ಭಾರಿ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಆಶ್ರಯ ವಸತಿ ಯೋಜನೆಗೆ ಗ್ರಾಮ ಸಭೆಯಲ್ಲಿ ಆಯ್ಕೆಯಾದ ಫಲಾನುಭವಿಗೆ ಬಾರಿ ಮೋಸ ಮಾಡಲಾಗಿದೆ. ಫಲಾನುಭವಿಗಳ ಪಟ್ಟಿಯಲ್ಲಿ ಫಲಾನುಭವಿಯ ಹೆಸರನ್ನು ಕಿತ್ತೆಸೆದು ಆ ಜಾಗದಲ್ಲಿ ಬೇರೆ ವ್ಯಕ್ತಿಯ ಹೆಸರು ಹಾಕಲಾಗಿದೆ.
ಮಸ್ಕಿ ತಾಲೂಕಿನ ಮೆದಿಕಿನಾಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಅಂತರಗಂಗೆ ಗ್ರಾಮದಲ್ಲಿ ಗ್ರಾಮ ಸಭೆಯಲ್ಲಿ ಫಲಾನುಭವಿಗಳ ಹೆಸರು ಆಯ್ಕೆ ಮಾಡಿ ಪಟ್ಟಿ ಸಿದ್ದಪಡಿಸಲಾಯಿತು. ನಂತರ ಗ್ರಾಮಸ್ಥರಿಂದ ಸಹಿ ಕೂಡ ಪಡೆಯಲಾಗಿದೆ. ಆದರೆ, ನಂತರ ಗ್ರಾಮ ಪಂಚಾಯಿತಿಯಲ್ಲಿ ಬೇರೆಯೇ ಆಟ ನಡೆದಿದೆ. ಪಟ್ಟಿಯಲ್ಲಿ ಬದಲಾವಣೆ ಮಾಡಿ ನಿಜವಾದ ಫಲಾನುಭವಿಗೆ ಅನ್ಯಾಯ ಮಾಡಲಾಗಿದೆ.
ಗ್ರಾಮ ಸಭೆಯಲ್ಲಿ ಲಲಿತಾ ಸಾಲಿಮಠ ಅವರ ಹೆಸರು ಆಯ್ಕೆ ಮಾಡಲಾಗಿತ್ತು. ಆದರೆ ಪಂಚಾಯತಿಯಲ್ಲಿ ಆ ಹೆಸರನ್ನು ತೆಗೆದುಹಾಕಿ ಬೇರೆಯವರ ಹೆಸರನ್ನು ಹಾಕಲಾಯಿತು.
ಗ್ರಾಮದಲ್ಲಿ ಫಲಾನುಭವಿಗಳ ಮನೆ ಜಿಪಿಎಸ್ ಕಾರ್ಯಾಚರಣೆ ನಡೆಯುತ್ತಿದ್ದರೂ ಲಲಿತಾ ಸಾಲಿಮಠ ಮನೆ ಜಿಪಿಎಸ್ ಮಾಡಲು ಬರಲಿಲ್ಲ. ಗ್ರಾಮ ಪಂಚಾಯಿತಿ ಸಿಬ್ಬಂದಿ ಕೇಳಿದಾಗ ಅವರು ಏನೇನೋ ಸಾಬೂಬು ಹೇಳಿದ್ದಾರೆ. ಅಮ್ಮ ಇದರಲ್ಲಿ ನಿಮ್ಮ ಹೆಸರು ಇನ್ನೂ ಬಂದಿಲ್ಲ. ಬೇರೆಯವರಿಗೆ ಮಾತ್ರ ಬಂದಿದೆ. ನಿಮ್ಮದು ಬರಬಹುದು ನೋಡಿ ಎಂದು ಹೇಳಿದ್ದಾರೆ.


ಫಲಾನುಭವಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿದಾಗ ಇವರ ಭ್ರಷ್ಟಾಚಾರ ಬೆಳಕಿಗೆ ಬಂದಿದೆ.
ತಾಲೂಕು ಪಂಚಾಯಿತಿ ಅಧಿಕಾರಿಗಳಿಗೂ ಇದರ ಬಗ್ಗೆ ಮಾಹಿತಿ ನೀಡಿದರೂ ಏನು ಪ್ರಯೋಜನವಾಗಿಲ್ಲ. ವಿಡಿಯೋ ಫೋಟೋ ಮತ್ತು ದಾಖಲೆಗಳಿದ್ದರೂ ಅಧಿಕಾರಿಗಳು ಕ್ಯಾರಿಯನ್ನುತ್ತಿಲ್ಲ.
ಈ ಬಗ್ಗೆ ಫಲಾನುಭವಿ ನಿಗಮಕ್ಕೆ ದೂರು ನೀಡಿದ್ದಾರೆ.
ಮುಂದೇನಾಗುತ್ತೋ ಕಾದು ನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು