12:19 PM Sunday21 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

13 ದಿನಗಳ ಅವಧಿಯಲ್ಲಿ ಕಾಡಾನೆ ದಾಳಿಗೆ 3ನೇ ಬಲಿ: ಸಿದ್ಧಾಪುರದ ಕಾಫಿ ಬೆಳೆಗಾರ ದಾರುಣ ಸಾವು

12/03/2026, 20:49

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಕೊಡಗಿನಲ್ಲಿ ಕಾಡಾನೆ – ಮಾನವ ಸಂಘರ್ಷ ಅವ್ಯಾಹತವಾಗಿ ಮುಂದುವರೆದಿದ್ದು ಕಾಫಿ ಬೆಳೆಗಾರರೊಬ್ಬರು ಹತರಾಗಿದ್ದಾರೆ.
ವಿರಾಜಪೇಟೆ ತಾಲ್ಲೂಕಿನ ಹಳೇ ಸಿದ್ಧಾಪುರದ ಕಾಫಿ ಬೆಳೆಗಾರ ಚೌರಿರ ಗಣಪತಿ (ಗಪ್ಪಿ) ಎಂಬುವವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ದಿಢೀರ್ ದಾಳಿ ಮಾಡಿರುವ ಕಾಡಾನೆ ಅವರ ಜೀವವನ್ನು ಅಹುತಿ ಪಡೆದಿದೆ.
ಆ ಮೂಲಕ ಕೊಡಗಿನಲ್ಲಿ ಕೇವಲ 13 ದಿನಗಳ ಅವಧಿಯಲ್ಲಿ ಆನೆ ದಾಳಿಗೆ ಅಮಾಯಕ ಮೂರನೇ ಜೀವ ಬಲಿ ಆಗಿದೆ. ಈ ಘಟನೆ ಮಾನವ-ಪ್ರಾಣಿ ಸಂಘರ್ಷದ ತೀವ್ರತೆಯನ್ನು ಎತ್ತಿ ತೋರಿಸುತ್ತಿದ್ದು, ಅರಣ್ಯ ಇಲಾಖೆಯ ನಿರ್ಲಕ್ಷ್ಯದ ವಿರುದ್ಧ ಸಾರ್ವಜನಿಕರ ಆಕ್ರೋಶ ಹೆಚ್ಚಾಗುತ್ತಿದೆ.
ಕೆಲ ದಿನಗಳ ಹಿಂದಷ್ಟೇ ಮಡಿಕೇರಿ ತಾಲೂಕಿನ ಬೆಟ್ಟತ್ತೂರಿನಲ್ಲಿ ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಪೂಜ್ಯ ಎಂಬಾಕೆ ದಾರುಣವಾಗಿ ಬಲಿಯಾಗಿದ್ದಳು. ಆ ಘಟನೆ ನಡೆದ 10ನೇ ದಿನಕ್ಕೆ ವಾಲ್ನೂರಿನಲ್ಲಿ ಗ್ರಾಮ ಪಂಚಾಯತ್ ಮಾಜಿ ಸದಸ್ಯೆ ಕಾಡಾನೆಗೆ ಜೀವ ತೆತ್ತಿದ್ದರು.
ಇತ್ತೀಚಿನ ದಿನಗಳಲ್ಲಿ ಮಾನವ-ಪ್ರಾಣಿ ಸಂಘರ್ಷ ಹೆಚ್ಚುತ್ತಿದ್ದು, ರಾಜ್ಯದ ಹಲವೆಡೆ ಪ್ರಾಣಿ ದಾಳಿಯಿಂದ ನೂರಾರು ಮಂದಿ ಸಾಯುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಕೊಡಗು, ಮೈಸೂರು, ಚಾಮರಾಜನಗರ, ಮತ್ತು ಹಾಸನ ಜಿಲ್ಲೆಗಳಲ್ಲಿ ಕಾಡುಪ್ರಾಣಿಗಳ ಉಪಟಳ ಹೆಚ್ಚಾಗಿದ್ದು, 33 ಸಾವುಗಳೊಂದಿಗೆ ಕೊಡಗು ಜಿಲ್ಲೆ ಈ ಪಟ್ಟಿಯಲ್ಲಿ ಎರಡನೇಯ ಸ್ಥಾನ ಪಡೆದುಕೊಂಡಿದೆ. ಜಿಲ್ಲೆಯಲ್ಲಿ ಮೇಲಿಂದ ಮೇಲೆ ಕಾಡು ಪ್ರಾಣಿಗಳ ದಾಳಿಗೆ ಜನರು ಬಲಿಯಾಗುತ್ತಿದ್ದರೂ ಅರಣ್ಯ ಇಲಾಖೆ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಆರೋಪವೂ ಸಾರ್ವಜನಿಕರಿಂದ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು