11:12 PM Wednesday6 - May 2026
ಬ್ರೇಕಿಂಗ್ ನ್ಯೂಸ್
ದುಬಾರೆ | ಅರಣ್ಯ ಸಚಿವರಿಗೆ ಘೇರಾವ್ ಯತ್ನ: ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ ಪಶ್ಚಿಮ ಬಂಗಾಳದಲ್ಲಿ ನೂತನ ಸರಕಾರ ರಚನೆ: ಚುನಾವಣಾ ಆಯೋಗ ಅಧಿಸೂಚನೆ ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ…

ಇತ್ತೀಚಿನ ಸುದ್ದಿ

ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ವಿದ್ಯಾರ್ಥಿ ದಾರುಣ ಸಾವು

14/03/2026, 14:46

ಗಿರಿಧರ್ ಕೊಂಪುಳಿರ ಮಡಿಕೇರಿ

info.reporterkarnataka@gmail.com

ಹಾರಂಗಿ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ತಮಿಳುನಾಡು ಮೂಲದ ವಿದ್ಯಾರ್ಥಿಯೋರ್ವ ಉಸಿರು ಚೆಲ್ಲಿರುವ ಘಟನೆ ಇಂದು ಬೆಳಿಗ್ಗೆ ಹೇರೂರುವಿನಲ್ಲಿ ನಡೆದಿದೆ.
ತಮಿಳುನಾಡು ರಾಜ್ಯದ ನಿವಾಸಿ ಪ್ರಸ್ತುತ ಬೆಂಗಳೂರು ಕಾಲೇಜೊಂದರಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ ಸುದರ್ಶನ್ (22) ಮೃತ ದುರ್ದೈವಿ.
ಕಾಲೇಜಿನ ತಂಡ ಕೊಡಗು ಜಿಲ್ಲೆಗೆ ಪ್ರವಾಸಕ್ಕೆಂದು ಬಂದಿದ್ದು, ಇಂದು ಬೆಳಿಗ್ಗೆ ಹೇರೂರಿನಲ್ಲಿ ಹಾರಂಗಿ ಜಲಾಶಯದ ಹಿನ್ನೀರಿನ ವೀಕ್ಷಣೆಗೆ ತೆರಳಿತ್ತು.
ಈ ತಂಡದ ಪೈಕಿ ಸುದರ್ಶನ್ ನೀರಿಗೆ ಇಳಿದಿದ್ದಾನೆ. ನಂತರ ಮೇಲಕ್ಕೆ ಬರಲಾಗದೆ ದುರಂತ ಸಾವಿಗೀಡಾಗಿದ್ದಾನೆ.
ಸುಂಟಿಕೊಪ್ಪ ಠಾಣಾಧಿಕಾರಿ ಮೋಹನ್ ರಾಜ್ ಮತ್ತು ಸಿಬ್ಬಂದಿಗಳು ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದು, ಸ್ಥಳೀಯ ಮುಳುಗು ತಜ್ಞರಿಂದ ಮೃತದೇಹವನ್ನು ಹೊರಕ್ಕೆ ತೆಗೆಯಲಾಯಿತು.

ಇತ್ತೀಚಿನ ಸುದ್ದಿ

ಜಾಹೀರಾತು