8:37 PM Saturday20 - June 2026
ಬ್ರೇಕಿಂಗ್ ನ್ಯೂಸ್
Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ…

ಇತ್ತೀಚಿನ ಸುದ್ದಿ

Mangaluru | ಜೂನ್ 21ರಂದು 54ನೇ ಕೆವಿನ್ ಮಿಸ್ಕಿತ್ ಸಂಗೀತ ಕಾರ್ಯಕ್ರಮ: ಪೊಸ್ಟರ್ ಬಿಡುಗಡೆ

14/03/2026, 19:49

ಮಂಗಳೂರು(reporterkarnataka.com): ಸಮಾಜಮುಖಿ ಕಾರ್ಯಕ್ರಮಗಳಿಗೆ ಸ್ಪಂದಿಸುವ, ಮಾನಸಿಕ ಅಸ್ವಸ್ಥರಿಗೆ ಉಭಯಹಸ್ತ ನೀಡಿ ಅಶ್ರಯದಾತರಾಗಿ ಹೆಸರುವಾಸಿಯಾಗಿರುವ “ಸ್ನೇಹಾಲಯ ಚ್ಯಾರಿಟೇಬಲ್ ಸಂಸ್ಥೆ ಮಂಜೆಶ್ವರ” ಇವರ 17 ವರುಷಗಳ ಸೇವೆಯ ತನ್ನ ವಿವಿಧ ಕಾರ್ಯ ಯೋಜನೆಗಳ ಅನುಷ್ಟಾನಕ್ಕೆ ಸಹಾಯರ್ಥವಾಗಿ ಮಂಗಳೂರಿನ ಪ್ರಖ್ಯಾತ ಸಂಗೀತಗಾರ, ಯುವ ಪ್ರತಿಭೆಯಾಗಿರುವ ಕೆವಿನ್ ಮಿಸ್ಕಿತ್ ಅವರ 54ನೇ ಕೊಂಕಣಿ ಸಂಗೀತ ಸಂಜೆಯನ್ನು ಅಯೋಜಿಸಿದೆ.
ಇದೇ ಜೂನ್ 21ನೇ ಭಾನುವಾರ ಸಂಜೆ 6.00 ಘಂಟೆಗೆ ಮಂಗಳೂರಿನ ಟೌನ್ ಹಾಲ್ ಸಭಾಂಗಣದಲ್ಲಿ ಈ ಕಾರ್ಯಕ್ರಮ ನೆರವೇರಿಸಲಾಗುವುದು.


ಈ ಪ್ರಯುಕ್ತ ಪ್ರಚಾರ ಘೊಷಣೆಯ ಪೊಸ್ಟರ್ ಬಿಡುಗಡೆ ಕಾರ್ಯಕ್ರಮ ಸ್ನೇಹಾಲಯ ಸಂಸ್ಥೆಯ ಮಂಗಳೂರಿನ ಪ್ರಧಾನ ಕಚೇರಿಯಲ್ಲಿ ನೆರವೇರಿಸಲಾಯಿತು.
ಸಂಸ್ಥೆಯ ಸ್ಥಾಪಕರೂ, ಅಧ್ಯಕ್ಷರು ಆಗಿರುವ ಜೋಸೆಫ್ ಕ್ರಾಸ್ತಾ ಪೊಸ್ಟರ್ ಬಿಡುಗಡೆ ಮಾಡಿ ಸಾರ್ವಜನಿಕರ ಸಂಪೂರ್ಣ ಸಹಕಾರ ಕೋರಿದರು. ಸಮಾರಂಭದಲ್ಲಿ ಸ್ನೇಹಾಲಯದ ಹಲವು ಅಭಿಮಾನಿಗಳ ಉಪಸ್ಥಿಯಲ್ಲಿ ಶೆಲ್ಡಾನ್ ಕ್ರಾಸ್ತ, ಸಂಸ್ಥೆಯ ಕಾರ್ಯದರ್ಶಿಗಳಾದ ಒಲಿವಿಯಾ ಕ್ರಾಸ್ತಾ, ಸಂಗೀತಗಾರ ಕೆವಿನ್ ಮಿಸ್ಕಿತ್, ಸಲಹೆಗಾರರಾದ ಜಿಯೋ ಡಿ ಸಿಲ್ವ, ಅಗ್ರಾರ್, ಜಾಕ್ಸನ್ ಕಿನ್ನಿಗೋಳಿ ಹಾಗೂ ಇತರರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು