3:12 AM Sunday14 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಬಿಜೆಪಿ ಸೇರ್ಪಡೆ ಸಮಯದಲ್ಲಿ ಹಣದ ಆಫರ್ ಇಟ್ಟಿದ್ದು ನಿಜ:  ಶಾಸಕ ಶ್ರೀಮಂತ ಪಾಟೀಲ್ ಸ್ಫೋಟಕ ಮಾಹಿತಿ

11/09/2021, 21:44

ರಾಹುಲ್ ಅಥಣಿ ಬೆಳಗಾವಿ

info.reporterkarnataka.com

ಕಾಂಗ್ರೆಸ್ ಪಕ್ಷವನ್ನು ತೊರೆದು ಬಿಜೆಪಿ ಸೇರುವಾಗ ನನಗೆ ಹಣದ ಆಫರ್ ನೀಡಿದ್ದರು.ಆದರೆ ನಾನು ಯಾವುದೇ ಹಣ ಬೇಡಿಕೆ ಇಡದೆ, ಸಮಾಜದ ಸೇವೆಗೆ ನನಗೆ ಒಳ್ಳೆಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ ಎಂದು ಮಾಜಿ ಸಚಿವ ಹಾಗೂ ಕಾಗವಾಡ ಶಾಸಕ ಶ್ರೀಮಂತ್ ಪಾಟೀಲ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. 

ಅವರು ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಕಾಮಗಾರಿಯನ್ನು ಉದ್ಘಾಟಿಸಿ ಮಾದ್ಯಮ ಜತೆ ಮಾತನಾಡಿದರು.

ಬಿಜೆಪಿ ಪಕ್ಷ ಸೇರುವಾಗ ನನಗೆ ಹಣದ ಆಫರ್ ಇಟ್ಟಿದ್ದು ನಿಜ. ಆದರೆ ನಾನು ಯಾವುದೇ ಒಂದು ದುಡ್ಡನ್ನು (ಹಣ) ತೆಗೆದುಕೊಳ್ಳದೆ, ನನಗೆ ಒಳ್ಳೆಯ ಸ್ಥಾನಮಾನ ನೀಡುವಂತೆ ಕೇಳಿಕೊಂಡಿದ್ದೆ. ಅದರಂತೆ ಅವರು ನನಗೆ ಸಚಿವ ಸ್ಥಾನ ನೀಡಿದ್ದರು. ಸದ್ಯ ಸಚಿವ ಸ್ಥಾನದಿಂದ ಕೈಬಿಟ್ಟಿದ್ದಾರೆ. ಮುಂಬರುವ ದಿನದಲ್ಲಿ ಮತ್ತೆ ಸಚಿವ ಸ್ಥಾನ ಕೊಡುತ್ತಾರೆ ಎಂದು ಭರವಸೆ ಇದೆ ಎಂದು ಪಾಟೀಲ್ ಹೇಳಿದರು.

ಈಗ ಸಚಿವ ಸ್ಥಾನ ಸಿಕ್ಕಿಲ್ಲ. ಈ ವಿಚಾರದಲ್ಲಿ ಹಿರಿಯ ನಾಯಕರೊಟ್ಟಿಗೆ ಚರ್ಚೆ ಮಾಡಿದ್ದೇನೆ. ನನಗೆ ಸಚಿವ ಸ್ಥಾನ ನಿಡುವಂತೆ ಮರಾಠ ಸಮುದಾಯ ಕೂಡ ಒತ್ತಾಯ ಮಾಡುತ್ತಿದೆ. ವರಿಷ್ಠರು ಮುಂಬರುವ ಸಚಿವ ಸಂಪುಟ ವಿಸ್ತರಣೆ ಸಮಯದಲ್ಲಿ ನನಗೆ ಸಚಿವ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು