8:58 PM Tuesday17 - March 2026
ಬ್ರೇಕಿಂಗ್ ನ್ಯೂಸ್
ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ ಸ್ಪೀಕರ್‌ ಸಭಾತ್ಯಾಗ ಪ್ರಕರಣ: ಖಾದರ್ ಸಿಟ್ಟಿಗೆ 8 ಹಿರಿಯ ಐಎಎಸ್‌ ಅಧಿಕಾರಿಗಳಿಗೆ ಶೋಕಾಸ್… Mangaluru | ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಗೆ 2025 ಕೇಂದ್ರ ಸಾಹಿತ್ಯ… ಉತ್ತರಿಸದ ಸಚಿವರು: ಇದೇ ಮೊದಲ ಬಾರಿಗೆ ಸ್ಪೀಕರ್ ಸಭಾತ್ಯಾಗ; ಮೂವರು ಅಧಿಕಾರಿಗಳಿಗೆ ತಲೆದಂಡ ರಾಜ್ಯ ಉಪ ಚುನಾವಣೆ: ಬಾಗಲಕೋಟೆ, ದಾವಣಗೆರೆ ದಕ್ಷಿಣದಲ್ಲಿ ಏಪ್ರಿಲ್ 9ರಂದು ಮತದಾನ, ಮೇ… ಕಾರಿನ ಮೇಲೆ ಉರುಳಿದ ಕಟ್ಟಿಗೆ ತುಂಬಿದ ಲಾರಿ: ಮಗು ಸಹಿತ ದಂಪತಿ ಪವಾಡಸದೃಶ… ಕಲಬುರಗಿ; ಟ್ಯಾಂಕರ್ ಮೂಲಕ ನೀರು ಪೂರೈಕೆಗೆ ಕ್ರಮ: ವಿಧಾನಸಭೆಯಲ್ಲಿ ಸಚಿವ ಬೈರತಿ ಸುರೇಶ್… ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಫ್ರೀಡಂ… ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ

ಇತ್ತೀಚಿನ ಸುದ್ದಿ

ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮೂಡಬಿದ್ರೆ ಠಾಣೆ ಇನ್ಸ್ ಪೆಕ್ಟರ್ ಅಮಾನತು

17/03/2026, 20:08

ಮಂಗಳೂರು(reporterkarnataka.com): ದೂರು ನೀಡಲು ಬಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ ಹಿನ್ನೆಲೆಯಲ್ಲಿ ಮೂಡಬಿದ್ರೆ ಠಾಣೆಯ ಇನ್ಸ್ ಪೆಕ್ಟರ್ ಸಂದೇಶ್ ಅವರನ್ನು ಅಮಾನತು ಮಾಡಲಾಗಿದೆ.

ಸಂದೇಶ್ ವಿರುದ್ಧ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಕೇಳಿ ಬಂದಿತ್ತು. ಮಹಿಳೆಯನ್ನು ಬ್ಲಾಕ್ಮೇಲ್ ಮಾಡಿ ಲೈಂಗಿಕವಾಗಿ ಬಳಸಿಕೊಂಡಿದ್ದ ಇನ್ಸ್ ಪೆಕ್ಟರ್ ಸಂದೇಶ್ ಮತ್ತೊಬ್ಬ ಸಂತ್ರಸ್ತ ಮಹಿಳೆಯ ಪತಿಯನ್ನು ಪ್ರಕರಣ ವೊಂದರಲ್ಲಿ ಸಿಲುಕಿಸಿ ಆತನನ್ನು ಬಿಡುಗಡೆ ಮಾಡಲು ನನ್ನ ಜೊತೆ ಲೈಂಗಿಕವಾಗಿ ಸಹಕರಿಸಬೇಕು ಅಥವಾ 25 ಲಕ್ಷ ಕೊಡಬೇಕು ಎಂದು ಬೆದರಿಕೆ ಹಾಕಿದ್ದರು. ಲೈಂಗಿಕವಾಗಿ ಬಳಸಿಕೊಂಡಿದ್ದ ಮಹಿಳೆಯ ಅಪ್ರಾಪ್ತ ಪುತ್ರಿಯ ಮೇಲೆಯೂ ಸಂದೇಶ್ ಕಣ್ಣು ಹಾಕಿದ್ದರು ಎಂದು ಆರೋಪಿಸಲಾಗಿದೆ.
ಪ್ರಕರಣ ಬೆಳಕಿಗೆ ಬರುತ್ತಲೇ ಮಂಗಳೂರು ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಅಮಾನತುಗೊಳಿಸಿ ಅದೇಶಿಸಿದ್ದಾರೆ.
ಸಂದೇಶ್ ವಿರುದ್ಧ ತನಿಖೆಗೆ ಪೊಲೀಸ್ ಇಲಾಖೆ ಆದೇಶಿಸಿದೆ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಉತ್ತರ ಎಸಿಪಿ ಶ್ರೀಕಾಂತ್ ಗೆ ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಸೂಚನೆ ನೀಡಿದ್ದಾರೆ.
ಲೈಂಗಿಕ ಕಿರುಕುಳದ ಬಗ್ಗೆ ಇದುವರೆಗೂ ಯಾವೊಬ್ಬ ಮಹಿಳೆ ಕೂಡ ದೂರು ನೀಡಿಲ್ಲ. ಯಾರಾದರೂ ಸಂತ್ರಸ್ತೆಯರು ಇದ್ದರೆ ಈ ಬಗ್ಗೆ ದೂರು ನೀಡುವಂತೆ ಮನವಿ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು